ಬ್ರೇಕಿಂಗ್ ನ್ಯೂಸ್
25-01-24 01:08 pm Bangalore Correspondent ಕರ್ನಾಟಕ
ಬೆಂಗಳೂರು, ಜ 25: ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮುತ್ತಿನಮುಳುಸೋಗೆ ಗ್ರಾಮದ ಸಮೀಪ ಕಾವೇರಿ ನದಿಯಿಂದ ಕೆರೆ, ಕಟ್ಟೆಗಳಿಗೆ ನೀರೆತ್ತುವ ಕಾರ್ಯಕ್ರಮಕ್ಕೆ ಚಾಲನೆ ನೀಡುವಾಗ ಬಟನ್ ಕೆಲಸ ಮಾಡದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಜುಗರಕ್ಕೆ ಒಳಗಾದ ಸನ್ನಿವೇಶ ಬುಧವಾರ ನಡೆಯಿತು. ಈ ಘಟನೆಯ ಹಿನ್ನೆಲೆಯಲ್ಲಿ ಚೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಸಿ.ಎನ್.ಶ್ರೀಧರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರ ಅಮಾನತುಗೊಳಿಸಿದೆ.
ಕಾವೇರಿ ನದಿಯಿಂದ ನೀರೆತ್ತಿ 79 ಗ್ರಾಮಗಳಲ್ಲಿ ಬರುವ 150 ಕೆರೆ, ಕಟ್ಟೆಗಳಿಗೆ ತುಂಬಿಸುವ ಯೋಜನೆಯ ಉದ್ಘಾಟನೆಗೆ ಸಿದ್ದರಾಮಯ್ಯ ಆಗಮಿಸಿ, ಉದ್ಘಾಟನೆ ಕಾರ್ಯ ನೆರವೇರಿಸುತ್ತಿದ್ದರು. ಬೃಹತ್ ಸಾರ್ವಜನಿಕ ಯೋಜನೆಯ ಲೋಕಾರ್ಪಣೆಗಾಗಿ ವಿಧ್ಯುಕ್ತವಾಗಿ ಬಟನ್ ಒತ್ತುವ ಮೂಲಕ ಚಾಲನೆ ನೀಡುವಾಗ ಅದು ಚಾಲನೆಯಾಗಲಿಲ್ಲ. ಇದರಿಂದ ಮುಖ್ಯಮಂತ್ರಿ ತೀವ್ರ ಮುಜುಗರ ಅನುಭವಿಸಿದರು.
ಸಿಎಂ ಭಾಗವಹಿಸುವ ಕಾರ್ಯಕ್ರಮದ ಸ್ಥಳಗಳಲ್ಲಿ ಸಮರ್ಪಕ ವಿದ್ಯುತ್ ವ್ಯವಸ್ಥೆಯ ಮುನ್ನೆಚ್ಚರಿಕೆ ಕ್ರಮಗಳನ್ನು ನಿರ್ವಹಿಸಲು ಚೆಸ್ಕಾಂ ಎಂಡಿ ಸಿ.ಎನ್.ಶ್ರೀಧರ್ ಅವರಿಗೆ ಮೈಸೂರು ಜಿಲ್ಲಾಧಿಕಾರಿ ಅಧಿಕೃತ ಜ್ಞಾಪನದ ಆದೇಶದಲ್ಲಿ ಸೂಚನೆ ನೀಡಿದ್ದರು. ಚೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಖುದ್ದು ಹಾಜರಿದ್ದು, ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ಕರ್ತವ್ಯ ನಿರ್ವಹಿಸಬೇಕಿತ್ತು. ಆದರೆ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿಲ್ಲ. ವ್ಯವಸ್ಥಿತವಾಗಿ ಕಾರ್ಯಕ್ರಮಗಳು ಯಶಸ್ವಿಗೊಳಿಸಲು ಸಹಕರಿಸದೇ ಕರ್ತವ್ಯದಲ್ಲಿ ಅಸಡ್ಡೆ ಮತ್ತು ನಿರ್ಲಕ್ಷ್ಯತನ ತೋರಿಸಿದ್ದಾರೆ. ಈ ಮೂಲಕ ಸರ್ಕಾರವನ್ನು ಮುಜುಗರಕ್ಕೀಡು ಮಾಡಿದ್ದಾರೆ. ಹಾಗಾಗಿ, ಈ ಸನ್ನಿವೇಶ ಸೃಷ್ಟಿಯಾಗಲು ಅವರು ನೇರ ಕಾರಣಕರ್ತರು ಎಂದು ಅಮಾನತು ಆದೇಶದಲ್ಲಿ ಕಾರಣಗಳನ್ನು ಉಲ್ಲೇಖಿಸಲಾಗಿದೆ.
ಚೆಸ್ಕಾಂ ಎಂಡಿ ಸ್ಥಳದಲ್ಲಿ ಹಾಜರಿಲ್ಲದೇ ಕರ್ತವ್ಯ ಲೋಪವೆಸಗಿರುವ ಸಂಬಂಧ ಮತ್ತು ಶಿಷ್ಟಾಚಾರ ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ತತ್ಕ್ಷಣವೇ ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಲಾದ ಪ್ರಸ್ತಾವನೆಯನ್ನು ಪರಿಶೀಲಿಸಿ, ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಗೈರಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸದೇ ತೀವ್ರ ಮುಜುಗರ ಉಂಟುಮಾಡುವ ಹಾಗೂ ಸರ್ಕಾರಿ ನೌಕರರಿಗೆ ತರವಲ್ಲದ ರೀತಿಯಲ್ಲಿ ವರ್ತಿಸಿರುವುದು ಜಿಲ್ಲಾಧಿಕಾರಿಯವರ ವರದಿಯಂತೆ ಸ್ಪಷ್ಟವಾಗಿ ಕಂಡುಬರುತ್ತದೆ. ಹಾಗಾಗಿ ಅಧಿಕಾರಿಯ ವಿರುದ್ಧ ಇಲಾಖಾ ವಿಚಾರಣೆ ಬಾಕಿ ಇರಿಸಿ ಅಮಾನತುಪಡಿಸಲು ತೀರ್ಮಾನಿಸಿ ಆದೇಶಿಸಲಾಗಿದೆ.
Principal Secretary of Department of personnel and administrative reforms Umadevi has passed an order suspending MD of CESC (Chamundeshwari Electricity Supply Corporation) C N Sridhar, KAS (super scale time) for reportedly creating an embarassing situation for Chief Minister Siddaramaiah and the state government since the electronic equipment to unveil the curtain of plaque at the event in Piriyapatna taluk did not function.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am