ಬ್ರೇಕಿಂಗ್ ನ್ಯೂಸ್
08-01-24 07:18 pm HK News Desk ಕರ್ನಾಟಕ
Photo credits : Tv 9 Kannada
ಗದಗ, ಜ 08: ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದಂದು ಅಭಿಮಾನಿಗಳಲ್ಲಿ ಸೂತಕದ ಛಾಯೆ ಆವರಿಸಿದೆ. ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದಂದು ಅಭಿಮಾನಿಗಳು ಕಟೌಟ್ ನಿಲ್ಲಿಸುವ ವೇಳೆ ಕರೆಂಟ್ ಶಾಕ್ ಹೊಡೆದು ಮೂವರು ಅಭಿಮಾನಿಗಳು ಮೃತಪಟ್ಟಿದ್ರು. ಸುದ್ದಿ ತಿಳಿಯುತ್ತಿದ್ದಂತೆ ಶೂಟಿಂಗ್ ಕ್ಯಾನ್ಸಲ್ ಮಾಡಿ ನಟ ಯಶ್ ಕೂಡ ಗದಗಕ್ಕೆ ಬಂದಿದ್ದಾರೆ.
ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಬಂದ ಯಶ್, ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಟಗಿಗೆ ಭೇಟಿ ನೀಡಿದ್ದಾರೆ. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
ಶೂಟಿಂಗ್ ಬಿಟ್ಟು ಗದಗಕ್ಕೆ ಓಡೋಡಿ ಬಂದ ಯಶ್ ಮೊದಲು ಮೃತ ಮುರಳಿ ಮನೆಗೆ ಭೇಟಿ ಕೊಟ್ಟು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ರು. ರಾಕಿಂಗ್ ಸ್ಟಾರ್ ಯಶ್ ನೋಡಲು ಅಕ್ಕ-ಪಕ್ಕದ ಊರುಗಳಿಂದ ಜನಸಾಗರವೆ ಹರಿದು ಬಂದಿತ್ತು. ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ರು.
ವಿದ್ಯುತ್ ಸ್ಪರ್ಶಿಸಿ ಮೂವರ ಸಾವು ;
ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಯಶ್ ಬರ್ತ್ಡೇ ಬ್ಯಾನರ್ ನಿಲ್ಲಿಸುವಾಗ ವಿದ್ಯುತ್ ಪ್ರವಹಿಸಿ ಮೂವರು ಯಶ್ ಅಭಿಮಾನಿಗಳು ಮೃತಪಟ್ಟಿದ್ದರು. ಹನಮಂತ ಹರಿಜನ (21), ಮುರಳಿ ನಡವಿನಮನಿ (20), ನವೀನ್ ಗಾಜಿ (19) ಮೃತಪಟ್ಟ ದುರ್ದೈವಿಗಳು. ಮಂಜುನಾಥ್ ಹರಿಜನ, ಪ್ರಕಾಶ ಮ್ಯಾಗೇರಿ, ದೀಪಕ ಹರಿಜನ ಎಂಬುವರಿಗೆ ಗಂಭೀರ ಗಾಯಗಳಾಗಿವೆ.
ಯಶ್ ಬರಬೇಕು ಎಂದು ಅಭಿಮಾನಿಗಳ ಪಟ್ಟು ;
ಮೃತರ ಕುಟುಂಬಕ್ಕೆ ಸಾಂತ್ವನ ಹೇಳಬೇಕು, ಪಟ್ಟು ಹಿಡಿದ ಅಭಿಮಾನಿಗಳು ಸೂರಣಗಿ ಗ್ರಾಮಕ್ಕೆ ನಟ ಯಶ್ ಬರಬೇಕೆಂದು ಎಂಬ ಆಗ್ರಹ ಕೇಳಿ ಬಂದಿದೆ. ಯಶ್ ನಮ್ಮೂರಿಗೆ ಬರಬೇಕು. ಬಂದು ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಬೇಕು ಎಂದು ಮೃತ ಯುವಕರ ಗೆಳೆಯ ಪ್ರಕಾಶ ಮ್ಯಾಗೇರಿ ಆಗ್ರಹಿಸಿದ್ದರು. ಆಸ್ಪತ್ರೆಗೆ ಶಾಸಕ ಚಂದ್ರು ಲಮಾಣಿ ಭೇಟಿ ನೀಡಿ ಗಾಯಾಳುಗಳ ಜೊತೆ ಮಾತನಾಡಿ ಮೃತರ ಕುಟುಂಬಗಳಿಗೆ ಅವರು ಸಾಂತ್ವನ ಹೇಳಿದ್ದಾರೆ.
2 ಲಕ್ಷ ಪರಿಹಾರ, ಗಾಯಾಳುಗಳಿಗೆ 50 ಸಾವಿರ ;
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಫ್ಲೆಕ್ಸ್ ಕಟ್ಟುವ ವೇಳೆ ವಿದ್ಯುತ್ ಪ್ರವಹಿಸಿ ಮೂವರು ಯುವಕರು ಮೃತಪಟ್ಟ ಸುದ್ದಿ ತಿಳಿದು ಬೇಸರವಾಯಿತು ಎಂದು ಟ್ವೀಟ್ ಮಾಡಿದ್ದಾರೆ.
ಬದುಕಿ ಬಾಳಬೇಕಿದ್ದ ಹುಡುಗರು ಹೀಗೆ ಅಚಾತುರ್ಯದಿಂದ ಸಾವಿಗೀಡಾಗಿದ್ದಾರೆ, ಅವರನ್ನು ನಂಬಿದ್ದ ಕುಟುಂಬವೀಗ ಸಂಕಷ್ಟಕ್ಕೆ ಸಿಲುಕಿದ್ದು ಆ ಕುಟುಂಬಗಳಿಗೆ ನೆರವಾಗುವ ದೃಷ್ಟಿಯಿಂದ ಮೃತ ದುರ್ದೈವಿಗಳಿಗೆ ತಲಾ 2 ಲಕ್ಷ ರೂಪಾಯಿಗಳ ಪರಿಹಾರ ನೀಡುವಂತೆ ಆದೇಶಿಸಿದ್ದೇನೆ ಎಂದು ಪೋಸ್ಟ್ ನಲ್ಲಿ ತಿಳಿಸಿದ್ದಾರೆ.
3 fans electrocuted on Yash Birthday, Actor Yash reaches Gadag consoles family members. Three men were electrocuted in Karnataka’s Gadag district early on Monday when they were installing a flex to celebrate Kannada film actor Yash’s birthday.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm