ಬ್ರೇಕಿಂಗ್ ನ್ಯೂಸ್
23-11-23 09:38 pm Bangalore Correspondent ಕರ್ನಾಟಕ
ಬೆಂಗಳೂರು, ನ.23: ವಿಧಾನಸಭೆ ಚುನಾವಣೆಯಲ್ಲಿ ಸೋತ ಬಳಿಕ ಪಕ್ಷದ ಕೆಲಸಗಳಿಂದ ಅಂತರ ಕಾಯ್ದುಕೊಂಡಿದ್ದ ಬಿಜೆಪಿ ಹಿರಿಯ ಮುಖಂಡ ವಿ.ಸೋಮಣ್ಣ ಪಕ್ಷದ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ನೇಮಕದಿಂದ ಮುನಿಸಿಕೊಂಡಿದ್ದರು. ಆನಂತರ ಸೋಮಣ್ಣ ಕಾಂಗ್ರೆಸ್ ಸೇರುತ್ತಾರೆ ಎನ್ನುವ ಸುದ್ದಿಯೂ ಹರಿದಾಡಿತ್ತು. ಇದೀಗ ಸೋಮಣ್ಣ, ಡಿಸೆಂಬರ್ 6ರ ಬಳಿಕ ನನ್ನ ಮನಸ್ಸಿನ ಭಾವನೆ ಹೇಳುತ್ತೇನೆ ಎಂದು ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಸೋಮಣ್ಣ, ಮಾಜಿ ಸಚಿವ ಅರವಿಂದ ಲಿಂಬಾವಳಿ ಹೇಳಿಕೆಗೆ ನನ್ನ ಸಮ್ಮತಿ ಇದೆ. ನಮ್ಮ ಪಕ್ಷದಲ್ಲಿ ಒಂದು ರೀತಿ ಸೋಮನಹಳ್ಳಿಯ ಮುದುಕಿ ಕಥೆ ಆಗಿದೆ. ಡಿಸೆಂಬರ್ 6ರ ಬಳಿಕ ಎಲ್ಲವನ್ನೂ ವಿವರವಾಗಿ ಹೇಳುತ್ತೇನೆ. ಯಾವ ರೀತಿ ನನಗೆ ಹೊಡೆತ ಆಗಿದೆ ಎಂಬುದನ್ನು ವಿವರಿಸುತ್ತೇನೆ. ರಾಜಕಾರಣ ಯಾವುದೇ ಮನೆತನಕ್ಕೆ ಸಿಮೀತವಾಗಿಲ್ಲ ಎಂದು ಪರೋಕ್ಷವಾಗಿ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರಾಜಕಾರಣ ನಾಟಕ ಕಂಪನಿ ಅಲ್ಲ, ಒಳ ಒಪ್ಪಂದಕ್ಕೆ ಸಿಮೀತವಲ್ಲ. ನನ್ನನ್ನು ಯಾರು ಸಂಪರ್ಕಿಸಿಯೂ ಇಲ್ಲ, ನಾನೂ ಯಾರನ್ನೂ ಸಂಪರ್ಕಿಸಿಲ್ಲ. ಡಿಸೆಂಬರ್ 6ರ ಬಳಿಕ ನನ್ನ ಮನಸ್ಸಿನ ಭಾವನೆ ಹೇಳುತ್ತೇನೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ರಾಜ್ಯ ರಾಜಕಾರಣದಲ್ಲಿ ಸೋಮಣ್ಣ ನಡೆ ಸಂಚಲನ ಮೂಡಿಸಿದೆ.
ಹೈಕಮಾಂಡ್ ಸೂಚನೆ ಮೇರೆಗೆ ಸೋಮಣ್ಣ ಅವರು ವಿಧಾನಸಭೆ ಚುನಾವಣೆಯಲ್ಲಿ ವಿಜಯನಗರ ಕ್ಷೇತ್ರ ಬಿಟ್ಟು ಸಿದ್ದರಾಮಯ್ಯ ವಿರುದ್ಧ ವರುಣಾದಲ್ಲಿ ಸ್ಪರ್ಧಿಸಿದ್ದರು. ಅಲ್ಲದೆ, ಚಾಮರಾಜನಗರ ಕ್ಷೇತ್ರಕ್ಕೂ ಸ್ಪರ್ಧೆ ಮಾಡಿದ್ದರು. ಎರಡೂ ಕ್ಷೇತ್ರಗಳಲ್ಲಿ ಸೋಮಣ್ಣ ಸೋಲು ಕಂಡಿದ್ದರು. ಬಳಿಕ ತಮ್ಮನ್ನು ರಾಜಕೀಯವಾಗಿ ಬಲಿ ಕೊಟ್ಟರು ಎಂದು ಸ್ವಪಕ್ಷದ ನಾಯಕರ ವಿರುದ್ಧವೇ ಅಸಮಾಧಾನ ಹೇಳಿಕೊಂಡಿದ್ದರು.
Raising a banner of revolt against BJP, prominent party leader and former minister V. Somanna has announced to disclose his future plan of action after December 6. Somanna is maintaining a distance from the saffron party following his defeat in the Assembly elections earlier this year.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am