ಬ್ರೇಕಿಂಗ್ ನ್ಯೂಸ್
15-11-23 04:54 pm Bangalore Correspondent ಕರ್ನಾಟಕ
ಬೆಂಗಳೂರು, ನ.15: ಇದೇ ಮೊದಲ ಬಾರಿಗೆ ರಾಜಧಾನಿ ಬೆಂಗಳೂರಿನಲ್ಲಿ ನಡೆಯಲಿರುವ ಬೆಂಗಳೂರು ಕಂಬಳಕ್ಕೆ ಕನಿಷ್ಠ 3 ರಿಂದ 5 ಲಕ್ಷ ಜನರು ಆಗಮಿಸುವ ನಿರೀಕ್ಷೆ ಇದ್ದು, ಅದಕ್ಕೆ ತಕ್ಕಂತೆ ತಯಾರಿ ಮಾಡಿಕೊಳ್ಳಲಾಗುತ್ತಿದೆ. ನವೆಂಬರ್ 24, 25 ಮತ್ತು 26ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳ ತಯಾರಿ ಸಲುವಾಗಿ ಬೆಂಗಳೂರಿನ ಬಂಟರ ಸಂಘದಲ್ಲಿ ಕರಾವಳಿಯ ವಿವಿಧ ಜಾತಿ - ಭಾಷಾ ಸಂಘಟನೆಗಳ ಜೊತೆ ಬೃಹತ್ ಸಮಾಲೋಚನಾ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಕಂಬಳ ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಕರಾವಳಿಯ ಸಮಸ್ತ ಸಮುದಾಯದವರು ಒಂದೆಡೆ ಒಗ್ಗಟ್ಟಾಗಿ ಸೇರುವ ಬೃಹತ್ ವೇದಿಕೆ ಇದಾಗಲಿದೆ. ಕರಾವಳಿಯ ವಿವಿಧ ಭಾಷೆ - ಜಾತಿಗಳ 50ಕ್ಕೂ ಅಧಿಕ ಸಂಘಟನೆಗಳು ತಯಾರಿ ನಡೆಸುತ್ತಿವೆ. ಬೆಂಗಳೂರು ಕಂಬಳ ಬೆಂಗಳೂರಿನ ಅರಮನೆ ಮೈದಾನದ 70 ಎಕರೆ ಜಾಗದಲ್ಲಿ ನಡೆಯಲಿದೆ. 'ಬೆಂಗಳೂರು ಕಂಬಳ ನಮ್ಮ ಕಂಬಳ' ಎಂಬ ಥೀಮ್ ಸಾಂಗ್ ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗಿದೆ. ಈ ಥೀಮ್ ಸಾಂಗ್ಗೆ ವಿ.ಮನೋಹರ್ ಸಾಹಿತ್ಯ, ಗುರುಕಿರಣ್ ಸಂಗೀತ ಸಂಯೋಜನೆ, ಮಣಿಕಾಂತ್ ಕದ್ರಿ ಪ್ರೋಗ್ರಾಮಿಂಗ್ನಲ್ಲಿ ಮೂಡಿ ಬಂದಿದೆ.
ಬೆಂಗಳೂರು ಕಂಬಳಕ್ಕೆ ಈಗಾಗಲೇ 150ಕ್ಕೂ ಅಧಿಕ ಕೋಣಗಳ ನೋಂದಣಿ ಆಗಿದ್ದು, ಆ ಎಲ್ಲ ಕೋಣಗಳನ್ನು ನವೆಂಬರ್ 23ರಂದು ಉಪ್ಪಿನಂಗಡಿಯಲ್ಲಿ ಬೀಳ್ಕೊಡುಗೆ ಮಾಡಿ ಕಳುಹಿಸಿಕೊಡಲಾಗುವುದು. ಅಷ್ಟೂ ಕೋಣಗಳನ್ನು ಹಾಸನ ಹಾಗೂ ನೆಲಮಂಗಲದಲ್ಲಿ ಅದ್ಧೂರಿಯಾಗಿ ಸ್ವಾಗತಿಸಿಕೊಳ್ಳಲಾಗುವುದು. ಅಲ್ಲದೇ ಪ್ರತಿ ತಾಲೂಕಿನಲ್ಲೂ ಸ್ವಾಗತ - ಬೀಳ್ಕೊಡುಗೆ ಇರಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ, ಶಾಸಕ ಅಶೋಕ್ ರೈ ತಿಳಿಸಿದ್ದಾರೆ.
ಬೆಂಗಳೂರು ಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 1 ಕೋಟಿ ರೂ. ಅನುದಾನ ಘೋಷಿಸಿದ್ದಾರೆ ಎಂದು ಕಂಬಳ ಸಮಿತಿ ಉಪಾಧ್ಯಕ್ಷ ಗುಣರಂಜನ್ ಶೆಟ್ಟಿ ಮಾಹಿತಿ ನೀಡಿದ್ದಾರೆ. ಬೆಂಗಳೂರು ಕಂಬಳಕ್ಕೆ ಬಾಲಿವುಡ್ ನಟಿ ಐಶ್ವರ್ಯಾ ರೈ, ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ ಸೇರಿದಂತೆ ವಿವಿಧ ಚಿತ್ರರಂಗಗಳಲ್ಲಿ ಇರುವ ಕರಾವಳಿ ಮೂಲದ ಸಿನಿಮಾತಾರೆಯರು ಆಗಮಿಸಲಿದ್ದಾರೆ ಎಂದು ಸಮಿತಿ ಸಂಘಟನಾ ಅಧ್ಯಕ್ಷ ಉಮೇಶ್ ಶೆಟ್ಟಿ ಮಾಹಿತಿ ನೀಡಿದ್ದಾರೆ.
First Kambala in Bangalore, Aishwarya Rai and Anushka Shetty to take part. The Bengaluru Carpet Committee, led by President Ashok Kumar Rai, announced the upcoming “Bengaluru Kambala-Namma Kambala” event at the palace grounds in Bangalore. The event, scheduled for the 25th and 26th, is expected to draw over 7 lakh attendees.
30-06-25 10:30 pm
HK News Desk
CM Siddaramaiah, Dk Shivakumar, CM Post: ಹೇಯ್...
30-06-25 02:55 pm
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
30-06-25 06:12 pm
Giridhar Shetty, Mangaluru
Olx Fraud, Mangalore: ಓಎಲ್ ಎಕ್ಸ್ ನಲ್ಲಿ ಕಾರು ಮ...
29-06-25 11:23 pm
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm