ಬ್ರೇಕಿಂಗ್ ನ್ಯೂಸ್
15-02-24 10:25 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.15: ರಾಜ್ಯದಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಐದನೇ ಅಭ್ಯರ್ಥಿಯಾಗಿ ಜೆಡಿಎಸ್ನ ಕುಪೇಂದ್ರ ರೆಡ್ಡಿ ಕಣಕ್ಕಿಳಿದಿದ್ದು ಕದನ ಕುತೂಹಲ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ಮತ ಲೆಕ್ಕಾಚಾರ ಶುರುವಾಗಿದೆ. ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ತಂತ್ರಗಾರಿಕೆ ನಡೆಸಿದ್ದು ಎಂಟು ವರ್ಷಗಳ ಹಿಂದಿನ ಸೇಡು ತೀರಿಸಿಕೊಳ್ಳಲು ಮುಂದಾಗಿದ್ದಾರೆ.
ಜೆಡಿಎಸ್ ಅಗತ್ಯ ಸಂಖ್ಯಾಬಲ ಇಲ್ಲದಿದ್ದರೂ ಎನ್ಡಿಎ ಕಡೆಯಿಂದ ಕುಪೇಂದ್ರ ರೆಡ್ಡಿ ಅವರನ್ನು ಚುನಾವಣಾ ಕಣಕ್ಕೆ ಇಳಿಸಿದ್ದು, ಕಾಂಗ್ರೆಸ್ಗೆ ಶಾಕ್ ನೀಡಲು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಮುಂದಾಗಿದ್ದಾರೆ. 2016ರಲ್ಲಿ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಎಂಟು ಮಂದಿ ಜೆಡಿಎಸ್ ಶಾಸಕರು ಕಾಂಗ್ರೆಸ್ ಪರ ಅಡ್ಡ ಮತದಾನ ಮಾಡಿದ್ದರು. ಇದರಿಂದ ಜೆಡಿಎಸ್ ಅಭ್ಯರ್ಥಿ ಬಿಎಂ ಫಾರೂಕ್ ಸೋಲು ಅನುಭವಿಸಿದ್ದರು. ಅದರಿಂದ ಎಚ್ಡಿ ಕುಮಾರಸ್ವಾಮಿ ಅವರಿಗೆ ಭಾರೀ ಮುಖಭಂಗವಾಗಿತ್ತು. ಆ ಸೇಡನ್ನು ತೀರಿಸಿಕೊಳ್ಳಲು ಹಲವು ಲೆಕ್ಕಾಚಾರಗಳೊಂದಿಗೆ ಐದನೇ ಅಭ್ಯರ್ಥಿಯನ್ನು ದಳಪತಿಗಳು ಕಣಕ್ಕಿಳಿಸಿದ್ದಾರೆ.
2016ರಲ್ಲಿ ಜೆಡಿಎಸ್ನ 8 ಶಾಸಕರ ಅಡ್ಡ ಮತದಾನದ ಮೂಲಕ ಕಾಂಗ್ರೆಸ್ 3ನೇ ಅಭ್ಯರ್ಥಿ ಕೆ.ಸಿ.ರಾಮಮೂರ್ತಿ ಆಯ್ಕೆ ಸುಸೂತ್ರವಾಗಿತ್ತು. ಇದೇ ತಂತ್ರಗಾರಿಕೆಯನ್ನು ಈಗ ಜೆಡಿಎಸ್-ಬಿಜೆಪಿ ಪ್ರಯೋಗಿಸಿ ಕಾಂಗ್ರೆಸ್ ಶಾಸಕರನ್ನು ಸೆಳೆಯಲು ತಂತ್ರಗಾರಿಕೆ ಹೆಣೆದಿವೆ. ಇದರೊಂದಿಗೆ, ರಾಜ್ಯಸಭೆ ಚುನಾವಣೆಯಲ್ಲಿ ಕುದುರೆ ವ್ಯಾಪಾರ ನಡೆಯುವ ಸಾಧ್ಯತೆ ದಟ್ಟವಾಗಿದ್ದು, ಫಲಿತಾಂಶ ಕುರಿತು ಕುತೂಹಲ ಹೆಚ್ಚಿದೆ.
ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಓರ್ವ ರಾಜ್ಯಸಭಾ ಅಭ್ಯರ್ಥಿ ಗೆಲ್ಲಲು 45 ಮತಗಳು ಬೇಕಾಗುತ್ತವೆ. ವಿಧಾನಸಭೆಯಲ್ಲಿ ಕಾಂಗ್ರೆಸ್ 135, ಬಿಜೆಪಿ 66 ಹಾಗೂ ಜೆಡಿಎಸ್ 19 ಸದಸ್ಯರನ್ನು ಹೊಂದಿದೆ. ಇದರ ಆಧಾರದಲ್ಲಿ ಕಾಂಗ್ರೆಸ್ ಮೂರು ಹಾಗೂ ಬಿಜೆಪಿ ಒಂದು ಸ್ಥಾನಗಳನ್ನು ಗೆಲ್ಲಬಹುದು. ಆದ್ರೆ, ಜೆಡಿಎಸ್ ಬಳಿ ಸಂಖ್ಯಾಬಲ ಇಲ್ಲದಿದ್ದರೂ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಜೆಡಿಎಸ್ ತನ್ನ 19 ಮತಗಳು ಹಾಗೂ ಬಿಜೆಪಿ ಬಳಿ ಉಳಿಯುವ 21 ಹೆಚ್ಚುವರಿ ಮತಗಳ ಬೆಂಬಲದಿಂದ ಕುಪೇಂದ್ರ ರೆಡ್ಡಿ ಅವರು ಸ್ಪರ್ಧೆ ಮಾಡಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಒಟ್ಟು ಮತ 40 ಆಗಲಿದ್ದು ಕುಪೇಂದ್ರ ರೆಡ್ಡಿ ಗೆಲ್ಲಲು ಇನ್ನೂ 5 ಮತಗಳು ಬೇಕಾಗುತ್ತವೆ. ಮೇಲುಕೋಟೆಯ ದರ್ಶನ್ ಪುಟ್ಟಣ್ಣಯ್ಯ, ಹರಪನಹಳ್ಳಿಯ ಲತಾ ಮಲ್ಲಿಕಾರ್ಜುನ್, ಗೌರಿಬಿದನೂರಿನ ಪುಟ್ಟಸ್ವಾಮಿಗೌಡ, ಗಂಗಾವತಿಯ ಜನಾರ್ದನ ರೆಡ್ಡಿ ಅವರು ಪಕ್ಷೇತರ ಶಾಸಕರಿದ್ದಾರೆ, ಇದರಲ್ಲಿ ಮೂವರು ಕಾಂಗ್ರೆಸ್ ಬೆಂಬಲಿಸಿದ್ದರೆ, ಜನಾರ್ದನ ರೆಡ್ಡಿ ಬಿಜೆಪಿ ಬೆಂಬಲಿಸುವ ಸಾಧ್ಯತೆಯಿದೆ. ಹೀಗಾಗಿ ಕುಪೇಂದ್ರ ರೆಡ್ಡಿ ನಾಲ್ಕು ಸ್ಥಾನ ಸೆಳೆಯಲು ಕಸರತ್ತು ನಡೆಸಿದ್ದಾರೆ.
The National Democratic Alliance (NDA) took an unexpected decision to nominate additional candidates for the upcoming Rajya Sabha elections in Karnataka scheduled for February 27. The JD(S) and BJP alliance partners have decided to nominate Kupendra Reddy as the NDA candidate, announced former Karnataka CM HD Kumaraswamy on Wednesday.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am