ಬ್ರೇಕಿಂಗ್ ನ್ಯೂಸ್
11-12-23 01:00 pm HK News Desk ಕರ್ನಾಟಕ
ಬೆಳಗಾವಿ, ಡಿ 11: ತಾಲೂಕಿನ ವಂಚಮೂರಿ ಗ್ರಾಮದ ಯುವಕ-ಯುವತಿ ಪ್ರೀತಿಸಿ ಓಡಿ ಹೋಗಿದ್ದಕ್ಕೆ ರೊಚ್ಚಿಗೆದ್ದ ಯುವತಿ ಕಡೆಯವರು, ಯುವಕನ ತಾಯಿಯನ್ನು ಅರೆಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಅಮಾನವೀಯವಾಗಿ ಹಲ್ಲೆ ನಡೆಸಿದ ಘಟನೆ ಸೋಮವಾರ ಬೆಳಗಿನ ಜಾವ ನಡೆದಿದೆ.
ವಂಟಮೂರಿ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿದ್ದು, ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಇಡೀ ಸರ್ಕಾರವೇ ಬೆಳಗಾವಿಯಲ್ಲಿ ಇರುವ ಸಂದರ್ಭದಲ್ಲಿ ಮಹಿಳೆ ಮೇಲೆ ಈ ರೀತಿಯಾಗಿ ಅಮಾನುಷ ಹಲ್ಲೆ ಆಗಿರುವುದು ಎಲ್ಲೆಡೆ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ.
ಯುವತಿಯ ನಿಶ್ಚಿತಾರ್ಥ ಸೋಮವಾರ ಡಿ. 11ರಂದು ನಿಗದಿ ಆಗಿತ್ತು. ಈಕೆಯನ್ನು ಇದೇ ಗ್ರಾಮದ ಯುವಕ ಪ್ರೀತಿಸುತ್ತಿದ್ದನು. ಇಬ್ಬರೂ ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಸೋಮವಾರ ಬೆಳಗಿನ ಜಾವ ಯುವಕ ತನ್ನ ಪ್ರೇಯಸಿಯನ್ನು ಓಡಿಸಿಕೊಂಡು ಹೋಗಿದ್ದಾನೆ. ಇದರಿಂದ ರೊಚ್ಚಿಗೆದ್ದ ಯುವತಿ ಕುಟುಂಬಸ್ಥರು ಯುವಕನ ತಾಯಿ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ನಂತರ ಮೆರವಣಿಗೆ ನಡೆಸಿ ಅಲ್ಲಿಯೇ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದಾರೆ. ಮನೆಯನ್ನೂ ಸಂಪೂರ್ಣವಾಗಿ ಧ್ವಂಸಗೊಳಿಸಿದ್ದು, ಮನೆಯಲ್ಲಿದ್ದ ವಸ್ತುಗಳನ್ನು ಹಾನಿ ಮಾಡಿದ್ದಾರೆ. ಮನೆ ಬಾಗಿಲು, ಕಿಟಕಿ ಮುರಿದಿದ್ದಾರೆ ಎಂದಿ ತಿಳಿದು ಬಂದಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಹಲ್ಲೆ ನಡೆಸಿದ ಏಳು ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ಕಾಕತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Enraged over the elopement of a man and his wife from Vanchamuri village in Belagavi taluk, the girl's family allegedly stripped her naked and tied her to a pole and brutally assaulted her in the wee hours of Monday( December 11).
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am