ಬ್ರೇಕಿಂಗ್ ನ್ಯೂಸ್
26-12-23 06:55 pm HK News Desk ಕರ್ನಾಟಕ
ಮೈಸೂರು, ಡಿ.26: ಮಂಡ್ಯದಲ್ಲಿ ನಡೆದ ಹನುಮ ಸಂಕೀರ್ತನಾ ಯಾತ್ರೆಯಲ್ಲಿ ಮುಸ್ಲಿಂ ಮಹಿಳೆಯರ ಬಗ್ಗೆ ಕೀಳಾಗಿ ಮಾತನಾಡಿದ್ದ ಆರೆಸ್ಲೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ನಜ್ಮಾ ನಜೀರ್ ಅವರು ತಮ್ಮ ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಕೀಳು ಮಟ್ಟದ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದರು. ಇದರಂತೆ, ಪೊಲೀಸರು ಸೆಕ್ಷನ್ 354, 294, 509, 506, 153(2), 295, 295 (5), 298 ಅಡಿ ಪ್ರಕರಣ ದಾಖಲಿಸಿದ್ದಾರೆ. ದೂರಿನಲ್ಲಿ ಡಿ.24 ರಂದು ಶ್ರೀರಂಗಪಟ್ಟಣದಲ್ಲಿ ಹಿಂದು ಜಾಗರಣಾ ವೇದಿಕೆ ವತಿಯಿಂದ ಹನುಮ ಜಯಂತಿ ಆಂಗವಾಗಿ ಆಯೋಜಿಸಿದ್ದ ಹನುಮಮಾಲೆ ಸಂಕೀರ್ತನಾ ಯಾತ್ರೆ ಸಮಾರಂಭದಲ್ಲಿ ಮಾತನಾಡಿರುವ ಕಲ್ಲಡ್ಕ ಪ್ರಭಾಕರ ಭಟ್ “ಮುಸ್ಲಿಂ ಮಹಿಳೆಯರಿಗೆ ದಿನಕ್ಕೆ ಒಬ್ಬ ಗಂಡ. ಅವರಿಗೆ ಪರ್ಮೆನೆಂಟ್ ಗಂಡ ಇರಲಿಲ್ಲ. ಪರ್ಮೆನೆಂಟ್ ಗಂಡನನ್ನ ಕೊಟ್ಟಿದ್ದು ಮೋದಿ ಸರ್ಕಾರ. ಮುಸ್ಲಿಂ ಯುವಕರು ಮಾತ್ರ ಅಲ್ಲ. ಮುಸ್ಲಿಂ ಯುವತಿಯರು ಮೋಸ ಮಾಡುತ್ತಿದ್ದಾರೆ. ಹಿಂದೂ ಯುವಕ ಯುವತಿಯರನ್ನ ಲವ್ ಜಿಹಾದ್ ಮಾಡುತ್ತಿದ್ದಾರೆ. ನಿಮ್ಮಲ್ಲಿ ಯುವತಿ, ಯುವಕರು ಇಲ್ಲವೇ? ಎಂದು ಹೇಳಿಕೆ ನೀಡಿದ್ದರು, ಆಮೂಲಕ ಮುಸ್ಲಿಂ ಮಹಿಳೆಯರನ್ನು ಕೀಳಾಗಿ ಚಿತ್ರಿಸಿದ್ದಾರೆ. ಅವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಪೊಲೀಸರಿಗೆ ದೂರು ನೀಡಿದ್ದರು.
ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮಂಗಳೂರು, ಪುತ್ತೂರು ಸೇರಿದಂತೆ ಹಲವು ಕಡೆಗಳಲ್ಲಿ ಮುಸ್ಲಿಂ ಮುಖಂಡರು ಪೊಲೀಸರಿಗೆ ದೂರು ನೀಡಿದ್ದಾರೆ.
An FIR has been registered against RSS leader Kalladka Prabhakar Bhat at Srirangapatna Town police station in Mandya district of Karnataka for comments allegedly insulting women and promoting religious enmity.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm