ಬ್ರೇಕಿಂಗ್ ನ್ಯೂಸ್
02-02-24 11:01 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.2: ಕಲ್ಲು ಹೊಡೆದುಕೊಂಡು ಇದ್ದವರನ್ನ ಲೋಕಸಭೆಗೆ ಕಳುಹಿಸಿದರೆ ಇನ್ನೇನಾಗುತ್ತೆ. ಇಲ್ಲಿ ಬಡ ಜನರ ಲೂಟಿ ಮಾಡಿಕೊಂಡು ಸಾಕ್ಷಿಗುಡ್ಡೆ ಮಾಡಿದ್ದಾರೆ ಎಂದು ಸಂಸದ ಡಿ.ಕೆ.ಸುರೇಶ್ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಪ್ರತ್ಯೇಕ ರಾಷ್ಟ್ರದ ಬಗ್ಗೆ ಡಿ.ಕೆ.ಸುರೇಶ್ ಹೇಳಿಕೆ ವಿಚಾರ ಕುರಿತು ಬಿಡದಿಯಲ್ಲಿ ಸುದ್ದಿಗಾರೊಂದಿಗೆ ಪ್ರತಿಕ್ರಿಯಿಸಿದ ಅವರು, ನಿನ್ನೆಯ ದಿನ ಡಿ.ಕೆ.ಸುರೇಶ್ ದೇಶ ವಿಭಜನೆ ಬಗ್ಗೆ ಮಾತನಾಡಿದ್ದಾರೆ. ಕೇಂದ್ರ ಸರ್ಕಾರ ಆರ್ಥಿಕ ತಾರತಮ್ಯ, ಕರ್ನಾಟಕಕ್ಕೆ ಅನ್ಯಾಯ ಎಂಬ ಕಾರಣ ಕೊಟ್ಟಿದ್ದಾರೆ. ಕರ್ನಾಟಕದಲ್ಲಿ ಬಿರಿಯಾನಿ ಊಟ ಮಾಡಿ ಭಾರತ್ ಜೋಡೊ ನ್ಯಾಯ ಯಾತ್ರೆ ಮಾಡಿದರು. ಈಗ ವಿಭಜನೆ ಬಗ್ಗೆ ಮಾತನಾಡುತ್ತಿದ್ದಾರೆ. ಒಂದು ವೇಳೆ ವಿಭಜನೆ ಆಯ್ತು ಅಂತ ತಿಳಿದುಕೊಳ್ಳಿ. ತಮಿಳುನಾಡಿನಿಂದ ಕಾವೇರಿ ವಿಚಾರದಲ್ಲಿ ನ್ಯಾಯ ಪಡೆಯಲು ಸಾಧ್ಯವೇ ಎಂದು ಟಾಂಗ್ ಕೊಟ್ಟಿದ್ದಾರೆ.
174 ಕೋಟಿ ರೂ. ದೇಶದ ಮೊದಲನೇ ಬಜೆಟ್. ಆಗ ದೇಶದಲ್ಲಿ ಆಹಾರದ ಕೊರತೆ ಇತ್ತು. ಆಗಿನಿಂದಲೂ ಸರ್ಕಾರಗಳು ಬಜೆಟ್ ಮಂಡಿಸಿಕೊಂಡು ಬಂದಿವೆ. ನಾವು ಫೈನಾನ್ಸ್ ಕಮಿಷನ್ಗಳನ್ನ ಮಾಡಿಕೊಂಡಿದ್ದೇವೆ. ಅವರು ಎಲ್ಲಾ ರಾಜ್ಯಕ್ಕೂ ಭೇಟಿ ಕೊಟ್ಟು ಪರಿಶೀಲನೆ ಮಾಡುತ್ತಾರೆ. ಯಾವ ರಾಜ್ಯಕ್ಕೆ ಎಷ್ಟು ಹಣ ಬೇಕು ಅನ್ನೋ ವರದಿ ಕೊಡುತ್ತಾರೆ. ಯಾವ ರಾಜ್ಯ ಅಭಿವೃದ್ಧಿ ಆಗಿಲ್ಲ. ಯಾವ ರಾಜ್ಯ ಅಭಿವೃದ್ಧಿ ಆಗಿದೆ ಅದನ್ನ ನೋಡಿ ಹಣ ಹಂಚುತ್ತಾರೆ. ಈ ಹಂಚಿಕೆಯನ್ನು ಕಾಂಗ್ರೆಸ್ ಇದ್ದಾಗಲೇ ಪ್ರಾರಂಭ ಮಾಡಿದ್ದು. ಮೋದಿ ಬಂದು ಇದನ್ನ ಪ್ರಾರಂಭ ಮಾಡಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.
ಕಲ್ಲು ಹೊಡೆದುಕೊಂಡು ಇದ್ದೋರನ್ನ ಲೋಕಸಭೆಗೆ ಕಳುಹಿಸಿದ್ರೆ ಇನ್ನೇನಾಗುತ್ತೆ. ಇಲ್ಲಿ ಬಡ ಜನರ ಲೂಟಿ ಮಾಡಿಕೊಂಡು ಸಾಕ್ಷಿಗುಡ್ಡೆ ಮಾಡಿದ್ದಾರೆ. ಅಂಥವರನ್ನ ತೆಗೆದುಕೊಂಡು ಹೋಗಿ ದೇಶ ಕಟ್ಟು ಅಂತ ಕಳುಹಿಸಿದ್ರೆ ಕಟ್ತಾರಾ? ಅವರ ಸಾಮ್ರಾಜ್ಯ ಕಟ್ಟುಕೊಳ್ತಾರೆ ಅಷ್ಟೇ. ಇವರಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ ಎಂದು ಲೇವಡಿ ಮಾಡಿದ್ದಾರೆ.
What will happen if those who pelted stones are sent to the Lok Sabha? Former Chief Minister HD Kumaraswamy has lashed out at DK Suresh, accusing him of looting the poor people here.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
21-07-26 12:18 pm
HK News Staffer
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm