ಬ್ರೇಕಿಂಗ್ ನ್ಯೂಸ್
02-01-24 03:19 pm HK News Desk ಕರ್ನಾಟಕ
ಹಾಸನ, ಜ.2: ಮನೆಯ ಕಿಟಕಿ, ಬಾಗಿಲುಗಳನ್ನು ಮುಚ್ಚಿ ಮನೆಯಲ್ಲಿ ವಿಷಾನಿಲ ತುಂಬಿಸಿ ತನ್ನ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಹಾಸನ ನಗರದ ದಾಸರಕೊಪ್ಪಲಿನಲ್ಲಿ ಬೆಳಕಿಗೆ ಬಂದಿದೆ.
ತುಮಕೂರಿನ ಬೇಕರಿಯಲ್ಲಿ ಕೆಲಸ ಮಾಡುವ ಹಾಸನ ತಾಲೂಕು ಸೀಗೆ ಗ್ರಾಮದ ತೀರ್ಥ ಎಂಬವರ ಪತ್ನಿ ಶಿವಮ್ಮ (36), ಮಕ್ಕಳಾದ ಸಿಂಚು (7) ಪವನ (10) ಸಾವಿಗೆ ಶರಣಾದ ದುರ್ದೈವಿಗಳು. ಸೋಮವಾರ ಸಂಜೆ ಪತ್ನಿಗೆ ದೂರವಾಣಿ ಕರೆ ಮಾಡಿದ್ದ ಪತಿ ತೀರ್ಥ ತಾನು ಹಾಸನಕ್ಕೆ ಬರುತ್ತಿದ್ದು ರಾತ್ರಿ ಊಟಕ್ಕೆ ಅಡುಗೆ ಸಿದ್ಧಪಡಿಸಲು ಹೇಳಿದ್ದರು. ಆದರೆ ರಾತ್ರಿ ತಡವಾಗಿ ಬಂದ ಆತ ಬಾಗಿಲು ತಟ್ಟಿದಾಗ ಪತ್ನಿ ಬಾಗಿಲು ತೆರೆಯಲಿಲ್ಲ. ಫೋನ್ ಕರೆಯನ್ನೂ ಸ್ವೀಕರಿಸಲಿಲ್ಲ. ಆಕೆ ನಿದ್ರೆ ಹೋಗಿರಬಹುದು ಎಂದು ಭಾವಿಸಿದ ಪತಿ ಮನೆಯ ಮೇಲ್ಛಾವಣಿಗೆ ಹೋಗಿ ಮಲಗಿದ್ದರು.
ಬೆಳಗ್ಗೆ ಮತ್ತೆ ಬಾಗಿಲು ಬಡಿದರೂ ಬಾಗಿಲು ತೆಗೆಯಲಿಲ್ಲ. ಫೋನ್ ಕರೆ ಮಾಡಿದರೂ ಪ್ರತಿಕ್ರಿಯೆ ಬಾರದ್ದರಿಂದ ಅನುಮಾನಗೊಂಡು ಮನೆ ಮಾಲೀಕರ ನೆರವಿನಲ್ಲಿ ಬಾಗಿಲು ತೆರೆದಿದ್ದಾರೆ. ಮನೆಯ ಒಳಗೆ ಗಾಢವಾದ ಎಲ್ಪಿಜಿ ಗ್ಯಾಸ್ ವಾಸನೆ ತುಂಬಿತ್ತು. ಮನೆಯ ಒಳ ಹೋದಾಗ ನೆಲದ ಮೇಲೆ ಕುಳಿತ ತಾಯಿಯ ಕಾಲುಗಳ ಮೇಲೆ ಇಬ್ಬರು ಮಕ್ಕಳೂ ಮಲಗಿದಲ್ಲೇ ಪ್ರಾಣ ಕಳೆದುಕೊಂಡಿದ್ದರು.
ಹಾಸನದ ಪೆನ್ಷನ್ ಮೊಹಲ್ಲಾ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
In a tragic incident, a mother committed suicide along with her two children by filling poisonous gas inside her house by keeping the windows and doors of her house closed on Tuesday morning. The deceased have been identified as Shivamma (36), wife of Theertha of Seege village in Hassan taluk and her children Sinchu (7) and Pavana (10).
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am