ಬ್ರೇಕಿಂಗ್ ನ್ಯೂಸ್
18-11-23 05:50 pm Bangalore Correspondent ಕರ್ನಾಟಕ
ಬೆಂಗಳೂರು, ನ 18: ನಟಿಯರಾದ ರಶ್ಮಿಕಾ ಮಂದಣ್ಣ, ಕತ್ರಿನಾ ಕೈಫ್, ಕಾಜೋಲ್ ಸೇರಿದಂತೆ ಅನೇಕ ಕಲಾವಿದರ ಮತ್ತು ಸಾಮಾನ್ಯ ಮಹಿಳೆಯರ ಡೀಪ್ಫೇಕ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗುತ್ತಿವೆ. ಡೀಪ್ಫೇಕ್ ಕಾಟಕ್ಕೆ ಬೇಸತ್ತ ಪ್ರತಿಯೊಬ್ಬರೂ ದುರುಳರಿಗೆ ಅತೀ ಕಠಿಣ ಶಿಕ್ಷೆ ಆಗಬೇಕು ಎಂದು ಆಗ್ರಹಿಸುತ್ತಿದ್ದಾರೆ. ಇದನ್ನು ಕೂಡಲೇ ತಡೆಗಟ್ಟಬೇಕು ಎನ್ನುವ ಆಗ್ರಹ ಕೂಡ ಮಾಡಿದ್ದರು.
ಇದೀಗ ಬೆಂಗಳೂರು ಪೊಲೀಸರು ಡೀಪ್ಫೇಕ್ ವಿರುದ್ಧ ತೊಡೆತಟ್ಟಿದ್ದಾರೆ. ಇಂತಹ ವಿಡಿಯೋಗಳಿಂದ ನೀವು ಸಂಕಷ್ಟಕ್ಕೆ ಸಿಲುಕಿದ್ದರೆ, ಸಹಾಯವಾಣಿಗೆ ಕರೆ ಮಾಡುವಂತೆ ಮನವಿ ಮಾಡಿದ್ದಾರೆ. ಕರೆ ಮಾಡಬೇಕಾದ ಹೆಲ್ಪ್ ಲೈನ್ ನಂಬರ್ ಕೂಡ ನೀಡಿದ್ದಾರೆ. ಯಾರಾದರೂ ಅಂತಹ ವಿಡಿಯೋಗಳಿಂದ ನೊಂದಿದ್ದೀರಾ? 1930 ಸಂಖ್ಯೆಗೆ ಕರೆ ಮಾಡಬಹುದು.
ಏನಿದು ಡೀಪ್ಫೇಕ್ ತಂತ್ರಜ್ಞಾನ?
ಒಬ್ಬರ ದೇಹಕ್ಕೆ ಇನ್ನೊಬ್ಬರ ತಲೆಯನ್ನು ಜೋಡಿಸಿ ಎಡಿಟಿಂಗ್ ಮಾಡುತ್ತಿದ್ದ ಫೋಟೋ, ವೀಡಿಯೋಗಳು ಸಾಮಾನ್ಯವಾಗಿದ್ದವು. ಇವು ಎಡಿಟಿಂಗ್ ಆಗಿರುವ ಫೋಟೋ/ವೀಡಿಯೋ ಎಂಬುದು ನೋಡಿದಾಕ್ಷಣ ತಿಳಿಯುತ್ತಿತ್ತು. ಇಲ್ಲವೇ ಸ್ವಲ್ಪವಾದರೂ ಅನುಮಾನ ಮೂಡುತ್ತದೆ. ಆದರೆ ಡೀಪ್ಫೇಕ್ ತಂತ್ರಜ್ಞಾನದಲ್ಲಿ ಆ ಯಾವುದೇ ಅನುಮಾನ ಬರುವುದಿಲ್ಲ. ಆ ರೀತಿ ಫೋಟೋ/ವೀಡಿಯೋ ಎಡಿಟ್ ಮಾಡಲಾಗುತ್ತದೆ. ವ್ಯಕ್ತಿಯ ದೇಹ ಮತ್ತು ಮುಖಕ್ಕೆ ಕೊಂಚವೂ ವ್ಯತ್ಯಾಸ ಇಲ್ಲದಂತೆ ವೀಡಿಯೋಗಳನ್ನ ಸೃಷ್ಟಿಸಲಾಗುತ್ತದೆ. ವೀಡಿಯೋ ನೋಡಿದರೆ ‘ಇದು ಬೇರೆ ಯಾರೂ ಅಲ್ಲ.. ಅವರೇ’ ಎನ್ನುವಷ್ಟು ನಿಖರತೆಯಿಂದ ಕೂಡಿರುತ್ತದೆ.
ಎಐ (ಕೃತಕ ಬುದ್ದಿಮತ್ತೆ) ಮಷಿನ್ ಲರ್ನಿಂಗ್ ಸಹಾಯದಿಂದ ಮಾರ್ಫಿಂಗ್ ವೀಡಿಯೋ, ಫೋಟೋ ಸೃಷ್ಟಿಸುವುದಕ್ಕೆ ಡೀಪ್ಫೇಕ್ ಎಂದು ಕರೆಯಲಾಗುತ್ತದೆ. ಒಬ್ಬ ವ್ಯಕ್ತಿಯಂತೆಯೇ ಸೇಮ್ ಟು ಸೇಮ್ ಡೂಪ್ ಸೃಷ್ಟಿಸಬಹುದು. ವೀಡಿಯೋ/ಫೋಟೋ ನೋಡಿದಾಗ ಇದು ಅಸಲಿಯೇ ಅಥವಾ ನಕಲಿಯೇ ಎಂಬುದು ತಿಳಿಯುವುದೇ ಇಲ್ಲ. ಈ ತಂತ್ರಜ್ಞಾನ ಬಳಸಿ ಯಾರನ್ನು ಬೇಕಾದರೂ ಸ್ಕ್ರೀನ್ ಮೇಲೆ ತೋರಿಸಬಹುದು. ಹಿಂದಿ, ಇಂಗ್ಲಿಷ್ ಅಷ್ಟೇ ಬರುವ ವ್ಯಕ್ತಿ ಕನ್ನಡದಲ್ಲಿ ಮಾತನಾಡಿದಂತೆಯೂ, ಹಾಡಿದಂತೆಯೂ ತೋರಿಸಬಹುದು. ಕೆಲವೊಮ್ಮೆ ಈ ತಂತ್ರಜ್ಞಾನ ಲಾಭದಾಯಕ ಎನಿಸುತ್ತದೆ. ಆದರೆ ಅಷ್ಟೇ ದುರ್ಬಳಕೆ ಕೂಡ ಆಗುತ್ತಿದೆ. ಅದಕ್ಕೆ ಉತ್ತಮ ಉದಾಹರಣೆ ರಶ್ಮಿಕಾ ಮಂದಣ್ಣ ಪ್ರಕರಣ.
ಡೀಪ್ಫೇಕ್ ಅಪರಾಧಕ್ಕೆ ಶಿಕ್ಷೆ ಏನು?
ಡೀಪ್ಫೇಕ್ ಸೈಬರ್ ಅಪರಾಧಕ್ಕೆ ಸಂಬಂಧಿಸಿದಂತೆ ಭಾರತ ಕಾನೂನಿನಲ್ಲಿ ಸ್ಪಷ್ಟವಾದ ವ್ಯಾಖ್ಯಾನ ಇಲ್ಲ. ಆದರೆ ಈ ಅಪರಾಧದ ವಿರುದ್ಧ ಇತರ ಹಲವಾರು ಕಾನೂನು ಕ್ರಮಗಳನ್ನು ಬಳಸಿಕೊಳ್ಳಬಹುದು.
ಹಿಂಜರಿಯಬೇಡಿ, ಜಾಗೃತರಾಗಿ!
— ಬೆಂಗಳೂರು ನಗರ ಪೊಲೀಸ್ BengaluruCityPolice (@BlrCityPolice) November 18, 2023
ನೀವು ಅಥವಾ ನಿಮಗೆ ತಿಳಿದಿರುವ ಯಾರಾದರೂ ಡೀಪ್ ಫೇಕ್ ಗೆ ಒಳಗಾಗಿದ್ದಲ್ಲಿ, 1930 ಗೆ ಕರೆಮಾಡಿ ಬೆಂಗಳೂರು ನಗರ ಪೊಲೀಸರನ್ನು ಸಂಪರ್ಕಿಸಿ. ಡಿಜಿಟಲ್ ವಂಚನೆಯಿಂದ ನಿಮ್ಮನ್ನು ರಕ್ಷಿಸಲು ನಾವು ನಿಮ್ಮೊಂದಿಗಿದ್ದೇವೆ#Deepfake #WeServeWeProtect pic.twitter.com/OjRvxGD5kF
Deepfake effect, Bangalore Police release helpline number for victims for help 1930.
30-06-25 10:30 pm
HK News Desk
CM Siddaramaiah, Dk Shivakumar, CM Post: ಹೇಯ್...
30-06-25 02:55 pm
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
30-06-25 06:12 pm
Giridhar Shetty, Mangaluru
Olx Fraud, Mangalore: ಓಎಲ್ ಎಕ್ಸ್ ನಲ್ಲಿ ಕಾರು ಮ...
29-06-25 11:23 pm
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm