ಬ್ರೇಕಿಂಗ್ ನ್ಯೂಸ್
10-01-24 04:41 pm Bangalore Correspondent ಕರ್ನಾಟಕ
ಬೆಂಗಳೂರು, ಜ.10: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ದಿನಗಣನೆ ಶುರುವಾಗಿದ್ದರೆ, ಇತ್ತ ಕರ್ನಾಟಕದ ಮುಜರಾಯಿ ಇಲಾಖೆ ಅಯೋಧ್ಯೆಯಲ್ಲಿ ಕನ್ನಡಿಗರಿಗಾಗಿ ವಸತಿ ವ್ಯವಸ್ಥೆ ಮಾಡಲು ಮುಂದಾಗಿದೆ. ಇನ್ನೇನು ಕೆಲ ದಿನಗಳಲ್ಲಿ ರಾಮ ಮಂದಿರ ಉದ್ಘಾಟನೆಯಾಗಲಿದೆ. ಇದಕ್ಕೂ ಮೊದಲೇ ಉತ್ತರಪ್ರದೇಶ ಸರ್ಕಾರಕ್ಕೆ ಕರ್ನಾಟಕದಿಂದ ಪತ್ರ ಬರೆದಿದ್ದು ವಸತಿ ನಿವಾಸಕ್ಕೆ ಮನವಿ ಮಾಡಿದೆ.
ಕರ್ನಾಟಕದಿಂದ ಹೆಚ್ಚಿನ ಸಂಖ್ಯೆಯಲ್ಲಿ ರಾಮಭಕ್ತರು ಅಯ್ಯೋಧ್ಯೆಗೆ ಬರುತ್ತಾರೆ. ಅವರಿಗಾಗಿ ವಸತಿ, ಊಟದ ವ್ಯವಸ್ಥೆಗಾಗಿ ಅತಿಥಿ ಗೃಹ ನಿರ್ಮಾಣ ಮಾಡುವಂತೆ ರಾಜ್ಯ ಮುಜರಾಯಿ ಇಲಾಖೆಯಿಂದ ಪತ್ರದ ಮೂಲಕ ಉತ್ತರ ಪ್ರದೇಶ ಸರ್ಕಾರಕ್ಕೆ ಮನವಿ ಮಾಡಿದೆ.
ಸರಯೂ ನದಿ ಸಮೀಪದಲ್ಲಿ ಅತಿಥಿ ಗೃಹ ನಿರ್ಮಿಸುವಂತೆ 2023ರ ಆಗಸ್ಟ್ ತಿಂಗಳಲ್ಲಿ ಉತ್ತರ ಪ್ರದೇಶ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದರು. ಅದಕ್ಕೂ ಹಿಂದೆ, 2020ರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿಗೆ ಆಗಿನ ಸಿಎಂ ಯಡಿಯೂರಪ್ಪ ಕೂಡ ಪತ್ರ ಬರೆದು ಮನವಿ ಮಾಡಿದ್ದರು. ರಾಜ್ಯದ ಮನವಿಗೆ ಉತ್ತರ ಪ್ರದೇಶ ಸರ್ಕಾರದ ಹೌಸಿಂಗ್ ಬೋರ್ಡ್ ಪ್ರತಿಕ್ರಿಯೆ ಪತ್ರ ಕಳುಹಿಸಿತ್ತು.
ಅಯೋಧ್ಯೆಯಲ್ಲಿ ಕರ್ನಾಟಕ ಸರ್ಕಾರದ ಅತಿಥಿ ಗೃಹ ನಿರ್ಮಾಣಕ್ಕೆ ಬೇಕಾದ ಪೂರ್ವ ತಯಾರಿಯನ್ನ ರಾಜ್ಯದ ಮುಜರಾಯಿ ಇಲಾಖೆ ಮಾಡುತ್ತಿದೆ. ಈ ಮೂಲಕ ರಾಜ್ಯದ ಪ್ರವಾಸಿಗರಿಗೆ ವಾಸ್ತವ್ಯ ಹೂಡಲು ತೊಂದರೆ ಆಗದಂತೆ ಕ್ರಮಕ್ಕೆ ಮುಂದಾಗಿದೆ. ಎರಡು ದಿನಗಳ ಹಿಂದೆ ರಾಜ್ಯದ ಮುಜರಾಯಿ ಇಲಾಖೆಯ ದೇಗುಲಗಳಲ್ಲಿ ರಾಮ ಮಂದಿರ ಉದ್ಘಾಟನೆಗೊಳ್ಳುವ ಜ 22ರಂದು ವಿಶೇಷ ಪೂಜೆ ನಡೆಸಲು ಸುತ್ತೋಲೆ ಕಳುಹಿಸಿತ್ತು. ಬಿಜೆಪಿ ಮತ್ತು ಸಂಘ ಪರಿವಾರ ರಾಮ ಮಂದಿರದ ವಿಚಾರದಲ್ಲಿ ಪ್ರಚಾರ ಪಡೆಯುತ್ತಿರುವಾಗಲೇ ಕಾಂಗ್ರೆಸ್ ಸರ್ಕಾರವೂ ಪೂರಕವಾಗಿ ಕ್ರಮಕ್ಕೆ ಮುಂದಾಗಿದೆ.
The whole nation is waiting for Ram Mandir (Ayodhya Ram Mandir) in Ramnoor. Those moments are just a few days away. On this occasion, the Karnataka Religious Endowment Department has come forward to give a good news to the people.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm