ಬ್ರೇಕಿಂಗ್ ನ್ಯೂಸ್
07-02-24 03:10 pm HK News Desk ಕರ್ನಾಟಕ
ಕಲಬುರಗಿ, ಫೆ 06: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್ಟಿಸಿ) ಕರಾವಳಿ ಕರ್ನಾಟಕವನ್ನು ಸಂಪರ್ಕಿಸಲು ಐಷಾರಾಮಿ ವೋಲ್ವೋ ಕಲ್ಯಾಣರಥ ನೂತನ ಬಸ್ ಸೇವೆಯನ್ನು ಆರಂಭಿಸಿದೆ.
ಕೆಕೆಆರ್ಟಿಸಿಯ ಕಲಬುರಗಿ ವಿಭಾಗ-1ರ ಕಲಬುರಗಿ ಘಟಕ ಕಲಬುರಗಿ-ಬೆಂಗಳೂರು, ಕಲಬುರಗಿ-ಮಂಗಳೂರು ನಡುವೆ ನೂತನ ವೋಲ್ವೋ ಮಲ್ಟಿ ಆಕ್ಸಲ್ ಸ್ಲೀಪರ್ ಬಸ್ ಸೇವೆಯನ್ನು ಆರಂಭಿಸಿದೆ.
'ಕಲ್ಯಾಣರಥ' ಹೆಸರಿನ ವೋಲ್ವೋ ಮಲ್ಟಿ ಆಕ್ಸಲ್ ಸ್ಲೀಪರ್ ಬಸ್ ಹೊಸದಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಸೇರ್ಪಡೆಗೊಂಡಿದೆ. ಈ ಐಷಾರಾಮಿ ಬಸ್ಗೆ ರಾಜ್ಯದಲ್ಲಿ ಈಗಾಗಲೇ ಹಲವು ಮಾರ್ಗದಲ್ಲಿ ಸಂಚಾರ ನಡೆಸುತ್ತಿವೆ.

ಕಲಬುರಗಿ ಮತ್ತು ಮಂಗಳೂರು ನಡುವಿನ ಕಲ್ಯಾಣ ರಥ ಸ್ಲೀಪರ್ ಬಸ್ ಸೇವೆಗೆ 1,100 ಪ್ರಯಾಣ ದರವನ್ನು ನಿಗದಿ ಮಾಡಲಾಗಿದೆ. ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಆನ್ಲೈನ್ ಟಿಕೆಟ್ ಬುಕ್ ಮಾಡುವ ಅವಕಾಶವನ್ನು ಸಹ ನೀಡಲಾಗಿದೆ.
ಈ ಬಸ್ ಕಲಬುರಗಿಯಿಂದ ಸಂಜೆ 5 ಗಂಟೆಗೆ ಹೊರಡಲಿದೆ. ಮಂಗಳೂರು ನಗರವನ್ನು ಮರುದಿನ ಬೆಳಗ್ಗೆ 7.30ಕ್ಕೆ ತಲುಪಲಿದೆ. ಇನ್ನೂ ಮಂಗಳೂರಿನಿಂದ ಸಂಜೆ 5 ಗಂಟೆಗೆ ಹೊರಡುವ ಬಸ್ ಕಲಬುರಗಿ ನಗರವನ್ನು ಮಾರನೇ ದಿನ ಬೆಳಗ್ಗೆ 7.30ಕ್ಕೆ ತಲುಪಲಿದೆ.
ವಿಜಯಪುರ-ಬೆಂಗಳೂರು, ಸಿಂಧನೂರು-ಬೆಂಗಳೂರು, ಕಲಬುರಗಿ-ಬೆಂಗಳೂರು ಸೇರಿದಂತೆ ವಿವಿಧ ಮಾರ್ಗದಲ್ಲಿ ಈಗಾಗಲೇ ಕಲ್ಯಾಣರಥ ಬಸ್ಗಳು ಸಂಚಾರ ನಡೆಸುತ್ತಿವೆ. ಪ್ರಯಾಣಿಕರಿಂದ ಸಹ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.
'ಕಲ್ಯಾಣರಥ' ಬ್ರಾಂಡ್ನ ವೋಲ್ವೋ ಮಲ್ಟಿ ಆಕ್ಸೆಲ್ ಸ್ಲೀಪರ್ ಕ್ಲಾಸ್ ಬಸ್ ಇದಾಗಿದ್ದು, 40 ಆಸನಗಳನ್ನು ಹೊಂದಿದೆ. ಈ ಬಸ್ 350 ಬಿಎಸ್-6 ಇಂಜಿನ್ ಹೊಂದಿದೆ. ಬಸ್ಸಿಗೆ ವಿಶಿಷ್ಟ ಸಸ್ಪೆಕ್ಷನ್ಗಳನ್ನು ಅಳವಡಿಸಲಾಗಿದೆ.
Ksrtc introduces Kalaburagi Mangalore Ksrtc Volvo bus Kalyana Ratha. The Kalayana Karnataka Road Transport Corporation (KKRTC) has launched fancy new buses titled Kalyana Ratha which will travel between Mangaluru and towns in Kalyana Karnataka region. These AC Sleeper buses will be on par with Karnataka State Road Transport Corporation’s (KSRTC) Ambari Utsav buses, the European style buses which were launched last year.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 12:25 pm
HK News Staffer
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am