ಬ್ರೇಕಿಂಗ್ ನ್ಯೂಸ್
18-12-23 03:12 pm HK News Desk ಕರ್ನಾಟಕ
ಕುಶಾಲನಗರ, ಡಿ.18: ರಾಜ್ಯದಲ್ಲಿ ಕೊರೊನಾ ರೂಪಾಂತರಿ ತಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ 60 ವರ್ಷದ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಕೊಡಗಿನ ಕುಶಾಲ ನಗರದಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಕೋವಿಡ್ ವಿಚಾರವಾಗಿ ಇಲಾಖೆಯಿಂದ ಇಂದು ಮಾರ್ಗಸೂಚಿ ಹೊರಡಿಸಲಾಗುವುದು ಎಂದು ತಿಳಿಸಿದರು.
ಕೊರೊನಾ ರೂಪಾಂತರಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ. ಮುನ್ನೆಚ್ಚರಿಕೆ ಕ್ರಮಗಳನ್ನ ತೆಗೆದುಕೊಳ್ಳುವ ನಿಟ್ಟಿನಲ್ಲಿ ಈಗಾಗಲೇ ನಾನು ಒಂದು ಸುತ್ತಿನ ಸಭೆಯನ್ನ ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ನಡೆಸಿದ್ದೇನೆ. ಅಲ್ಲದೆ, ಡಾ. ರವಿ ಅವರ ನೇತೃತ್ವದ ತಾಂತ್ರಿಕ ಸಲಹಾ ಸಮಿತಿ ಕೂಡ ನಿನ್ನೆಯೇ ಸಭೆ ನಡೆಸಿ ಕೆಲವು ಸಲಹೆಗಳನ್ನ ನೀಡಿದ್ದಾರೆ. 60 ವರ್ಷ ಮೇಲ್ಪಟ್ಟವರು ಹಾಗೂ ಹೃದಯ ಸಂಬಂಧಿ ಕಾಯಿಲೆ ಹೊಂದಿದವರು, ಉಸಿರಾಟದ ಸಮಸ್ಯೆ ಇರುವವರಿಗೆ ಮಾಸ್ಕ್ ಕಡ್ಡಾಯಗೊಳಿಸುವಂತೆ ಸಮಿತಿಯವರು ಸಲಹೆ ನೀಡಿದ್ದಾರೆ. ಸಮಿತಿಯ ಸಲಹೆಗಳನ್ನ ಆಧರಿಸಿ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಹೆಚ್ಚು ಟೆಸ್ಟಿಂಗ್ ಮಾಡುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ರಾಜ್ಯದ ಎಲ್ಲಾ ಆಸ್ಪತ್ರೆಗಳನ್ನ ಸನ್ನದ್ಧ ಸ್ಥಿತಿಯಲ್ಲಿರಲು ಸೂಚಿಸಲಾಗಿದೆ.
ಅಗತ್ಯವಿರುವ ಬೆಡ್, ಪಿಪಿಇ ಕಿಟ್, ಆಕ್ಸಿಜನ್ ಸನ್ನದ್ದ ಸ್ಥಿತಿಯಲ್ಲಿ ಇರಿಸಿಕೊಳ್ಳಲು ಎಲ್ಲ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ತಿಳಿಸಲಾಗಿದೆ. ಕೇರಳ ಗಡಿ ಜಿಲ್ಲೆಗಳಲ್ಲಿ ಹೆಚ್ಚು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.
ಶೀತ, ಜ್ವರ ಕೆಮ್ಮು ಇರುವವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕು. ಹೆಚ್ಚು ಪಾಸಿಟಿವ್ ಬಂದರೆ ಮಾತ್ರ ಸಾರ್ವಜನಿಕ ಸ್ಥಳಗಳಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನ ಕೈಗೊಳ್ಳುವುದು ಅನಿವಾರ್ಯವಾಗಲಿದೆ. ಸದ್ಯಕ್ಕೆ ಅಂತಹ ಪರಿಸ್ಥಿತಿ ಇಲ್ಲ, ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
Health Minister Dinesh Gundu Rao has said that masks have been made mandatory for those above 60 years of age in the wake of the detection of covid-19 variant in the state.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am