ಬ್ರೇಕಿಂಗ್ ನ್ಯೂಸ್
06-12-23 12:32 pm HK News Desk ಕರ್ನಾಟಕ
ಬೆಳಗಾವಿ, ಡಿ.6: ಹುಬ್ಬಳ್ಳಿಯ ಮುಸ್ಲಿಂ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ನೀಡಿರುವ ವಿವಾದಾತ್ಮಕ ಹೇಳಿಕೆಯ ಬಗ್ಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರೆಬಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮುಖ್ಯಮಂತ್ರಿ ಸಿದ್ದರಾಮಯ್ಯ ಐಸಿಸ್ ಉಗ್ರರ ಜೊತೆಗೆ ಸಂಪರ್ಕದಲ್ಲಿರುವ ವ್ಯಕ್ತಿಯ ಜೊತೆಗೆ ಕುಳಿತಿದ್ದರು ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಮುಸ್ಲಿಂ ಸಮಾವೇಶದಲ್ಲಿ ಐಸಿಸ್ ಸಂಘಟನೆ ಜೊತೆ ಸಂಪರ್ಕ ಹೊಂದಿರುವ ವ್ಯಕ್ತಿ ಸಿಎಂ ಪಕ್ಕದಲ್ಲಿಯೇ ಕುಳಿತಿದ್ದನು. ಈ ಬಗ್ಗೆ ಮುಖ್ಯಮಂತ್ರಿಗೆ ಮಾಹಿತಿ ಇರಲಿಲ್ಲ ಯಾಕೆ ಎಂದು ಯತ್ನಾಳ್ ಪ್ರಶ್ನೆ ಮಾಡಿದ್ದಾರೆ.
ಈ ಕುರಿತು ಮಾಹಿತಿ ಪಡೆದ ನಂತರವೇ ಈ ಹೇಳಿಕೆಯನ್ನು ನೀಡುತ್ತಿದ್ದೇನೆ. ಇದು ಹುಡುಗಾಟಿಕೆಯ ಮಾತಲ್ಲ. ಬೇಕಾದ್ರೆ ಮಾಹಿತಿ ತರಿಸಿಕೊಂಡು ಪರಿಶೀಲಿಸಲಿ. ನಾನೇ ಇನ್ನೊಂದು ವಾರದಲ್ಲಿ ಈ ಕುರಿತು ಎಲ್ಲ ಮಾಹಿತಿ ನೀಡುತ್ತೇನೆ ಎಂದು ಯತ್ನಾಳ್ ಹೇಳಿದ್ದಾರೆ.
ವಾಟ್ ಈಸ್ ರಾಂಗ್ ಇನ್.. ಸಿದ್ದು ಪ್ರಶ್ನೆ
ದೇಶದ ಸಂಪತ್ತನ್ನು ಮುಸ್ಲಿಮರಿಗೆ ಹಂಚುತ್ತೇನೆ, ನಿಮ್ಮನ್ನು (ಮುಸ್ಲಿಂ) ನಾನು ರಕ್ಷಣೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಸ್ಲಿಂ ಸಮಾವೇಶದಲ್ಲಿ ಹೇಳಿಕೆ ನೀಡಿದ್ದರು. ಈ ಕುರಿತು ಮಂಗಳವಾರ ಬೆಳಗಾವಿಯ ಸುವರ್ಣ ಸೌಧದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದ ಅವರು, ಈ ಬಗ್ಗೆ ಒಂದು ಪತ್ರಿಕೆ ಮಾತ್ರ ನಾನು ಹೇಳಿದ್ದನ್ನು ಸರಿಯಾಗಿ ಬರೆದಿದೆ. ಅದನ್ನು ಬಿಟ್ಟು ಬೇರೆ ರೀತಿ ಅರ್ಥ ಕಲ್ಪಿಸಿಕೊಂಡು ಹೇಳಿದರೆ ಏನು ಮಾಡುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ನಾನು ಹೇಳಿದ್ದರಲ್ಲಿ ವಾಟ್ ಇಸ್ ರಾಂಗ್ ಇದೆ, ಮುಸ್ಲಿಮರು ಸೇರಿ ಎಲ್ಲರನ್ನೂ ರಕ್ಷಣೆ ಮಾಡುತ್ತೇವೆಂದು ನಾನು ಹೇಳಿದ್ದೇನೆ. ಅದನ್ನು ಬೇರೆ ರೀತಿ ಅರ್ಥ ಕಲ್ಪಿಸಿಕೊಂಡು ಹೇಳಿದರೆ ಏನು ಮಾಡೋದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Senior BJP leader and Vijayapura MLA Basanagouda Patil Yatnal on Wednesday made serious allegations against Karnataka Chief Minister Siddaramaiah and accused him of sharing a stage in Hubballi with a Maulvi who allegedly has links with the Islamic State of Iraq and Syria (ISIS). He also said that he would bring it to the notice of central leaders demanding action.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm