ಬ್ರೇಕಿಂಗ್ ನ್ಯೂಸ್
01-12-23 10:28 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 01: ಬಾಂಬ್ ಇಡುವವರಿಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ. ಅದರಿಂದಲೇ ರಾಜ್ಯದಲ್ಲಿ ಬಾಂಬ್ ಬೆದರಿಕೆ ಹೆಚ್ಚುತ್ತಿವೆ ಎಂದು ಬಿಜೆಪಿ ಶಾಸಕ ಎನ್ ಮುನಿರತ್ನ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಬೆಂಬಲದಿಂದಲೇ ಶಾಲೆಗಳಿಗೆ ಬಾಂಬ್ ಬೆದರಿಕೆಗಳು ಹೆಚ್ಚುತ್ತಿವೆ. ಆದರೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ನಾನು ಹೇಳುವುದಿಲ್ಲ. ಈಗ ಬಿಜೆಪಿಯ ದೊಡ್ಡ ದೊಡ್ಡ ನಾಯಕರು ಮುಸ್ಲಿಂ ಸಮುದಾಯದ ಸ್ಪೀಕರ್ ಯುಟಿ ಖಾದರ್ ಅವರಿಗೆ ನಮಸ್ಕರಿಸುತ್ತಾರೆ ಎಂಬ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಹೇಳಿಕೆ ಜನರಿಗೆ ನೋವುಂಟು ಮಾಡಿದೆ. ರಾಜ್ಯ ಸರ್ಕಾರವು ತನ್ನ ಸಚಿವರು ಜವಾಬ್ದಾರಿಯುತವಾಗಿ ಮಾತನಾಡುವಂತೆ ಸೂಚಿಸಬೇಕು ಎಂದು ಸಲಹೆ ನೀಡಿದರು.
ಸ್ಪೀಕರ್ ಕೂರುವ ಜಾಗದಲ್ಲಿ ಅಶೋಕ ಸ್ತಂಭ, ಸೂರ್ಯ, ಚಂದ್ರ ಇದೆ. ಕುರ್ಚಿಯಲ್ಲಿ ಕೂರುವ ವ್ಯಕ್ತಿಗೆ ಗೌರವ ಕೊಡ್ತೀವೋ ಇಲ್ಲವೋ ಗೊತ್ತಿಲ್ಲ. ಆ ಅಶೋಕ ಸ್ತಂಭ, ಸೂರ್ಯ, ಚಂದ್ರ ಇವುಗಳಿಗಂತೂ ಕೈ ಮುಗೀತೀವಿ. ಪೀಠಕ್ಕೆ ಇಂತಹ ಅಗೌರವ ತೋರುವ ವ್ಯಕ್ತಿಗಳಿಂದಲೇ ಬಾಂಬ್ ಬೆದರಿಕೆ ಬರ್ತಿದೆ ಎಂದು ಮುನಿರತ್ನ ಹೇಳಿದರು.
ಬೆಂಗಳೂರಿನ 30ಕ್ಕೂ ಅಧಿಕ ಶಾಲೆಗಳಿಗೆ ಬೆದರಿಕೆ ;
ಬೆಂಗಳೂರಿನ 30ಕ್ಕೂ ಅಧಿಕ ಶಾಲೆಗಳಿಗೆ ಶುಕ್ರವಾರ ಮುಂಜಾನೆ 6 ಗಂಟೆ ಮತ್ತು 9 ಗಂಟೆಯ ನಡುವೆ ಈ-ಮೇಲ್ಗಳು ಬಂದಿದ್ದು, ಅದರಲ್ಲಿ ಶಾಲೆಯ ಆವರಣದಲ್ಲಿ ಬಾಂಬ್ ಇಟ್ಟಿರುವುದಾಗಿ ಹೇಳಲಾಗಿತ್ತು. ಅಪ್ಪಟ ಉಗ್ರಗಾಮಿಗಳ ಭಾಷೆಯಲ್ಲಿರುವ ಈ ಪತ್ರದಲ್ಲಿ ಒಂದೋ ನೀವು ಮುಸ್ಲಿಂ ಧರ್ಮಕ್ಕೆ ಮತಾಂತರವಾಗಬೇಕು. ಇಲ್ಲವಾದರೆ ನಿಮ್ಮನ್ನು, ನಿಮ್ಮ ಮಕ್ಕಳನ್ನು ಕೊಲ್ಲುತ್ತೇವೆ ಎಂದು ಬೆದರಿಕೆ ಹಾಕಲಾಗಿತ್ತು. ಆದರೆ, ಯಾವುದೇ ಶಾಲೆಗಳ ಆವರಣದಲ್ಲಿ ಇದುವರೆಗೆ ಬಾಂಬ್ ಪತ್ತೆಯಾಗಿಲ್ಲ.
BJP Mla Munirathna sparks controversy on Bomb Email to schools in Bangalore about Congress. Says Congress supports terror activities.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am