ಬ್ರೇಕಿಂಗ್ ನ್ಯೂಸ್
03-01-24 09:23 pm HK News Desk ಕರ್ನಾಟಕ
ಹುಬ್ಬಳ್ಳಿ, ಜ.3: ಹುಬ್ಬಳ್ಳಿ ಪೊಲೀಸರು 30 ವರ್ಷ ಹಳೆಯ ಪ್ರಕರಣದಲ್ಲಿ ಅಯೋಧ್ಯೆ ಕರಸೇವಕರನ್ನು ಬಂಧಿಸಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಪೋಲಿಸ್ ಠಾಣೆಗೆ ಮುತ್ತಿಗೆ ಹಾಕಿ ನುಗ್ಗಲು ಯತ್ನಿಸಿದ ಘಟನೆ ನಡೆದಿದ್ದು ಪೊಲೀಸರು ಮುಂಜಾಗ್ರತಾ ಕ್ರಮವಾಗಿ ವಿಪಕ್ಷ ನಾಯಕ ಆರ್. ಅಶೋಕ್, ಶಾಸಕರಾದ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ, ಎಂ.ಆರ್ ಪಾಟೀಲ್ ಸೇರಿದಂತೆ 150 ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಿದ್ದಾರೆ.
1992 ರಲ್ಲಿ ಬಾಬರಿ ಮಸೀದಿ ಧ್ವಂಸ ಸಂದರ್ಭದಲ್ಲಿ ಉಂಟಾದ ಗಲಭೆ ಘಟನೆಯ ಆರೋಪಿ ಶ್ರೀಕಾಂತ್ ಪೂಜಾರಿ ಎಂಬವರನ್ನು ಪೊಲೀಸರು ಎರಡು ದಿನಗಳ ಹಿಂದೆ ಬಂಧಿಸಿದ್ದರು. 31 ವರ್ಷಗಳ ಹಿಂದಿನ ಪ್ರಕರಣದಲ್ಲಿ ಹುಬ್ಬಳ್ಳಿ ನಗರ ಪೊಲೀಸರು ವಾರಂಟ್ ಇದೆಯೆಂದು ಹೇಳಿ ಬಂಧಿಸಿರುವುದು ಸೇಡಿನ ಕ್ರಮ ಎಂದು ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆದಿದ್ದು ಹುಬ್ಬಳ್ಳಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ಮಾತನಾಡಿದ ಆರ್ ಅಶೋಕ್, ರಾಮ ಮಂದಿರ ನಿರ್ಮಿಸಬಾರದು ಎನ್ನುವುದು ಕಾಂಗ್ರೆಸ್ ಹುನ್ನಾರ. ಸಿಎಂ ಸಿದ್ದರಾಮಯ್ಯ ಅವರು ಹಿಂದೂ-ಮುಸ್ಲಿಂ ನಡುವೆ ಬೆಂಕಿ ಹಚ್ಚುವ ʼಅಂಬಾಸಿಡರ್ʼ ಇದ್ದಂತೆ. ಅದಕ್ಕಾಗಿ ರಾಜ್ಯದಲ್ಲಿ ಇಂತಹ ಗದ್ದಲ ನಡೆಯುತ್ತಿದೆ ಎಂದು ಹೇಳಿದರು.
'ರಾಜ್ಯದಲ್ಲಿ 69 ಸಾವಿರ ಎಲ್.ಪಿ.ಆರ್. ಪ್ರಕರಣಗಳಿವೆ? ಈವರೆಗೆ ಎಷ್ಟು ಮಂದಿ ಆರೋಪಿಗಳನ್ನು ಬಂಧಿಸಿದ್ದೀರಿ? ರಾಮಮಂದಿರ ಉದ್ಘಾಟನೆ ಕಾಂಗ್ರೆಸ್ ಗೆ ಹೊಟ್ಟೆಉರಿ ಆಗುತ್ತಿದೆ. ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಮತ ಬ್ಯಾಂಕ್ ಉಳಿಸುವ ಚಿಂತನೆ ಆರಂಭವಾಗಿದೆ. ಅದಕ್ಕಾಗಿ ರಾಮ, ಆಂಜನೇಯನ ಭಜನೆ ಮಾಡಬಾರದು ಎಂದು, ಮುಸ್ಲಿಮರನ್ನು ಓಲೈಸುವುದಕ್ಕಾಗಿ ಹಳೆ ಪ್ರಕರಣ ಕೆದಕಿ ಬಂಧಿಸುವ ಹುನ್ನಾರ ನಡೆಸಿದ್ದಾರೆ ಎಂದು ಅಶೋಕ್ ಆರೋಪಿಸಿದರು.
ಪೊಲೀಸ್ ಠಾಣೆ ಮುತ್ತಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್ ಮಾತನಾಡಿ, ಮುನ್ನೆಚ್ಚರಿಕೆ ಕ್ರಮವಾಗಿ 150 ಜನರನ್ನು ಬಂಧಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.
Karnataka BJP leaders try to gherao Hubballi police station over arrest of shrikanth poojari. Leader of opposition R. Ashok and his deputy Arvind Bellad, a few legislators and scores of others courted arrest in Hubballi on January 3 while protesting against the arrest of a Hindutva activist in connection with violence post demolition of the Babri masjid in Ayodhya in 1992.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm