ಬ್ರೇಕಿಂಗ್ ನ್ಯೂಸ್
19-01-24 02:45 pm HK News Desk ಕರ್ನಾಟಕ
ಮಂಡ್ಯ, ಜ.19: ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಕೋರ್ಟಿನಲ್ಲಿ ವಾದಿಸಿ ಜಾಮೀನು ಕೊಡಿಸಿದ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷನನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ 3ನೇ ಅಪರ ಜಿಲ್ಲಾ ಮತ್ತ ಸತ್ರ ನ್ಯಾಯಾಲಯ ಪ್ರಭಾಕರ ಭಟ್ ಅವರಿಗೆ ಗುರುವಾರ ಜಾಮೀನು ಮಂಜೂರು ಮಾಡಿತ್ತು. ಭಟ್ ಪರ ನ್ಯಾಯಾಲಯದಲ್ಲಿ ವಕಾಲತ್ತು ವಹಿಸಿದ್ದ ವ್ಯಕ್ತಿ ಶ್ರೀರಂಗಪಟ್ಟಣ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷರು ಎಂಬ ವಿಚಾರ ತಿಳಿಯುತ್ತಿದ್ದಂತೆ ಸುದ್ದಿಗೆ ಗ್ರಾಸವಾಗಿತ್ತು. ಇದೀಗ ಅವರನ್ನು ಘಟಕದ ಅಧ್ಯಕ್ಷ ಸ್ಥಾನದಿಂದ ಉಚ್ಚಾಟನೆ ಮಾಡಲಾಗಿದೆ.
ಪ್ರಕರಣ ಸಂಬಂಧ ಕಲ್ಲಡ್ಕ ಪ್ರಭಾಕರ್ ಭಟ್ ಪರ ಡಿ. ಚಂದ್ರೇಗೌಡ ಅವರು ಕೋರ್ಟಿನಲ್ಲಿ ವಕಾಲತ್ತು ವಹಿಸಿದ್ದರು. ಅಲ್ಲದೆ, ಜನವರಿ 17 ರಂದು ಪ್ರಭಾಕರ್ ಭಟ್ಗೆ ಜಾಮೀನು ಮಂಜೂರು ಆಗಿತ್ತು. ಇದೇ ವೇಳೆ, ಕಲ್ಲಡ್ಕ ಪ್ರಭಾಕರ್ ಅವರಿಗೆ ಜಾಮೀನು ಕೊಡಿಸಿದ್ದು ಕಾಂಗ್ರೆಸ್ ಮುಖಂಡ ಎನ್ನುವುದು ಚರ್ಚೆಗೆ ಗ್ರಾಸವಾಗಿತ್ತು. ಜಿಲ್ಲಾ ಕಾಂಗ್ರೆಸ್ ಮುಖಂಡರು ಆಕ್ರೋಶಗೊಂಡು ಕಾಂಗ್ರೆಸ್ ಕಾನೂನು ಘಟಕದ ನಿಯಮದ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ಅವರನ್ನು ಪಕ್ಷದಿಂದಲೇ ಕಿತ್ತು ಹಾಕಿದ್ದಾರೆ. ಈ ಬಗ್ಗೆ ಜಿಲ್ಲಾ ಕಾನೂನು ಘಟಕದ ಅಧ್ಯಕ್ಷ ಎಎಸ್ ಗೌರಿಶಂಕರ್ ಅವರು ಚಂದ್ರೇಗೌಡ ಅವರನ್ನು ಪಕ್ಷದಿಂದ ಉಚ್ಚಾಟಿಸಿ ಆದೇಶಿಸಿದ್ದಾರೆ.
ಶ್ರೀರಂಗಪಟ್ಟಣದಲ್ಲಿ ಡಿಸೆಂಬರ್ 24 ರಂದು ನಡೆದ ಹನುಮ ಸಂಕೀರ್ತನಾ ಯಾತ್ರೆಯಲ್ಲಿ ಭಾಷಣ ಮಾಡಿದ್ದ ಪ್ರಭಾಕರ್ ಭಟ್, “ಮುಸ್ಲಿಂ ಮಹಿಳೆಯರಿಗೆ ದಿನಕ್ಕೊಬ್ಬ ಗಂಡಂದಿರು. ಅವರಿಗೆ ಪರ್ಮನೆಂಟ್ ಗಂಡ ಇರಲಿಲ್ಲ. ಅವರಿಗೆ ಪರ್ಮನೆಂಟ್ ಗಂಡನನ್ನು ಕೊಟ್ಟಿದ್ದೇ ಮೋದಿ ಸರ್ಕಾರ” ಎಂದು ಹೇಳಿಕೆ ನೀಡಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಭಾಕರ್ ಭಟ್ ವಿರುದ್ಧ IPC ಸೆಕ್ಷನ್ 354, 294, 509, 506, 153A, 295 295A, 298ರ ಅಡಿ ಎಫ್ಐಆರ್ ದಾಖಲಾಗಿತ್ತು.
Mandya congess lawyer suspended for fighting case for RSS leader Kalladka Prabhakar Bhat. RSS leader Kalladka Prabhakar Bhat was granted anticipatory bail on Wednesday by the Third Additional District and Sessions Court, Srirangapatna, in the district, in the case related to his derogatory comments on Muslim women during a speech in Srirangapatna in late December.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 07:34 pm
HK News Desk
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am