ಬ್ರೇಕಿಂಗ್ ನ್ಯೂಸ್
14-02-24 06:54 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.14: ಕರ್ನಾಟಕ ರಾಜ್ಯ ತೀವ್ರ ಬರಗಾಲದಲ್ಲಿದ್ದು ರೈತರಿಗೆ ಪರಿಹಾರ ಕೊಡಲು ಹಣ ಇಲ್ಲದಿದ್ದಾಗ ಸ್ಪೀಕರ್ ಯು.ಟಿ. ಖಾದರ್ ಓಡಾಟಕ್ಕೆ ಹೊಸ ದುಬಾರಿ ಫಾರ್ಚುನರ್ ಕಾರು ಬೇಕಿತ್ತಾ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನಿಸಿದ್ದಾರೆ.
ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಅವರ ಓಡಾಟಕ್ಕೆ ಹೊಸ ಮಾದರಿಯ, ಕಪ್ಪು ಬಣ್ಣದ ಐಷಾರಾಮಿ ಫಾರ್ಚೂನರ್ ಕಾರು ಖರೀದಿಸಿರುವುದಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಕ್ಷೇಪ ವ್ಯಕ್ತಪಡಿಸಿದ್ದು, ಈ ಕುರಿತು ಟ್ವೀಟ್ ಮಾಡಿದ್ದಾರೆ. ‘ದುಂದುವೆಚ್ಚಗಳನ್ನು ಕಡಿಮೆ ಮಾಡಿ, ಇರುವ ವಾಹನವನ್ನೇ ಮಾರ್ಪಾಡು ಮಾಡಿಕೊಂಡು ಬಳಸಿ ಬೊಕ್ಕಸಕ್ಕೆ ಹೊರೆಯಾಗದೆ ಇರುವ ಹಾಗೆ ಮಾಡಿ ಮೇಲ್ಪಂಕ್ತಿ ಹಾಕಿ ಕೊಡಬೇಕಾಗಿದ್ದ ಸಭಾಧ್ಯಕ್ಷರು ಐಷಾರಾಮಿ ಕಾರನ್ನು ಖರೀದಿ ಮಾಡುವ ಅವಶ್ಯವಿರಲಿಲ್ಲ ಎಂದು ಹೇಳಿದ್ದಾರೆ.
ಅಲ್ಲದೆ, ರಾಜ್ಯ ಭೀಕರ ಬರದಿಂದ ಕಂಗೆಟ್ಟಿರುವ ಸಂದರ್ಭದಲ್ಲಿ 223 ತಾಲೂಕುಗಳು ಬರ ಪೀಡಿತವೆಂದು ಸರ್ಕಾರವೇ ಘೋಷಣೆ ಮಾಡಿರುವಾಗ ಈ ರೀತಿಯಾದ ಅನುತ್ಪಾದಕ ವೆಚ್ಚಗಳಿಗೆ ಕಡಿವಾಣ ಹಾಕಬೇಕಿತ್ತು ಎಂದು ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ. ಯು.ಟಿ. ಖಾದರ್ ಅವರಿಗೆ ವಿಧಾನಸಭೆ ಸಚಿವಾಲಯದಿಂದ ಹೊಸ ಕಾರು (ಕೆಎ 11 ಜಿಎ 1) ಒದಗಿಸಲಾಗಿದ್ದು, ವಿಶೇಷ ವಿನ್ಯಾಸ ಮಾಡಿರುವುದರಿಂದ 41 ಲಕ್ಷ ವೆಚ್ಚ ಆಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
360 ಡಿಗ್ರಿ ಕ್ಯಾಮೆರಾ, ಪ್ರಯಾಣದ ಸಂದರ್ಭದಲ್ಲಿ ಮುಂದಿನ ಸೀಟಿನಲ್ಲಿ ಕುಳಿತುಕೊಳ್ಳುವವರ ಮುಖಕ್ಕೆ ಬೆಳಕು ನೀಡುವ ವಿಶೇಷ ಎಲ್ಇಡಿ ಲೈಟ್ ಸೌಲಭ್ಯವನ್ನು ಈ ಕಾರು ಹೊಂದಿದ್ದು, ಜಿಆರ್ ಕಿಟ್ ಅಳವಡಿಸುವ ಮೂಲಕ ಕಾರಿಗೆ ವಿಶೇಷ ವಿನ್ಯಾಸ ಕೂಡ ಮಾಡಲಾಗಿದೆ. ಕಾರು ಮುಂಭಾಗ ಹಾಗೂ ಹಿಂಭಾಗದಲ್ಲಿ ಗಂಡಭೇರುಂಡ ಲಾಂಛನ ಹೊಂದಿದ್ದು, ರಾಜ್ಯಪಾಲರ ಹೊರತಾಗಿ ವಿಧಾನ ಸಭಾಧ್ಯಕ್ಷರಿಗೆ ಮಾತ್ರ ಈ ಲಾಂಛನ ಅಳವಡಿಸಲು ಅವಕಾಶವಿದೆ.
Karnataka Assembly Speaker U.T. Khader on Friday said that the state is reeling under severe drought and there is no money to pay compensation to farmers. BJP MLA Basanagouda Patil Yatnal questioned whether Khader needed a new expensive Fortuner car to drive.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am