ಬ್ರೇಕಿಂಗ್ ನ್ಯೂಸ್
07-02-24 10:45 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.7: ಕಾಂಗ್ರೆಸ್ ಲೋಕಸಭೆ ಚುನಾವಣೆಗೆ ಗಂಭೀರ ತಯಾರಿ ನಡೆಸಿದ್ದು 16 ಕ್ಷೇತ್ರಗಳಿಗೆ ಈ ತಿಂಗಳಾಂತ್ಯದಲ್ಲೇ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಿದೆ. ಕೆಲವು ಕ್ಷೇತ್ರಗಳಿಗೆ ಹಾಲಿ ಸಚಿವರನ್ನೇ ಕಣಕ್ಕಿಳಿಸಲು ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದೆ.
ಕೋಲಾರ ಮೀಸಲು ಕ್ಷೇತ್ರವಾಗಿದ್ದು ಹಳೆ ಹುಲಿ, ಹಾಲಿ ಸಚಿವ ಕೆ.ಎಚ್ ಮುನಿಯಪ್ಪ ಅವರನ್ನು ಕಣಕ್ಕಿಳಿಸಿ ಗೆಲ್ಲುವುದಕ್ಕೆ ಪಣ ತೊಟ್ಟಿದೆ. ಮೈಸೂರು - ಕೊಡಗು ಲೋಕಸಭೆಗೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅಥವಾ ವೈದ್ಯ ಶುಶ್ರುತ್ ಗೌಡ ಹೆಸರು ಮುಂಚೂಣಿಯಲ್ಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರನ್ನು ಕಣಕ್ಕಿಳಿಸುವ ಬಗ್ಗೆಯೂ ಚರ್ಚೆಗಳು ನಡೆದಿವೆ. ಚಿಕ್ಕಬಳ್ಳಾಪುರದಲ್ಲಿ ಯುವ ನೇತಾರ ರಕ್ಷಾ ರಾಮಯ್ಯ ಹೆಸರು ಮುಂಚೂಣಿಯಲ್ಲಿದ್ದು ಟಿಕೆಟ್ ಗಿಟ್ಟಿಸುವುದು ಖಚಿತ ಎನ್ನಲಾಗುತ್ತಿದೆ. ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರೂ ಇಲ್ಲಿ ರೇಸಿನಲ್ಲಿದ್ದಾರೆ.
ಬೆಳಗಾವಿಯಲ್ಲಿ ವೈದ್ಯ ಗಿರೀಶ್ ಅಥವಾ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್, ಉತ್ತರ ಕನ್ನಡದಲ್ಲಿ ಶಾಸಕಿ ಅಂಜಲಿ ನಿಂಬಾಳ್ಕರ್ ಅಥವಾ ಭೀಮಣ್ಣ ನಾಯಕ್, ತುಮಕೂರಿನಲ್ಲಿ ಮಾಜಿ ಸಂಸದ ಮುದ್ದಹನುಮೇಗೌಡ, ಮಂಡ್ಯದಲ್ಲಿ ಸಮಾಜ ಸೇವಕ ಸ್ಟಾರ್ ಚಂದ್ರು, ಕೊಪ್ಪಳದಲ್ಲಿ ರಾಘವೇಂದ್ರ ಹಿಟ್ನಾಳ್ ಸಹೋದರ ರಾಜಶೇಖರ್ ಹಿಟ್ನಾಳ್, ಮಾಜಿ ಶಾಸಕ ಅಮರೇಗೌಡ ಬಯ್ಯಾಪುರ ಹಾಗೂ ಮಾಜಿ ಸಂಸದ ಶಿವರಾಮೇಗೌಡ ಹೆಸರು ಕೇಳಿಬರುತ್ತಿದೆ.
ಚಾಮರಾಜನಗರದಲ್ಲಿ ಸಚಿವ ಹೆಚ್.ಸಿ ಮಹದೇವಪ್ಪ ಅವರನ್ನು ಕಣಕ್ಕಿಳಿಸಬೇಕೆಂಬ ಒತ್ತಡ ಇದೆ. ಬಳ್ಳಾರಿಯಲ್ಲಿ ಇ.ತುಕರಾಂ ಮಗಳು ಸೌಪರ್ಣಿಕಾ, ಬೀದರ್ ಈಶ್ವರ್ ಖಂಡ್ರೆ ಪುತ್ರ ಸಾಗರ್ ಖಂಡ್ರೆ, ಕಲಬುರಗಿ ಮಲ್ಲಿಕಾರ್ಜುನ ಖರ್ಗೆ ಅಳಿಯ ರಾಧಾಕೃಷ್ಣಗೆ ಟಿಕೆಟ್ ಕೊಡುವ ಸಾಧ್ಯತೆ ಇದೆ. ಇಷ್ಟೇ ಅಲ್ಲ, ಬೆಂಗಳೂರು ದಕ್ಷಿಣಕ್ಕೆ ಎನ್. ರಮೇಶ್ ಕುಮಾರ್, ಬೆಂಗಳೂರು ಕೇಂದ್ರ ಹ್ಯಾರಿಸ್, ಬೆಂಗಳೂರು ಉತ್ತರಕ್ಕೆ ಕುಸುಮಾ ಹನುಮಂತರಾಯಪ್ಪ, ಹಾಸನಕ್ಕೆ ಶ್ರೇಯಸ್ ಪಟೇಲ್, ಹುಬ್ಬಳ್ಳಿ ಧಾರವಾಡಕ್ಕೆ ವಿನಯ್ ಕುಲಕರ್ಣಿ ಪತ್ನಿ ಶಿವಲೀಲಾ, ಚಿಕ್ಕೋಡಿಯಿಂದ ಪ್ರಕಾಶ್ ಹುಕ್ಕೇರಿಗೆ ಟಿಕೆಟ್ ನೀಡುವ ನಿರೀಕ್ಷೆ ಇದ್ದು, ಈ ಹೆಸರುಗಳನ್ನು ಸಂಭಾವ್ಯರ ಪಟ್ಟಿಯಲ್ಲಿ ಸೇರಿಸಲಾಗಿದೆ.
ಉಳಿದಂತೆ, ಉಡುಪಿಗೆ ಜಯಪ್ರಕಾಶ್ ಹೆಗ್ಡೆ, ದಕ್ಷಿಣ ಕನ್ನಡಕ್ಕೆ ವಿಜಯಕುಮಾರ್ ಸೊರಕೆ ಹೆಸರು ಕೇಳಿಬರುತ್ತಿದೆ. ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಬಿಜೆಪಿ ಟಿಕೆಟ್ ಸಿಗದಿದ್ದರೆ, ಕಾಂಗ್ರೆಸ್ ಸೀಟು ಕೊಡಬೇಕೆಂಬ ಒತ್ತಡ ಇದೆ. ಆದರೆ ಸಚಿವ ಚೆಲುವರಾಯಸ್ವಾಮಿ ಸೇರಿ ಕೆಲವು ನಾಯಕರು ಸುಮಲತಾಗೆ ಟಿಕೆಟ್ ಕೊಡಬಾರದು ಎಂಬ ನಿಲುವಿನಲ್ಲಿದ್ದಾರೆ. ಒಟ್ಟಿನಲ್ಲಿ ಗೊಂದಲ ಇಲ್ಲದ 16 ಕ್ಷೇತ್ರಗಳಿಗೆ ಮೊದಲು ಅಭ್ಯರ್ಥಿ ಫೈನಲ್ ಮಾಡಿ ಬಿಡುಗಡೆ ಮಾಡುವ ಸಾಧ್ಯತೆಯಿದೆ.
The Congress is gearing up for the Lok Sabha elections and will finalise its candidates for 16 constituencies by the end of this month. The Congress high command has decided to field sitting ministers in some constituencies.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am