ಬ್ರೇಕಿಂಗ್ ನ್ಯೂಸ್
04-01-24 08:18 pm Mangaluru Correspondent ಕರ್ನಾಟಕ
ಬೆಂಗಳೂರು ಜ 03: ಅಯೋಧ್ಯೆಯ ಶ್ರೀರಾಮ ಮಂದಿರ ಯಾವ ಪಕ್ಷಕ್ಕೂ ಸೇರಿಲ್ಲ. ಮಂದಿರ ಉದ್ಘಾಟನೆಗೆ ಎಲ್ಲರಿಗೂ ಆಹ್ವಾನ ಕೊಡಬೇಕು ಎಂದು ನಿರೀಕ್ಷೆ ಮಾಡಬೇಕಿಲ್ಲ. ಆದರೆ ಆಹ್ವಾನವಿಲ್ಲ ಎಂದು ಹೇಳುವ ಕಾಂಗ್ರೆಸ್ ನಾಯಕರು ಒಂದು ಕಾಲದಲ್ಲಿ ಶ್ರೀರಾಮ ಕಾಲ್ಪನಿಕ ವ್ಯಕ್ತಿ ಎಂದಿದ್ದರು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆಯ ಶ್ರೀರಾಮ ಮಂದಿರ ಯಾವ ಪಕ್ಷಕ್ಕೂ ಸೇರಿಲ್ಲ. ಈ ಮಂದಿರ ನಿರ್ಮಾಣಕ್ಕಾಗಿ ಐನೂರು ವರ್ಷಗಳಿಂದ ಹೋರಾಟ ನಡೆಯುತ್ತಿತ್ತು. ಆಗ ಬಿಜೆಪಿ ಕೂಡ ಇರಲಿಲ್ಲ. ಇದು ಎಲ್ಲ ರಾಮಭಕ್ತರಿಗೆ ಸೇರಿದೆ. ಸಿಎಂ ಸಿದ್ದರಾಮಯ್ಯ ಇತ್ತೀಚೆಗೆ ದೇವಸ್ಥಾನದ ಉದ್ಘಾಟನೆಗೆ ಹೋಗಿದ್ದು, ಪೂಜೆ ಮಾಡಲು ಒಳಗೆ ಹೋಗಿಲ್ಲ. ಆದರೆ ಮಸೀದಿಗೆ ಕರೆದರೆ ಟೋಪಿ ಹಾಕಿಕೊಂಡು ಓಡುತ್ತಾರೆ. ಕೇಸರಿ ಪೇಟವನ್ನು ಕೂಡ ಅವರು ಹಾಕಿಕೊಳ್ಳುವುದಿಲ್ಲ. ದೇವಸ್ಥಾನದ ಒಳಗೆ ಹೋಗಲು ಹಿಂಜರಿಯುತ್ತಾರೆ. ಕಾಂಗ್ರೆಸ್ ನಾಯಕರು ಒಂದು ಕಾಲದಲ್ಲಿ ರಾಮನ ಜನ್ಮ ಪ್ರಮಾಣಪತ್ರ ಕೇಳಿದ್ದರು, ರಾಮ ಕಾಲ್ಪನಿಕ ವ್ಯಕ್ತಿ ಎಂದು ಕೋರ್ಟ್ಗೆ ಅಫಿಡವಿಟ್ ಸಲ್ಲಿಸಿದ್ದರು ಎಂದರು.
ಕರಸೇವಕ ಶ್ರೀಕಾಂತ ಪೂಜಾರಿ ಅವರ ವಿರುದ್ಧ ಬೇರೆ ಪ್ರಕರಣಗಳಿವೆ ಎಂದು ಹೇಳುತ್ತಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅಮಾಯಕರ ಮೇಲೆ ಬ್ರಹ್ಮಾಸ್ತ್ರ ಪ್ರಯೋಗ ಮಾಡಿದ್ದಾರೆ. ಬೇರೆ ಪ್ರಕರಣಗಳಲ್ಲಿ ಯಾರೂ ಸಿಗದಿದ್ದಾಗ ಶ್ರೀಕಾಂತ ಅವರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಶ್ರೀಕಾಂತ ಅವರು ಗಾಯಗೊಂಡಿದ್ದು, ಬದುಕು ಸಾವಿನ ನಡುವೆ ಹೋರಾಡುತ್ತಿದ್ದಾರೆ. ಅವರನ್ನು ಬಂಧಿಸುವ ಅವಶ್ಯಕತೆ ಏನಿತ್ತು? ರಾಜ್ಯದಲ್ಲಿ ದೀರ್ಘಾವಧಿಯಿಂದ ಬಾಕಿ ಇರುವ ಸುಮಾರು 50-60 ಸಾವಿರ ಹಾಗೂ ಬೆಂಗಳೂರಿನಲ್ಲಿ ಸುಮಾರು 10 ಸಾವಿರ ಪ್ರಕರಣಗಳಿವೆ. ಎಲ್ಲರನ್ನೂ ಬಂಧಿಸಿದರೆ ಜೈಲಿನಲ್ಲಿರಿಸಲು ಜಾಗ ಇರುವುದಿಲ್ಲ.
ಕಾಂಗ್ರೆಸ್ನವರು ಬೇಕಾದವರಿಗೆ ಕಾಫಿ ಕೊಟ್ಟು ಕಳಿಸುತ್ತಾರೆ. ಅವರು ಕ್ರಿಮಿನಲ್ ಎಂದು ಹೇಳುವ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆ ಇಲ್ಲ. ಅವರು ಕ್ರಿಮಿನಲ್ ಎನ್ನುವುದಾದರೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಡಿ.ಕೆ.ಶಿವಕುಮಾರ್, ಶಶಿ ತರೂರ್ ಯಾವ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಪ್ರಶ್ನೆ ಮಾಡಿದರು
R. Ashok criticizes According to Siddaramaiah, he enters mosques but not temples. Lately, instead of going inside the temple, he went to the mosque while donning the Muslim headgear. He blasted, saying he needed Muslims and doesn't want Hindus.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm