ಬ್ರೇಕಿಂಗ್ ನ್ಯೂಸ್
14-01-24 01:47 pm HK News Desk ಕರ್ನಾಟಕ
ಕಾರವಾರ, ಜ 13: ಪ್ರಚೋದನಕಾರಿ ಹೇಳಿಕೆ ಹಾಗೂ ದ್ವೇಷ ಭಾಷಣ ಆರೋಪಗಳಡಿ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಕುಮಟಾ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್ 505 ಹಾಗೂ 153ಎ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಕುಮುಟಾದಲ್ಲಿ ಶನಿವಾರ ನಡೆದಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ಹೆಗಡೆ, "ಅಂದು ಇಂದಿರಾ ಗಾಂಧಿ ಪ್ರಧಾನಿಯಾಗಿದ್ದಾಗ ಗೋ ಹತ್ಯೆ ನಿಷೇಧದ ಬಗ್ಗೆ ದೊಡ್ಡ ಆಂದೋಲನ ನಡೆದಿತ್ತು. ಈ ಆಂದೋಲನದಲ್ಲಿ ಗೋಲಿಬಾರ್ ನಡೆದು ಹತ್ತಾರು ಸಂತರು ಸತ್ತರು. ಇಂದಿರಾ ಗಾಂಧಿ ಸಮ್ಮುಖದಲ್ಲಿ ಈ ಹತ್ಯೆ ನಡೆಯಿತು" ಎಂದು ಆರೋಪಿಸಿದ್ದರು.
ಕೆಲವರು ಜಾತಿ, ಭಾಷೆ, ಪ್ರಾದೇಶಿಕತೆ ಹಾಗು ಇತರ ಹೆಸರಿನಲ್ಲಿ ಸಮಾಜ ಒಡೆಯುತ್ತಿದ್ದಾರೆ. ಈಗಲೂ ಅದೇ ಕೆಲಸ ನಡೆಯುತ್ತಿದೆ. ಆದರೂ ಕೂಡ ಸಮಾಜ ಒಟ್ಟಿಗೆ ನಿಂತಿದೆ. ಹೀಗಾಗಿ ಈಗಿನ ಗೆಲುವನ್ನು ಮುಂದಿನ ಶತಮಾನದಲ್ಲೂ ನೆನೆಯುವಂತಿರಬೇಕು. ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿರುವಂತೆ ಈ ಬಾರಿಯ ಗೆಲುವು ಮುಂದಿನ ದಿನಗಳಲ್ಲಿ ಅಳಿಸಲು ನಮ್ಮಿಂದಲೂ ಆಗಬಾರದು. ಗೆಲುವಿನ ಹೊಡೆತ ನಮ್ಮ ವಿರೋಧಿಗಳಿಗೆ ಆಗಬೇಕು. ನಮ್ಮ ವಿರೋಧ ಕಾಂಗ್ರೆಸ್ ಅಲ್ಲ. ಆದರೆ, ನಮ್ಮ ವಿರೋಧಿ ಸಿದ್ದರಾಮಯ್ಯ" ಎಂದು ವಾಗ್ದಾಳಿ ನಡೆಸಿದ್ದರು.
ಸಿಎಂ ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣ ವೇದಿಕೆ ಎಕ್ಸ್ನಲ್ಲಿ ಅನಂತ ಕುಮಾರ್ ಹೆಗಡೆ ಹೇಳಿಕೆಗೆ ಪ್ರತಿಕ್ರಿಯಿಸಿ, "ರಾಜಕೀಯ ಉದ್ದೇಶದಿಂದ ಉತ್ತರ ಕನ್ನಡ ಸಂಸದರಾದ ಅನಂತ ಕುಮಾರ್ ಹೆಗಡೆಯವರು ಬಳಸಿದ ಭಾಷೆ ಅವರ ಸಂಸ್ಕೃತಿಯನ್ನು ಬಿಂಬಿಸುತ್ತದೆ. ಕೇಂದ್ರದ ಮಂತ್ರಿಯಾಗಿದ್ದಾಗ, ಸಂವಿಧಾನವನ್ನೇ ಬದಲಾಯಿಸುತ್ತೇನೆ ಎಂದು ಹೇಳಿದ್ದರು. ಹೀಗಾಗಿ ಅವರಿಂದ ಉತ್ತಮ ಸಂಸ್ಕೃತಿಯನ್ನು ಅಪೇಕ್ಷಿಸಲು ಸಾಧ್ಯವೇ'' ಎಂದು ಬರೆದಿದ್ದಾರೆ
A suo motu case has been registered against BJP MP Anant Kumar Hegde at Kumta police station on charges of making inflammatory remarks and making hate speeches. An FIR has been registered under IPC sections 505 and 153A.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm