ಬ್ರೇಕಿಂಗ್ ನ್ಯೂಸ್
13-02-24 02:29 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.13: ಪ್ರಧಾನಿ ಮೋದಿ ಯುನೈಟೆಡ್ ಅರಬ್ ಎಮಿರೇಟ್ಸ್ ಪ್ರವಾಸ ಕೈಗೊಂಡಿದ್ದು ಗಲ್ಫ್ ದೇಶದಲ್ಲಿ ನಿರ್ಮಾಣಗೊಂಡಿರುವ ಬೃಹತ್ ಹಿಂದೂ ದೇವಸ್ಥಾನವನ್ನು ಫೆ.14ರಂದು ಉದ್ಘಾಟಿಸಲಿದ್ದಾರೆ.
ಯುಎಇಯ ಬಿಎಪಿಎಸ್ ಸ್ವಾಮಿ ನಾರಾಯಣ ಸಂಸ್ಥೆ ಅಬುಧಾಬಿಯಲ್ಲಿ 27 ಎಕರೆ ಪ್ರದೇಶದಲ್ಲಿ ಬೃಹತ್ ಹಿಂದೂ ದೇವಸ್ಥಾನವನ್ನು ನಿರ್ಮಿಸಿದೆ. ಇಲ್ಲಿ ಕೃಷ್ಣ-ರಾಧೆ, ಶಿವ- ಪಾರ್ವತಿ ಮತ್ತು ರಾಮ-ಸೀತೆ, ಲಕ್ಷ್ಮಣ ಹಾಗೂ ಹನುಮಂತ ಸೇರಿ ಬಹುತೇಕ ಎಲ್ಲ ಹಿಂದೂ ದೇವರುಗಳನ್ನ ಪೂಜಿಸಲಾಗುತ್ತದೆ. ಮಂದಿರವು 108 ಅಡಿ ಎತ್ತರ, 262 ಅಡಿ ಉದ್ದ, 180 ಅಡಿ ಅಗಲ ಹೊಂದಿದ್ದು ಏಷ್ಯಾದಲ್ಲಿಯೆ ಅತಿದೊಡ್ಡ ಹಿಂದು ದೇಗುಲ ಎಂಬ ಹೆಗ್ಗಳಿಕೆ ಪಡೆದಿದೆ.
ಇದೇ ಸಂದರ್ಭದಲ್ಲಿ ಫೆ.13ರಂದು ಅಬುಧಾಬಿಯಲ್ಲಿ ‘ಆಹ್ಲಾನ್ ಮೋದಿ’ ಹೆಸರಿನಲ್ಲಿ ಸಮಾವೇಶ ಹಮ್ಮಿಕೊಂಡಿದ್ದು ಕಾರ್ಯಕ್ರಮಕ್ಕೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. 65,000ಕ್ಕೂ ಹೆಚ್ಚು ಮಂದಿ ನೋಂದಣಿ ಮಾಡಿಕೊಂಡಿದ್ದು ಅರಬ್ ನೆಲದಲ್ಲಿ ಅತಿ ಹೆಚ್ಚು ಭಾರತೀಯರು ಸೇರುವ ಮೋದಿ ಕಾರ್ಯಕ್ರಮವಾಗಿ ಮೂಡಿಬರಲಿದೆ. ಈ ಕುರಿತು ಯುಎಇನಲ್ಲಿರುವ ಇಂಡಿಯನ್ ಪೀಪಲ್ ಫೋರಂ ಅಧ್ಯಕ್ಷ ಮತ್ತು ‘ಅಹ್ಲಾನ್ ಮೋದಿ’ ಸಮಾವೇಶ ಆಯೋಜನೆಯ ಪ್ರಮುಖರಾದ ಜಿತೇಂದ್ರ ವೈದ್ಯ ಹರ್ಷ ವ್ಯಕ್ತಪಡಿಸಿದ್ದಾರೆ.
ಇದು ಅತ್ಯಂತ ವಿಶಿಷ್ಟ ಕಾರ್ಯಕ್ರಮ, ಏಕೆಂದರೆ ಈ ಕಾರ್ಯಕ್ರಮವನ್ನು ಯಾವುದೇ ಒಂದು ಸಂಸ್ಥೆ ನಡೆಸುತ್ತಿಲ್ಲ. ಇಡೀ ಭಾರತೀಯ ಸಮುದಾಯ ಸೇರಿಕೊಂಡು ಆಯೋಜಿಸುತ್ತಿದೆ. ಮೋದಿ ಬರುತ್ತಾರೆಂದು ಹೆಚ್ಚಿನ ಸಂಖ್ಯೆಯ ಜನ ಸೇರುತ್ತಾರೆ. ಇದು ಮೋದಿ ಅವರ ಮೇಲೆ ಜನರಿಗೆ ಇರುವ ಪ್ರೀತಿ ಎಂದು ಶ್ಲಾಘಿಸಿದ್ದಾರೆ.
ಆಹ್ಲಾನ್ ಮೋದಿ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವುದಲ್ಲದೆ, ವಿಶೇಷ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸುಮಾರು 700 ಕಲಾವಿದರು ವಿವಿಧ ಭಾರತೀಯ ಕಲಾ ಪ್ರಕಾರಗಳನ್ನ ಪ್ರದರ್ಶಿಸಲಿದ್ದಾರೆ. ಮೋದಿ ಈವರೆಗೆ ಹತ್ತು ವರ್ಷಗಳಲ್ಲಿ ಅಮೆರಿಕ, ಜಪಾನ್, ಆಸ್ಟ್ರೇಲಿಯಾ, ಸಿಂಗಾಪುರ್, ಚೀನಾ, ಸೌದಿ ಅರೇಬಿಯಾ ಸೇರಿದಂತೆ 66 ದೇಶಗಳಿಗೆ ಪ್ರವಾಸ ಮಾಡಿದ್ದಾರೆ. ಪ್ರತಿ ಬಾರಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮೋದಿ ಮಾತನಾಡುವುದನ್ನು ರೂಢಿ ಮಾಡಿಕೊಂಡಿದ್ದಾರೆ. ಮೋದಿಯವರ ಬಗ್ಗೆ ದೂರದೃಷ್ಟಿ ಉಳ್ಳ ಮಾತುಗಳನ್ನು ಕೇಳಲು ಭಾರೀ ಸಂಖ್ಯೆಯಲ್ಲಿ ಭಾರತೀಯರು ಸೇರುತ್ತಾರೆ.
ಯುಎಇ ಭೇಟಿಗೆ ಮೋದಿ ಉತ್ಸುಕ
ಯುಎಇ ಭೇಟಿ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಯುಎಇಗೆ ನನ್ನ ಭೇಟಿ ಅಧಿಕಾರ ವಹಿಸಿಕೊಂಡ ನಂತರ ಏಳನೆಯದ್ದಾಗಿದೆ. ಇದು ಭಾರತ-ಯುಎಇ ಬಲವಾದ ಸ್ನೇಹಕ್ಕೆ ನಾವು ನೀಡುವ ಆದ್ಯತೆಯನ್ನು ಸೂಚಿಸುತ್ತದೆ. ಮೊಹಮ್ಮದ್ ಬಿನ್ ಝಾಯೆದ್ ಅವರನ್ನು ಭೇಟಿ ಮಾಡಲು ಉತ್ಸುಕನಾಗಿದ್ದೇನೆ. ಅದರಲ್ಲೂ ಯುಎಇಯಲ್ಲಿ ಮೊದಲ ಹಿಂದೂ ಮಂದಿರ ಉದ್ಘಾಟಿಸುವ ಗೌರವ ನನಗೆ ದೊರಕಿದೆ. ಅಬುಧಾಬಿಯಲ್ಲಿ ನಡೆಯುವ ಸಮುದಾಯ ಕಾರ್ಯಕ್ರಮದಲ್ಲಿ ನಾನು ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.
Prime Minister Narendra Modi will inaugurate the BAPS (Bochasanwasi Akshar Purushottam Swaminarayan Sanstha) Mandir in Abu Dhabi during his two-day visit to the United Arab Emirates (UAE) on 13-14th February. Besides the BAPS Mandir inauguration, PM Modi will also address the Indian diaspora at the 'Ahlan Modi' event on February 13. The temple will be opened to the public from March 1.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am