ಬ್ರೇಕಿಂಗ್ ನ್ಯೂಸ್
20-11-20 04:34 pm Headline Karnataka News Network ಕರ್ನಾಟಕ
ದಾವಣಗೆರೆ, ನವೆಂಬರ್ 19 : ಸ್ವಾತಂತ್ರ್ಯ ಹೋರಾಟಗಾರ ಮಹಾತ್ಮ ಗಾಂಧೀಜಿ ರಾಷ್ಟ್ರಪಿತನೆಂದು ಸಂವಿಧಾನದಲ್ಲೆಲ್ಲೂ ಉಲ್ಲೇಖಗೊಂಡಿಲ್ಲ. ಗಾಂಧೀಜಿ ರಾಷ್ಟ್ರಪಿತನಾಗಿದ್ದರೆ ಸರಕಾರ ದಾಖಲೆ ನೀಡಲಿ. ಅವರು ಈ ದೇಶದ ರಾಷ್ಟ್ರಪಿತನೇ ಅಲ್ಲ ಎಂದು ಅಖಿಲ ಭಾರತ ಹಿಂದು ಮಹಾಸಭಾದ ಪ್ರಮುಖರಾದ ಧರ್ಮೇಂದ್ರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಧರ್ಮೇಂದ್ರ, ಮಹಾತ್ಮ ಗಾಂಧೀಜಿ ರಾಷ್ಟ್ರಪಿತ ಎನ್ನುವ ಎಂಬ ಬಗ್ಗೆ ನಾವು ಆರ್.ಟಿ.ಐ ಮಾಹಿತಿ ಪಡೆದಿದ್ದೇವೆ. ಆದರೆ, ಅದರಲ್ಲಿ ರಾಷ್ಟ್ರಪಿತನ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಕ್ಕಳಿಗೆ ಪಠ್ಯ ಪುಸ್ತಕದಲ್ಲಿ ತಪ್ಪು ಮಾಹಿತಿ ನೀಡುತ್ತಿವೆ. ಈ ಬಗ್ಗೆ ಸರ್ಕಾರ, ಪಠ್ಯ ಪುಸ್ತಕ ರಚನಾ ಸಮಿತಿ, ಶಿಕ್ಷಣ ಇಲಾಖೆ ವಿರುದ್ಧ ದೂರು ದಾಖಲಿಸುತ್ತೇವೆ. ಇಲ್ಲದಿದ್ದರೆ ರಾಷ್ಟ್ರಪಿತ ಎನ್ನುವ ಶಬ್ಧವನ್ನು ಪುಸ್ತಕಗಳಿಂದ ತೆಗೆಯಬೇಕು. 1857 ರಲ್ಲಿ ನಡೆದ ಮೊದಲ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಂಗಲ ಪಾಂಡೆ ಮತ್ತು ಝಾನ್ಸಿ ರಾಣಿ ಲಕ್ಷ್ಮೀಬಾಯಿ ಹೋರಾಡಿದ್ದಾರೆ. ಗಾಂಧೀಜಿ ನಂತರ ಬಂದವರು, ಅವರ ಜೊತೆ ಸಾವಿರಾರು ಮಂದಿ ಹೋರಾಡಿದ್ದಾರೆ ಎಂದು ಹೇಳಿದರು.
ಮಹಾತ್ಮ ಗಾಂಧೀಜಿಯಿಂದಲೇ ಸ್ವಾತಂತ್ರ್ಯ ಸಿಕ್ಕಿದ್ದಲ್ಲ. ಗಾಂಧಿಜೀಯನ್ನು ಯಾಕೆ ಅಷ್ಟೊಂದು ವೈಭವೀಕರಣ ಮಾಡುತ್ತೀರಿ ಎಂದು ಪ್ರಶ್ನಿಸಿದ ಧರ್ಮೇಂದ್ರ, ದೇಶದ ಇತರ ಸ್ವಾತಂತ್ರ್ಯ ಹೋರಾಟಗಾರರಿಗೂ ಗಾಂಧಿಜೀಯಷ್ಟೇ ಗೌರವ ನೀಡಬೇಕು. ಗಾಂಧಿಜೀಯಿಂದಲೇ ಸ್ವಾತಂತ್ರ್ಯ ಸಿಕ್ಕಿದೆ ಎನ್ನುವುದು ಮೂರ್ಖತನ. ಬಿಜೆಪಿ ಅಧಿಕಾರಕ್ಕೆ ಬಂದ ನಂತರವೂ ಸತ್ಯ ಹೇಳಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧವೂ ಆಕ್ರೋಶ ಹೊರಹಾಕಿದ್ದಾರೆ.
President of all India Hindu Maha Sabha Dharmendra has alleged that Gandhi is not the father of the Nation by speaking to the media persons in Davanagere.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 04:36 pm
HK News Staffer
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm