ಬ್ರೇಕಿಂಗ್ ನ್ಯೂಸ್
17-11-20 09:49 am Bangalore Correspondent ಕರ್ನಾಟಕ
ಬೆಂಗಳೂರು, .ನ.17: ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿಯಲ್ಲಿ ದಿಢೀರ್ ಹೊತ್ತಿಕೊಂಡಿದ್ದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಬಿಬಿಎಂಪಿ ಮಾಜಿ ಮೇಯರ್, ಕಾಂಗ್ರೆಸ್ ಮುಖಂಡ ಸಂಪತ್ ರಾಜ್ ನನ್ನು ಕೊನೆಗೂ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಒಂದು ತಿಂಗಳಿಂದ ತಲೆಮರೆಸಿಕೊಂಡಿದ್ದ ಸಂಪತ್ ರಾಜ್ ಸೆರೆಗಾಗಿ ಸಿಸಿಬಿಯಿಂದ ಐದು ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು. ಮಂಗಳವಾರ ಸಂಪತ್ ರಾಜ್ ಆಪ್ತ ರಿಯಾಜುದ್ದೀನ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು ಮಾಹಿತಿ ಕಲೆಹಾಕಿದ್ದರು. ಕಳೆದ 24 ದಿನಗಳಲ್ಲಿ ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ಹಲವೆಡೆ ಸುತ್ತಾಡಿದ್ದ ಸಂಪತ್ ರಾಜ್ ಸ್ನೇಹಿತನ ಮನೆಗೆಂದು ಬಂದಿರುವುದು ಗೊತ್ತಾಗಿದ್ದು ಪೊಲೀಸರು ನಿನ್ನೆ ರಾತ್ರಿ ಕಾರ್ಯಾಚರಣೆ ನಡೆಸಿ ಬಲೆಗೆ ಕೆಡವಿದ್ದಾರೆ.

ವಿವಾದಿತ ಪೋಸ್ಟ್ ಒಂದಕ್ಕೆ ಸಂಬಂಧಿಸಿ ಆಗಸ್ಟ್ 11 ರಂದು ಬೆಂಗಳೂರಿನ ಡಿಜೆ ಹಳ್ಳಿ ಹಾಗೂ ಕೆಜೆ ಹಳ್ಳಿಯಲ್ಲಿ ಗಲಭೆ ಸೃಷ್ಟಿಯಾಗಿತ್ತು. ಏಕಾಏಕಿ ಬಂದಿದ್ದ ಸಾವುರಾರು ಮಂದಿ ಪುಲಕೇಶಿನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಹಾಗೂ ಅವರ ಸಹೋದರಿಯ ಮನೆಗೆ ದಾಳಿ ನಡೆಸಿದ್ದರು. ಡಿಜೆ ಹಳ್ಳಿ ಹಾಗೂ ಕೆಜೆ ಹಳ್ಳಿ ಪೊಲೀಸ್ ಠಾಣೆ ಮೇಲೂ ದಾಳಿ ನಡೆಸಿ ಹಾನಿಗೊಳಿಸಿದ್ದರು. ಅಲ್ಲದೆ, ಈ ವೇಳೆ ಸಾಕಷ್ಟು ವಾಹನಗಳು ಬೆಂಕಿಗೆ ಆಹುತಿಯಾಗಿದ್ದವು. ಸಾರ್ವಜನಿಕ ಆಸ್ತಿಪಾಸ್ತಿಗಳಿಗೂ ಹಾನಿಯುಂಟಾಗಿತ್ತು. ಪ್ರಕರಣ ಸಂಬಂಧ ಪೊಲೀಸರು ಈವರೆಗೂ 421 ಮಂದಿಯನ್ನು ಬಂಧನಕ್ಕೊಳಪಡಿಸಿದ್ದಾರೆ. ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮೇಲಿನ ದ್ವೇಷದಿಂದ ಮಾಜಿ ಮೇಯರ್, ಕಾಂಗ್ರೆಸ್ ಮುಖಂಡ ಸಂಪತ್ ರಾಜ್ ಗಲಭೆಗೆ ಪ್ರೇರಣೆ ನೀಡಿದ್ದ ಎಂದು ಪೊಲೀಸರು ಪತ್ತೆಮಾಡಿದ್ದು ಆರೋಪಿಯೆಂದು ಗುರುತಿಸಿ ಬಂಧಿಸಿದ್ದರು. ಆದರೆ, ಸಂಪತ್ ರಾಜ್ ಬಂಧನಕ್ಕೊಳಗಾದ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದಲ್ಲದೆ ಅಲ್ಲಿಂದ ಪರಾರಿಯಾಗಿದ್ದ. ಈ ವಿಚಾರ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರಲ್ಲಿ ಆರೋಪ - ಪ್ರತ್ಯಾರೋಪಕ್ಕೆ ಕಾರಣವಾಗಿತ್ತು.
Bengaluru Central Crime Branch police on Tuesday arrested former mayor and Congress leader R. Sampath Raj, who was wanted in Bengaluru riots case.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 04:36 pm
HK News Staffer
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm