ಬ್ರೇಕಿಂಗ್ ನ್ಯೂಸ್
05-12-23 06:40 pm HK News Desk ಕರ್ನಾಟಕ
ಶಿವಮೊಗ್ಗ, ಡಿ.5: ನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಕಾಲೇಜಿನ ನಾಲ್ಕನೇ ಅಂತಸ್ತಿನಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ. ಶಿವಮೊಗ್ಗದ ಶರಾವತಿ ನಗರ ಬಡಾವಣೆಯ ಖಾಸಗಿ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮೇಘಶ್ರೀ(18) ಮೃತಳು. ಬೆಳಗ್ಗೆ ಕಾಲೇಜಿನಲ್ಲಿ ಜೀವಶಾಸ್ತ್ರದ ಪರೀಕ್ಷೆ ನಡೆಯುತ್ತಿತ್ತು. ಪರೀಕ್ಷೆ ನಡೆಯುವ ಮಧ್ಯೆ ಶೌಚಾಲಯಕ್ಕೆಂದು ಹೊರ ಹೋದ ವಿದ್ಯಾರ್ಥಿನಿ ಕಟ್ಟಡದ ಮೇಲಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ
ಕಟ್ಟಡದ ಮೇಲಿಂದ ಬಿದ್ದು ಗಂಭೀರ ಗಾಯಗೊಂಡ ವಿದ್ಯಾರ್ಥಿನಿಯನ್ನು ತಕ್ಷಣ ಕಾಲೇಜಿನ ಸಿಬ್ಬಂದಿಗಳು ಮೆಗ್ಗಾನ್ ಬೋಧನಾಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಆಕೆ ಮೃತಪಟ್ಟಿದ್ದಾಳೆ. ಕಾಲೇಜು ಸಿಬ್ಬಂದಿ ವಿದ್ಯಾರ್ಥಿನಿ ಮೃತಪಟ್ಟ ಬಗ್ಗೆ ತಡವಾಗಿ ವಿಷಯ ತಿಳಿಸಿದ್ದಕ್ಕೆ ಪೋಷಕರು ಕಾಲೇಜಿಗೆ ಆಗಮಿಸಿ ಆಕ್ರೋಶ ಹೊರ ಹಾಕಿದ್ದಾರೆ. ಪೋಷಕರು ಮತ್ತು ಸಂಬಂಧಿಕರು ಕಾಲೇಜಿನ ಬಳಿ ಬಂದಾಗ ಗೇಟು ತೆಗೆಯದೇ ಕಾಲೇಜಿನವರು ತಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ಬಳಿಕ ಕಾಲೇಜಿನ ಒಳಗೆ ಬಂದ ವಿದ್ಯಾರ್ಥಿನಿಯ ಪೋಷಕರು ಮತ್ತು ಸಂಬಂಧಿಕರು ಆಡಳಿತ ಮಂಡಳಿಯ ವಿರುದ್ಧ ಧಿಕ್ಕಾರ ಕೂಗಿದರು. ಈ ವೇಳೆ ಪೊಲೀಸರು ಮಧ್ಯ ಪ್ರವೇಶ ಮಾಡಿ ಪೋಷಕರ ಮನವೊಲಿಸಿ ಶಾಲೆಯಿಂದ ಹೊರಗೆ ಕರೆ ತಂದರು.
ಮೇಘಶ್ರೀ ಶಾಲಾ ಕಟ್ಟಡದಿಂದ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾಳೆ ಎಂದು ಕಾಲೇಜಿನ ಮೂಲಗಳು ತಿಳಿಸಿವೆ. ಆದರೆ ಪೋಷಕರು ಕಾಲೇಜಿನ ಉಪನ್ಯಾಸಕರ ಕಿರುಕುಳದಿಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಮೃತ ವಿದ್ಯಾರ್ಥಿನಿಯ ತಂದೆ ಓಂಕಾರಪ್ಪ, ನನಗೆ ಫೋನ್ ಮಾಡಿ ನಿಮ್ಮ ಮಗಳಿಗೆ ಸಣ್ಣ ಗಾಯವಾಗಿದೆ. ಆಸ್ಪತ್ರೆಗೆ ಬನ್ನಿ ಎಂದು ಹೇಳಿದ್ದರು. ನಂತರ ಫೋನ್ ಮಾಡಿದಾಗ ಯಾರು ಸಹ ಫೋನ್ ರಿಸೀವ್ ಮಾಡಲಿಲ್ಲ. ಕಾಲೇಜಿನಲ್ಲಿ ಮಕ್ಕಳಿಗೆ ಯಾವಾಗಲೂ ಕಿರುಕುಳ ನೀಡುತ್ತಿದ್ದರು. ಒಂದು ನಿಮಿಷ ತಡವಾಗಿ ಬಂದರೆ ಗೇಟ್ ಹೊರಗೆ ಬಿಸಿಲಿನಲ್ಲಿ ನಿಲ್ಲಿಸುತ್ತಿದ್ದರು. ಹಬ್ಬ ಅಂತ ಹೋಗಿ ಬಂದ್ರೆ, ಬೈಯುತ್ತಿದ್ದರು. ಹೀಗೆ ಕಾಲೇಜಿನವರ ಟಾರ್ಚರ್ನಿಂದಲೇ ನಮ್ಮ ಮಗಳು ಇಂದು ಸಾವನ್ನಪ್ಪಿದ್ದಾಳೆ. ಈ ಕುರಿತು ಸೂಕ್ತ ತನಿಖೆ ಆಗಬೇಕೆಂದು ಒತ್ತಾಯಿಸಿದರು.
A student of a private college in Shivamogga died after falling from the fourth floor of the college. The deceased has been identified as Meghashree (5), a 18nd PUC student of a private PU college in Sharavathi Nagar layout of Shivamogga.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm