ಬ್ರೇಕಿಂಗ್ ನ್ಯೂಸ್
06-12-23 11:28 am HK News Desk ಕರ್ನಾಟಕ
ಬೆಳಗಾವಿ, ಡಿ.6: ದೇಶದ ಸಂಪತ್ತನ್ನು ಮುಸ್ಲಿಮರಿಗೆ ಹಂಚುತ್ತೇನೆ, ನಿಮ್ಮನ್ನು (ಮುಸ್ಲಿಂ) ನಾನು ರಕ್ಷಣೆ ಮಾಡುತ್ತೇನೆ ಎಂದು ಹುಬ್ಬಳ್ಳಿಯಲ್ಲಿ ನಡೆದ ಮುಸ್ಲಿಂ ಧರ್ಮಗುರುಗಳ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿದ್ದು ಪ್ರತಿಪಕ್ಷ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಿಪ್ಪು ಅಂದ್ರೆ ಸಿದ್ದರಾಮಯ್ಯಗೆ ಬಹಳ ಪ್ರೀತಿ. ಮುಖ್ಯಮಂತ್ರಿಗಳು ಆಡಿದ ಮಾತು ದೇಶ ಮತ್ತು ರಾಜ್ಯದ ದೃಷ್ಟಿಯಿಂದ ಒಳ್ಳೆಯದಲ್ಲ. ಹಿಂದೆ ಟಿಪ್ಪು ಮೇಲೆ ಅತಿಯಾದ ಪ್ರೀತಿ ತೋರಿಸಿ ಏನಾಯಿತು? ಇವರು ಮತ್ತೆ ಹಿಂದುಗಳನ್ನು ಎರಡನೇ ದರ್ಜೆ ಪ್ರಜೆಗಳ ರೀತಿ ನೋಡುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಸುವರ್ಣ ಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎಲ್ಲರಿಗೂ ಸಮಾನತೆ ಇರಬೇಕು. ಟಿಪ್ಪು ಜಯಂತಿ, ಶಾದಿ ಭಾಗ್ಯ, ಮುಸ್ಲಿಂ ವಿವಾಹಕ್ಕೆ ಧನ ಸಹಾಯ ಈ ರೀತಿಯ ಕಾರ್ಯಕ್ರಮಗಳನ್ನ ತಂದು ಒಂದು ವರ್ಗವನ್ನು ಓಲೈಸುತ್ತಿದ್ದಾರೆ. ಮುಸ್ಲಿಮರನ್ನು ವೋಟ್ ಬ್ಯಾಂಕ್ ದಾಳವಾಗಿ ಕಾಂಗ್ರೆಸ್ ಬಳಕೆ ಮಾಡಿಕೊಳ್ಳುತ್ತಿದೆ ಎಂದರು.
ದೊಡ್ಡ ಕೋಮುವಾದಿ ಅಂದರೆ ಕಾಂಗ್ರೆಸ್ನವರು. ಸುಖದಲ್ಲಿ ತೇಲುತ್ತಿರುವ ವ್ಯಕ್ತಿ ಅಂದರೆ ಅದು ಸಿದ್ದರಾಮಯ್ಯ. ಮುಖ್ಯಮಂತ್ರಿಗಳು ಅಲ್ಪಸಂಖ್ಯಾತರು, ಬಹುಸಂಖ್ಯಾತರು ಅಂತ ಪ್ರತ್ಯೇಕಿಸೋದನ್ನು ಬಿಡಬೇಕು. ರಾಜಕೀಯ ಸಲುವಾಗಿ ಬರೀ ಮತಕ್ಕಾಗಿ ತುಷ್ಟೀಕರಣ ಮಾಡುತ್ತಿದ್ದಾರೆ. ನಮ್ಮ ಸಮಾಜದಲ್ಲಿ ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದರೆ ಅದು ಕಾಂಗ್ರೆಸ್ ಎಂದು ಬಿಜೆಪಿ ಶಾಸಕ ಡಾ.ಅಶ್ವತ್ಥ್ ನಾರಾಯಣ ಎಂದು ಕಿಡಿಕಾರಿದರು.
ಮುಸ್ಲಿಮರು ಈಗ ಹುಟ್ಟಿದ್ದಾರೆ ಅಂತ ಮುಖ್ಯಮಂತ್ರಿಗಳು ಅಂದುಕೊಂಡಿದ್ದಾರೆ. ಅವರಿಗೆ ಈ ದೇಶ ಯಾವುದೇ ಅನ್ಯಾಯ ಮಾಡಿಲ್ಲ. ನಮ್ಮ ಸರ್ಕಾರ ಇದ್ದಾಗಲೂ ಮುಸ್ಲಿಮರಿಗೆ ಸಹಾಯ ಮಾಡಿದೆ. ಸಿದ್ದರಾಮಯ್ಯ ಧರ್ಮದ ಹೆಸರಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಮುಸಲ್ಮಾನರು ನಮ್ಮ ಪಕ್ಷದಲ್ಲೂ ಇದ್ದಾರೆ. ಆದರೆ ಕಾಂಗ್ರೆಸ್ನವರು ಓಲೈಸಲು ಇಂಥ ಹೇಳಿಕೆ ನೀಡುತ್ತಿದ್ದಾರೆ ಎಂದು ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಹೇಳಿದರು.
ಮುಸ್ಲಿಮರ ಬಗ್ಗೆ ಹೇಳುವ ಇವರು, ಅವರನ್ನು ಸಿಎಂ ಮಾಡಿದ್ದಾರೆಯೇ, ಅಧ್ಯಕ್ಷರನ್ನಾಗಿ ಮಾಡಿದ್ದಾರಾ? ನ್ಯಾಯ ಕೊಡಿಡುತ್ತೇನೆ ಅಂದರೇ, ಏನು ಅನ್ಯಾಯ ಆಗಿದೆ ? ಸರ್ವರಿಗೂ ಸಮಪಾಲು, ಸಮಬಾಳು ಅಂತ ನಮ್ಮ ಅಂಬೇಡ್ಕರ್ ಹೇಳಿದ್ದಾರೆ. ಓಲೈಕೆ ಮಾಡುವ ಕೆಲಸ ಆಗಬಾರದು. ಮುಖ್ಯಮಂತ್ರಿಗಳು ಎಲ್ಲರನ್ನೂ ಸಮಾನವಾಗಿ ಕಾಣಬೇಕು ಎಂದು ಸಲಹೆ ನೀಡಿದರು.
The statements of Karnataka Chief Minister Siddaramaiah over allocating special grants to Muslims and assuring the community of protection has sparked a controversy in the state. The BJP had slammed him for resorting to appeasement politics. Former Chief Minister and senior BJP leader Basavaraj Bommai stated on Tuesday that Siddaramaiah had spoken about giving special rights to the minorities in national resources.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
04-05-25 08:49 pm
Mangalore Correspondent
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
U T Khader, Satish Kumapla, Mangalore, Suhas,...
03-05-25 10:13 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm