ಬ್ರೇಕಿಂಗ್ ನ್ಯೂಸ್
02-12-23 10:06 pm HK News Desk ಕರ್ನಾಟಕ
ಬೀದರ್, ಡಿ.2: ಇತ್ತೀಚೆಗೆ ನಡೆದ ಪಂಚ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಮೂರು ಕಡೆಗಳಲ್ಲಿ ಜಯ ಸಾಧಿಸಲಿದೆ. ರಾಜಸ್ತಾನದಲ್ಲಿ ಫಿಪ್ಟಿ-ಫಿಪ್ಟಿ ಇದೆ. ಮುಂದಿನ ಲೋಕಸಭೆ ಚುನಾವಣೆಗೆ ಇದು ದಿಕ್ಸೂಚಿಯಾಗಲಿದೆ ಎಂದು ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು.
ಛತ್ತೀಸಗಡ, ತೆಲಂಗಾಣ, ಮಧ್ಯ ಪ್ರದೇಶದಲ್ಲಿ ನಾವು ಗೆಲುತ್ತೇವೆ. ರಾಜಸ್ತಾನದಲ್ಲಿ ಫಿಫ್ಟಿ-ಫಿಪ್ಟಿ ಇದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಹಾಗೂ ಬಿಆರ್ಎಸ್ ನಡುವೆ ನೇರ ಸ್ಪರ್ಧೆ ಇದೆ. ಪ್ರಧಾನಿ ನರೇಂದ್ರ ಮೋದಿಯವರು ಅಲ್ಲಿ ಸಾಕಷ್ಟು ಪ್ರಚಾರ ಮಾಡಿದ್ದಾರೆ. ಆದರೆ, ಅವರು ಐದಾರು ಸ್ಥಾನಗಳಲ್ಲಷ್ಟೇ ಗೆಲ್ಲಬಹುದು. ತೆಲಂಗಾಣದಲ್ಲಿ ನಮ್ಮ ಪಕ್ಷದ ಶಾಸಕರು ಆಪರೇಷನ್ ಕಮಲಕ್ಕೆ ಬಲಿಯಾಗುವುದಿಲ್ಲ ಎಂದು ಹೇಳಿದರು.
ಬರ ಪರಿಹಾರ ಬಿಡುಗಡೆ ಮಾಡಬೇಕೆಂದು ಕೇಂದ್ರಕ್ಕೆ ಪತ್ರ ಬರೆದು ಮನವಿ ಮಾಡಿದ್ದೇನೆ. ನರೇಗಾ ಯೋಜನೆಯಡಿ 100 ದಿನ ಉದ್ಯೋಗ ಕೊಡಬಹುದು. 150 ದಿನ ಉದ್ಯೋಗ ಕೊಡುವ ಯೋಚನೆ ಇದೆ. ಅದಕ್ಕೆ ಅನುಮತಿ ಕೊಡಬೇಕಾದವರು ಯಾರು? ಬರ ಅಧ್ಯಯನಕ್ಕೆ ಬಂದು ಹೋಗಿದ್ದಾರೆ. ಇದುವರೆಗೆ ಪರಿಹಾರ ಕೊಟ್ಟಿಲ್ಲ. ಬರ ಪರಿಹಾರದ ಹಣ ನಮ್ಮ ತೆರಿಗೆಯ ಹಣ. ಕೇಂದ್ರ ಸರ್ಕಾರ ಒಂದು ಪೈಸೆ ಕೊಡದಿದ್ದರೂ ರಾಜ್ಯದಿಂದ ಮೊದಲನೇ ಕಂತಿನಲ್ಲಿ ₹ 2 ಸಾವಿರ ಪರಿಹಾರ ಕೊಡಲು ತೀರ್ಮಾನಿಸಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.
ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು ನಮ್ಮ ವಿರುದ್ಧ ಆರೋಪ ಮಾಡುವುದರಲ್ಲಿ ಅರ್ಥವಿಲ್ಲ. ಕೇಂದ್ರದಲ್ಲಿ ಯಾರ ಪಕ್ಷದ ಸರ್ಕಾರವಿದೆ ಎನ್ನುವುದನ್ನು ಅಶೋಕ ಹೇಳಬೇಕು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
In the recently held elections in five states, the Congress will win three seats. There is fifty-fifty in Rajasthan. Siddaramaiah expressed hope that this will be the guiding light for the next Lok Sabha elections.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm