ಬ್ರೇಕಿಂಗ್ ನ್ಯೂಸ್
18-01-24 11:06 pm Bangalore Correspondent ಕರ್ನಾಟಕ
ಬೆಂಗಳೂರು, ಜ.18: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ವಿವಾದಿತ ಜಾಮಿಯಾ ಮಸೀದಿಯಲ್ಲಿ ಅನಧಿಕೃತವಾಗಿ ನಡೆಸುತ್ತಿರುವ ಮದರಸಾವನ್ನು ತಡೆಯಬೇಕೆಂದು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಕನಕಪುರ ತಾಲೂಕಿನ ಅಭಿಷೇಕ್ ಗೌಡ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠವು ಕೇಂದ್ರ ಸಂಸ್ಕೃತಿ ಸಚಿವಾಲಯ, ಭಾರತೀಯ ಪುರಾತತ್ವ ಹಾಗೂ ಸರ್ವೇಕ್ಷಣಾ ಇಲಾಖೆಯ ಮಹಾ ನಿರ್ದೇಶಕರು, ಕರ್ನಾಟಕ ಕಂದಾಯ ಇಲಾಖೆ ಮತ್ತು ಮಂಡ್ಯ ಜಿಲ್ಲಾಧಿಕಾರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಪ್ರಸಿದ್ಧ ಪ್ರವಾಸಿ ತಾಣವಾಗಿದೆ. ಶ್ರೀರಂಗಪಟ್ಟಣದ ಜಾಮಿಯಾ ಮಸೀದಿಯನ್ನು ಮೈಸೂರು ಅರಸ ಟಿಪ್ಪು ಸುಲ್ತಾನ್ ತನ್ನ ಆಡಳಿತಾವಧಿಯಲ್ಲಿ ನಿರ್ಮಿಸಲಾಗಿತ್ತು. ಇದರಿಂದ ಈ ಮಸೀದಿಯನ್ನು ಐತಿಹಾಸಿಕ ಮತ್ತು ಪ್ರಾಚೀನ ಸ್ಮಾರಕ ಎಂಬುದಾಗಿ ಭಾರತೀಯ ಸರ್ವೇಕ್ಷಣಾ ಇಲಾಖೆ ಘೋಷಿಸಿ, ಸಂರಕ್ಷಣೆ ಮಾಡುತ್ತಿದೆ. ಆದರೆ, ಈ ಸ್ಮಾರಕದ ಒಳಗೆ ಅನಧಿಕೃತವಾಗಿ ವಸತಿ ಮದರಸಾ ನಡೆಸಲಾಗುತ್ತಿದೆ. ಅಲ್ಲಿ ಸುಮಾರು 50-60 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಾ, ಅಲ್ಲಿಯೇ ತಂಗಿದ್ದಾರೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.
ಮಸೀದಿ ಆವರಣದಲ್ಲಿಯೇ ವಿದ್ಯಾರ್ಥಿಗಳಿಗೆ ಹಾಗೂ ಮದರಸಾ ಸಿಬ್ಬಂದಿಗೆ ಅಡುಗೆ ಮಾಡಲಾಗುತ್ತಿದೆ. ಶೌಚಾಲಯ, ಸ್ನಾನ ಗೃಹ, ವಿಶ್ರಾಂತಿ ಕೋಣೆ, ಅಡುಗೆ ಮನೆ ನಿರ್ಮಿಸಲಾಗಿದೆ. ಬಟ್ಟೆಗಳನ್ನು ಶುಚಿಗೊಳಿಸಿ ಒಣಗಲು ಹಾಕಲಾಗುತ್ತಿದೆ. ಹಲವು ತಾತ್ಕಾಲಿಕ ಕಟ್ಟಡ ನಿರ್ಮಿಸಿ, ಸ್ಮಾರಕವನ್ನು ಹಾನಿ ಮಾಡಲಾಗಿದೆ. ಇದು ಪ್ರಾಚೀನ ಸ್ಮಾರಕ ಮತ್ತು ಪುರಾತತ್ವ ಜಾಗಗಳು, ಉಳಿಕೆಗಳ ಕಾಯ್ದೆ-1958ರ ಸೆಕ್ಷನ್ 7, 8 ಮತ್ತು 16ರ ಸ್ಪಷ್ಟ ಉಲ್ಲಂಘನೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
ಜಾಮಿಯಾ ಮಸೀದಿ ಹಿಂದೆ ಹನುಮಾನ್ ದೇವಸ್ಥಾನ ಆಗಿತ್ತು ಎಂದು ಹೇಳಿದ್ದ ಬಜರಂಗದಳ, ಅದರೊಳಗೆ ಪೂಜೆಗೆ ಅವಕಾಶ ಕೋರಿ 2022ರಲ್ಲಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿತ್ತು. ದೇವಸ್ಥಾನ ಕೆಡವಿ ಟಿಪ್ಪು ಕಾಲದಲ್ಲಿ ಮಸೀದಿ ಮಾಡಲಾಗಿತ್ತು ಎಂಬುದಕ್ಕೆ ಸಾಕಷ್ಟು ಕುರುಹುಗಳಿವೆ ಎಂದು ಬಜರಂಗದಳ ನಾಯಕರು ಹೇಳಿದ್ದರು.
The Karnataka High Court directed the issuance of a notice to the Archaeological Survey of India (ASI) and the State government in response to a Public Interest Litigation (PIL) petition. The petition alleged that the historic monument Jamia Masjid in Srirangapatna, Mandya district, designated as a protected site, was being unlawfully utilized as a residential madrasa, causing harm to its ancient structures.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am