ಬ್ರೇಕಿಂಗ್ ನ್ಯೂಸ್
09-01-24 08:51 pm Bangalore Correspondent ಕರ್ನಾಟಕ
ಬೆಂಗಳೂರು, ಜ 09: ಬೆಸ್ಕಾಂ ಮುಖ್ಯ ಪ್ರಧಾನ ವ್ಯವಸ್ಥಾಪಕ ಎಂ.ಎಲ್. ನಾಗರಾಜ್, ಲೋಕೋಪಯೋಗಿ ಇಲಾಖೆಯ ಕಟ್ಟಡಗಳ ವೃತ್ತದ ಸೂಪರಿಂಟೆಂಡಿಂಗ್ ಎಂಜಿನಿಯರ್ ಎನ್. ಸತೀಶ್ ಬಾಬು ಸೇರಿದಂತೆ ಐವರು ಅಧಿಕಾರಿಗಳು ಹಾಗೂ ಚನ್ನೇನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಎಚ್.ಎಸ್. ಸುರೇಶ್ ಮನೆಗಳ ಮೇಲೆ ಮಂಗಳವಾರ ಬೆಳಿಗ್ಗೆ ದಾಳಿ ಮಾಡಿರುವ ಲೋಕಾಯುಕ್ತ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಕುಂದಾಣ ಗ್ರಾಮ ಪಂಚಾಯಿತಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಡಿ.ಎಂ. ಪದ್ಮನಾಭ, ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸೈಯದ್ ಮುನೀರ್, ಬಿಬಿಎಂಪಿ ನಗರ ಯೋಜನಾ ವಿಭಾಗದ ಜಂಟಿ ನಿರ್ದೇಶಕ ಮಂಜೇಶ್ ಬಿ. ದಾಳಿಗೊಳಗಾದ ಇತರರು.
ಘೋಷಿತ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಆರು ಮಂದಿಯ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಎಫ್ಐಆರ್ ದಾಖಲಿಸಲಾಗಿದೆ. ಬೆಂಗಳೂರು, ರಾಮನಗರ, ಬಳ್ಳಾರಿ, ಚಿತ್ರದುರ್ಗ ಜಿಲ್ಲೆಗಳ 30 ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿಮಾಡಿದ್ದು, ಶೋಧ ನಡೆಸಲಾಗುತ್ತಿದೆ ಎಂದು ಲೋಕಾಯುಕ್ತದ ಅಧಿಕಾರಿಗಳು ತಿಳಿಸಿದ್ದಾರೆ.
ಆರೋಪಿಗಳ ಮನೆಗಳು, ಕಚೇರಿಗಳು, ಸಂಬಂಧಿಕರು ಮತ್ತು ಬೇನಾಮಿ ವ್ಯಕ್ತಿಗಳ ಮನೆಗಳಲ್ಲಿ ಶೋಧ ನಡೆಸಲಾಗುತ್ತಿದೆ.
ಕೆಲ ದಿನಗಳ ಹಿಂದೆ ಲಂಚ ಪಡೆಯುವ ವೇಳೆ ಸಿಕ್ಕಿಬಿದ್ದಿದ್ದ ಬೆಸ್ಕಾಂ ಮುಖ್ಯ ಪ್ರಧಾನ ವ್ಯವಸ್ಥಾಪಕ ನಾಗರಾಜ್ ಕಳೆದ ಒಂದೂವರೆ ತಿಂಗಳಿನಿಂದ ಅಮಾನತಿನಲ್ಲಿದ್ದರು. ಈಗ ಆತನ ಮನೆಯ ಮೇಲೂ ದಾಳಿ ನಡೆಸಿರುವ ಅಧಿಕಾರಿಗಳು ಹಲವು ಆಸ್ತಿಗಳನ್ನ ಬಯಲಿಗೆಳೆದಿದ್ದಾರೆ. ನಾಗರಾಜ್ ಈ ಹಿಂದೆ ವಾಣಿಜ್ಯ ಲೈಸೆನ್ಸ್ ಕೊಡುವ ವಿಚಾರಕ್ಕೆ 7.50 ಲಕ್ಷ ರೂ. ಲಂಚ ಕೇಳಿದ್ದರು. ನಾಗರಾಜ್ ಪರವಾಗಿ ಡ್ರೈವರ್ ಮುರಳಿಕೃಷ್ಣ 7 ಲಕ್ಷ ರೂ. ಪಡೆದಿದ್ದ, ಹಣ ಪಡೆಯುವಾಗಲೇ ಸಿಕ್ಕಿಬಿದ್ದಿದ್ದರಿಂದ ನಾಗರಾಜ್ ಅವರನ್ನ ಒಂದೂವರೆ ತಿಂಗಳಿನಿಂದ ಅಮಾನತ್ತಿನಲ್ಲಿಡಲಾಗಿತ್ತು ಎಂದು ಮೂಲಗಳು ತಿಳಿಸಿವೆ.
ಇದೀಗ ನಾಗರಾಜ್ಗೆ ಸೇರಿದ ಬಳ್ಳಾರಿಯ 7 ಕಡೆಗಳಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. ಈ ವೇಳೆ ನಾಗರಾಜ್ ಹೆಸರಲ್ಲಿ 9 ಸೈಟ್ಗಳು, 3 ಮನೆಗಳು, 3 ಪೆಟ್ರೋಲ್ ಬಂಕ್, ಕೃಷಿ ಜಮೀನು, ಶಿಕ್ಷಣ ಸಂಸ್ಥೆಗಳು ಪತ್ತೆಯಾಗಿದೆ.
ಕುಂದಾಣ ಗ್ರಾಮ ಪಂಚಾಯತ್ನ ಪಿಡಿಓ ಪದ್ಮನಾಭ್ ಎಂಬವರ ಮನೆಯ ಮೇಲೆಯೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಪ್ತಗಿರಿ ಲೇಔಟ್ ಬಳಿ AGB ಲೇಔಟ್ನಲ್ಲಿ 4 ಮಹಡಿಗಳ ಒಂದು ಮನೆ, ತುಮಕೂರು ಜಿಲ್ಲೆ ಅನುಪನಹಳ್ಳಿಯಲ್ಲಿ ಫಾರ್ಮ್ ಹೌಸ್ ಹೊಂದಿರುವ 5 ಎಕರೆ ಕೃಷಿ ಭೂಮಿ, ಸೋಂಪುರದಲ್ಲಿ ವಾಣಿಜ್ಯ ಕಟ್ಟಡ, ದಾಬಸ್ಪೇಟೆ, ಸೋಂಪುರದಲ್ಲಿ ಕೈಗಾರಿಕಾ ಶೆಡ್ ಪದ್ಮಾನಾಭ್ ಹೆಸರಿನಲ್ಲಿವೆ.
ಬೆಂಗಳೂರಿನ ಬಿಬಿಎಂಪಿ ಅಧಿಕಾರಿ ಮಂಜೇಶ್ ಸಂಬಂಧಿಕರ ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಮಂಡ್ಯದಲ್ಲಿ ಮೂರು ಕಡೆ, ಮಳವಳ್ಳಿ ತಾಲೂಕಿನ ಹಲಗೂರು ಹಾಗೂ ಗುಂಡಾಪುರದಲ್ಲಿ ಮಂಜೇಶ್ ಸಂಬಂಧಿ ಸುರೇಂದ್ರ ಎಂಬವವರಿಗೆ ಸೇರಿದ ಎರಡು ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಮದ್ದೂರಿನ ಎಸ್.ಐ.ಕೋಡಿಹಳ್ಳಿಯಲ್ಲಿರುವ ಮಂಜೇಶ್ ಅಜ್ಜಿಯ ಮನೆಯ ಮೇಲೂ ದಾಳಿ ನಡೆಸಲಾಗಿದೆ. ನಗರದಲ್ಲಿ ನಿಯಮ ಉಲ್ಲಂಘನೆ ಮಾಡಿರುವ ಕಟ್ಟಡಗಳಿಗೆ ಪ್ಲಾನ್, ಒಸಿ ನೀಡಲು ಭಾರಿ ಪ್ರಮಾಣದಲ್ಲಿ ಲಂಚ ಪಡೆದಿರುವ ಆರೋಪ ಮಂಜೇಶ್ ಮೇಲಿದೆ. ಪ್ಲಾನ್ ಉಲ್ಲಂಘಿಸಿದ ಕಟ್ಟಡಗಳಿಗೂ ಒಸಿ ನೀಡುತ್ತಿದ್ದ ಎನ್ನಲಾಗಿದೆ.
Bescom Chief General Manager M.L. N. Nagaraj, Superintending Engineer, Public Works Department Building Circle; Five officials, including Satish Babu, and Chennahalli gram panchayat member H.S. The Lokayukta police raided Suresh's houses on Tuesday morning and are conducting searches.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm