ಬ್ರೇಕಿಂಗ್ ನ್ಯೂಸ್
21-02-24 09:43 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.21: ಬಿಟ್ ಕಾಯಿನ್ ಹಗರಣವನ್ನು ಲೋಕಸಭೆ ಚುನಾವಣೆ ವೇಳೆಗೆ ಕಾಂಗ್ರೆಸ್ ಸರ್ಕಾರ ಕೆದಕಲು ಆರಂಭಿಸಿದೆ. ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು, ಹಿರಿಯ ಐಪಿಎಸ್ ಅಧಿಕಾರಿ ಸಂದೀಪ್ ಪಾಟೀಲ್ ಅವರನ್ನು ವಿಚಾರಣೆ ನಡೆಸಿದ್ದಾರೆ.
ಪ್ರಕರಣ ಸಂಬಂಧ ಬುಧವಾರ ಮಧ್ಯಾಹ್ನ ವಿಚಾರಣೆಗೆ ಬರುವಂತೆ ಸಂದೀಪ್ ಪಾಟೀಲ್ ಅವರಿಗೆ ನೋಟಿಸ್ ನೀಡಲಾಗಿತ್ತು. ಮಧ್ಯಾಹ್ನ 3.30ರ ಸುಮಾರಿಗೆ ಸಿಐಡಿ ಕಚೇರಿಗೆ ಹಾಜರಾದ ಸಂದೀಪ್ ಪಾಟೀಲ್, ಪ್ರಕರಣ ಸಂಬಂಧ ಕೆಲವು ಮಾಹಿತಿಗಳನ್ನು ಒದಗಿಸಿ ವಾಪಸಾಗಿದ್ದಾರೆ. ಸಂದೀಪ್ ಪಾಟೀಲ್ 2019- 20 ರಲ್ಲಿ ಬೆಂಗಳೂರು ಸಿಸಿಬಿ ವಿಭಾಗದ ಜಂಟಿ ಆಯುಕ್ತರಾಗಿದ್ದಾಗಲೇ ಬಿಟ್ ಕಾಯಿನ್ ಕೇಸ್ ಹೊರಬಂದಿತ್ತು. ಬಳಿಕ ಒಟ್ಟು ಪ್ರಕರಣವನ್ನು ಅಂದಿನ ಸಿಸಿಬಿ ಪೊಲೀಸರು ಮುಚ್ಚಿ ಹಾಕಿದ್ದಾರೆಂದು ಆರೋಪ ಕೇಳಿಬಂದಿತ್ತು. ಬಿಜೆಪಿ ಸರ್ಕಾರದ ಪ್ರಭಾವಿ ರಾಜಕಾರಣಿಗಳು ಹಗರಣದಲ್ಲಿ ಶಾಮೀಲಾಗಿದ್ದರಲ್ಲದೆ, ಪ್ರಮುಖ ಆರೋಪಿ ಶ್ರೀಕಿಯನ್ನು ಬಳಸಿ ಸರ್ಕಾರದ ಬೊಕ್ಕಸಕ್ಕೇ ಕೈಹಾಕಿದ್ದರು. ಹಲವು ವೆಬ್ ಸೈಟ್, ಅಮೆರಿಕದ ಬಿಟ್ ಕಾಯಿನ್ ಸಂಸ್ಥೆಗಳನ್ನು ಹ್ಯಾಕ್ ಮಾಡಿ ಬಿಟ್ ಕಾಯಿನ್ ಗಳನ್ನು ಕಳವು ಮಾಡಲಾಗಿತ್ತು.
ಕಾಂಗ್ರೆಸ್ ಪ್ರಕರಣದ ಹೆಚ್ಚಿನ ತನಿಖೆಗಾಗಿ ಎಸ್ಐಟಿ ತಂಡವನ್ನು ನೇಮಕ ಮಾಡಿತ್ತು. ಇತ್ತೀಚೆಗೆ ಆಗಿನ ಸಿಸಿಬಿ ತಂಡದ ಇಬ್ಬರು ಇನ್ಸ್ ಪೆಕ್ಟರ್ ಗಳನ್ನು ಬಂಧಿಸಿದ್ದ ತಂಡ ಇದೀಗ ಸಂದೀಪ್ ಪಾಟೀಲ್ ಅವರನ್ನು ವಿಚಾರಣೆ ನಡೆಸಿದೆ. ಅಂದು ಸಿಸಿಬಿ ಜಂಟಿ ಪೊಲೀಸ್ ಆಯುಕ್ತರಾಗಿದ್ದ ಸಂದೀಪ್ ಪಾಟೀಲ್ ಬಿಟ್ ಕಾಯಿನ್ ಪ್ರಕರಣದಲ್ಲಿ ತನಿಖಾಧಿಕಾರಿಯಾಗಿದ್ದರು. ಅಲ್ಲದೆ, ಸಿಸಿವಿ ತಂಡದ ಪ್ರಮುಖ ಅಧಿಕಾರಿಗಳೇ ಸಾಕ್ಷ್ಯ ನಾಶಪಡಿಸಿದ ಆರೋಪ ಎದುರಿಸುತ್ತಿದ್ದಾರೆ.
ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಆಪ್ತರಾಗಿದ್ದ ಸಂದೀಪ್ ಪಾಟೀಲ್ ಅವರನ್ನು ವಿಚಾರಣೆಗೆ ಕರೆಸಿದ್ದರಿಂದ ಮುಂದಿನ ಹಂತದಲ್ಲಿ ರಾಜಕಾರಣಿಗಳನ್ನೂ ತನಿಖೆಗೆ ಕರೆಯುವ ಸಾಧ್ಯತೆಯಿದೆ. ಕರಾವಳಿ ಭಾಗದ ಪ್ರಭಾವಿ ರಾಜಕಾರಣಿಯೊಬ್ಬರ ಹೆಸರೂ ಬಿಟ್ ಕಾಯಿನ್ ಹಗರಣದಲ್ಲಿ ಕೇಳಿಬಂದಿತ್ತು.
The Congress government has started raking up the bitcoin scam ahead of the Lok Sabha elections. Senior IPS officer Sandeep Patil has been questioned by the SIT probing the case.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 12:25 pm
HK News Staffer
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am