ಬ್ರೇಕಿಂಗ್ ನ್ಯೂಸ್
20-01-24 10:31 pm HK News Desk ಕರ್ನಾಟಕ
ಮೈಸೂರು, ಜ.20: ಅಯೋಧ್ಯೆಯಲ್ಲಿ ಪ್ರತಿಷ್ಠೆಯಾಗಲಿರುವ ಅಪೂರ್ವ ರಾಮಲಲ್ಲಾನ ಮೂರ್ತಿ ಮೈಸೂರಿನಲ್ಲಿ ಕೆತ್ತಿದ ಶಿಲೆಯಿಂದ ಆಗಿದೆ ಎನ್ನುವ ಸುದ್ದಿ ಮೈಸೂರಿನ ಜನರಲ್ಲಿ ಪುಳಕ ಸೃಷ್ಟಿಸಿದೆ. ಈಗ ರಾಮನ ಮೂರ್ತಿಯ ಕೃಷ್ಣ ಶಿಲೆ ಸಿಕ್ಕಿದ ಜಾಗದಲ್ಲಿ ರಾಮನ ಮಂದಿರ ನಿರ್ಮಿಸಲು ಜನರು ಮುಂದಾಗಿದ್ದಾರೆ.
ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಈ ಘೋಷಣೆ ಮಾಡಿದ್ದಾರೆ. ಜನವರಿ 22ರಂದು ಶಿಲೆ ಸಿಕ್ಕ ಜಾಗದಲ್ಲಿ ಭೂಮಿ ಪೂಜೆ ಮಾಡುತ್ತೇವೆ. ನಂತರ ಎಲ್ಲಾ ಜನರ ಬಳಿ ದೇಣಿಗೆ ಸಂಗ್ರಹ ಮಾಡಿ ಮಂದಿರ ನಿರ್ಮಾಣ ಮಾಡುತ್ತೇವೆ. ಇದಕ್ಕೆ ಜಮೀನು ಮಾಲೀಕ ರಾಮದಾಸ್ ಕೂಡ ಒಪ್ಪಿದ್ದಾರೆ ಎಂದು ಜಿಟಿ ದೇವೇಗೌಡ ಹೇಳಿದ್ದಾರೆ.
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗಿದೆ. ದೇಶದ ಜನರು ಎದುರು ನೋಡುತ್ತಿರುವ ಬಾಲ ರಾಮನ ವಿಗ್ರಹ ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯ ಹಾರೋಹಳ್ಳಿಯ ದಲಿತ ಸಮುದಾಯದ ಮುಖಂಡ ರಾಮದಾಸ್ ಅವರ ಜಮೀನಿನಲ್ಲಿ ಸಿಕ್ಕ ಕೃಷ್ಣ ಶಿಲೆಯಿಂದ ಆಗಿದೆ. ಇದು ನಮಗೆಲ್ಲ ಸಂತೋಷ. ನಮ್ಮ ದಲಿತ ಬಾಂಧವರ ಜಮೀನಿನಲ್ಲಿ ಮೂಡಿ ಬಂದಿರುವ ಶಿಲೆ ಎಂಬುದು ಹೆಮ್ಮೆ.
ಈ ಶಿಲೆಯನ್ನ ಕೆತ್ತನೆ ಮಾಡಿರುವವರು ನಮ್ಮ ಮೈಸೂರಿನವರು. ಕೃಷ್ಣ ಶಿಲೆಯನ್ನ ಹುಡುಕಿದ್ದ ಶ್ರೀನಿವಾಸ್ ಕೂಡ ನಮ್ಮ ಮೈಸೂರಿನವರು. ಪ್ರಧಾನಿ ನರೇಂದ್ರ ಮೋದಿಯವರು ಮೈಸೂರಿಗೆ ಬಂದಿದ್ದ ವೇಳೆ ಚಾಮುಂಡೇಶ್ವರಿ ಸನ್ನಿದಾನದಲ್ಲಿ ಪ್ರಾರ್ಥನೆ ಮಾಡಿದ್ದರು. ಈಗ ಅದೇ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ರಾಮಲಲ್ಲಾ ಮೂರ್ತಿಗೆ ಶಿಲೆ ಸಿಕ್ಕಿದೆ. ಜ. 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಆಗುತ್ತದೆ. ಅದೇ ವೇಳೆ ಕೃಷ್ಣ ಶಿಲೆ ಸಿಕ್ಕ ಸ್ಥಳದಲ್ಲಿ ವಿಶೇಷ ಪೂಜೆ ನಡೆಸಲಾಗುವುದು. ರಾಮನ ಮಂದಿರಕ್ಕಾಗಿ ಅಡಿಗಲ್ಲು ಹಾಕುತ್ತೇವೆ ಎಂದು ತಿಳಿಸಿದ್ದಾರೆ.
The news that the statue of Apoorva Ram Lalla, who will be installed in Ayodhya, is made of stone carved in Mysuru has created a sensation among the people of Mysuru. Now, people have come forward to build a Ram temple at the site where the Krishna stone of the idol of Lord Ram was found.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 07:34 pm
HK News Desk
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am