ಬ್ರೇಕಿಂಗ್ ನ್ಯೂಸ್
22-02-24 04:41 pm HK News Desk ಕರ್ನಾಟಕ
ಮೈಸೂರು, ಫೆ.22: ಸಿದ್ದರಾಮಯ್ಯ ಬಾವಿಯೊಳಗಿನ ಕಪ್ಪೆ. ಮೋದಿ ಸಮುದ್ರದಲ್ಲಿ ಈಜಿದ ಮನುಷ್ಯ. ಅವರಿಗು ಇವರಿಗೂ ಎಲ್ಲಿದೆ ಹೋಲಿಕೆ. ಸುಮ್ಮನೆ ಸಿದ್ದರಾಮಯ್ಯ ಬಾಯಿಗೆ ಬಂದಂತೆ ಕಿರುಚುವುದನ್ನು ಕಲಿತಿದ್ದಾನೆ. ಸಿದ್ದರಾಮಯ್ಯರಿಗು ಜಮೀರ್ ಗು ಏನು ವ್ಯತ್ಯಾಸ ಇದೆ ಹೇಳಿ. ಇಬ್ಬರು ಸುಮ್ಮನೆ ಕೂಗುತ್ತಾರೆ. ಇವರು ಹೆರಿಗೆ ವಾರ್ಡ್ ನಲ್ಲಿ ಕಿರುಚಿದರೆ ಹೆರಿಗೆಯೇ ಆಗಿಬಿಡುತ್ತದೆ. ಹೀಗೆಂದು ಸಿಎಂ ಸಿದ್ದರಾಮಯ್ಯ ಬಗ್ಗೆ ಚಾಮರಾಜನಗರ ಸಂಸದ ಶ್ರೀನಿವಾಸಪ್ರಸಾದ್ ಕುಹಕವಾಡಿದ್ದಾರೆ.
ಸಿದ್ದರಾಮಯ್ಯ ಆ ರೀತಿಯಲ್ಲಿ ಕೂಗುವುದನ್ನು ಕಲಿತಿದ್ದಾರೆ. ನಿರ್ಮಲಾ ಸೀತರಾಮನ್, ರಾಷ್ಟ್ರಪತಿ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಇಂತಹ ಸಿದ್ದರಾಮಯ್ಯ ಬಗ್ಗೆ ಏನು ಮಾತಾಡಲಿ. ಗ್ಯಾರಂಟಿಯಿಂದ ಗೆದ್ದು ಅದೇ ಗುಂಗಿನಲ್ಲಿ ಇದ್ದಾರೆ. ಮೋದಿ ಸರ್ಕಾರ ಮಾಡಿರುವ ಜನಪರ ಯೋಜನೆಗಳ ಮುಂದೆ ಇದೆಲ್ಲ ನಡೆಯುತ್ತ ನೋಡೋಣ. ನಮ್ಮ ಹಕ್ಕು ತೆರಿಗೆ ಅಂತ ದೆಹಲಿಗೆ ಹೋಗಿ ಪ್ರತಿಭಟನೆ ಮಾಡಿದ್ದಾರೆ. ನಮ್ಮ ತೆರಿಗೆಯನ್ನ ಕೇಳುವ ರೀತಿಯಲ್ಲಿ ಕೇಳಿದ್ರೆ ನಮ್ಮ ತೆರಿಗೆ ಬರುತ್ತೆ. ಯಾವ ಸರ್ಕಾರವೂ ನಮಗೆ ಅನ್ಯಾಯ ಮಾಡುವುದಿಲ್ಲ. ನಾನು ಹಿಂದೆ ಕಂದಾಯ ಸಚಿವನಾಗಿದ್ದಾಗಲೂ ಹೋಗಿ ಕೇಳಿದ್ದಕ್ಕೆ ನಮ್ಮ ಹಣ ನಮಗೆ ಬಂದಿತ್ತು ಎಂದು ಶ್ರೀನಿವಾಸ್ ಪ್ರಸಾದ್ ಹೇಳಿದರು.
ಚಾಮರಾಜನಗರ ಲೋಕಸಭೆ ಅಭ್ಯರ್ಥಿ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, ನನ್ನ ಇಬ್ಬರು ಅಳಿಯಂದಿರ ಜೊತೆಗೆ ಸಾಕಷ್ಟು ಜನ ಆಕಾಂಕ್ಷಿಗಳಿದ್ದಾರೆ. ನನಗೆ ನನ್ನ ಅಳಿಯ ಡಾ.ಮೋಹನ್ ಆಕಾಂಕ್ಷಿ ಎನ್ನುವುದು ಗೊತ್ತಿತ್ತು. ಈಗ ಹರ್ಷವರ್ಧನ್ ಕೂಡ ಆಕಾಂಕ್ಷಿ ಎಂಬುದು ಗೊತ್ತಾಗಿದೆ. ಈಗ ನಮ್ಮ ಮನೆಯಲ್ಲಿ ಇಬ್ಬರು ಆಕಾಂಕ್ಷಿಗಳಿದ್ದಾರೆ. ಅವರಿಬ್ಬರೂ ತುಂಬಾ ಅನ್ಯೋನ್ಯವಾಗಿದ್ದಾರೆ. ಯಾರಿಗೆ ಟಿಕೆಟ್ ಕೊಟ್ಟರೂ ಹೊಂದಾಣಿಕೆಯಿಂದ ಕೆಲಸ ಮಾಡುತ್ತಾರೆ. ಚಾಮರಾಜನಗರ ಕ್ಷೇತ್ರದ ಟಿಕೇಟ್ ವಿಚಾರದಲ್ಲಿ ನನ್ನ ಅಭಿಪ್ರಾಯವನ್ನ ವಿಜಯೇಂದ್ರರಿಗೆ ಹೇಳಿದ್ದೇನೆ ಎಂದರು.
ಮಾರ್ಚ್ 17 ರ ನಂತರ ಚುನಾವಣೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ. ಮುಂದಿನ ಚುನಾವಣೆಯಲ್ಲಿ ಬಹಿರಂಗ ಪ್ರಚಾರಕ್ಕೆ ಹೋಗಿವುದಿಲ್ಲ. ಆದರೆ ಬಿಜೆಪಿಯನ್ನು ಬೆಂಬಲಿಸಿ ಎಂದು ಎಲ್ಲರನ್ನು ಕೇಳಿಕೊಳ್ಳುತ್ತೇನೆ ಎಂದರು. ಮಹದೇವಪ್ಪ ಸ್ಪರ್ಧೆ ಬಗ್ಗೆ ಪ್ರತಿಕ್ರಿಯೆ ಕೇಳಿದಾಗ ನಿರಾಕರಿಸಿದ ಅವರು, ಅವರು ನಮ್ಮ ವಿರೋಧಿಗಳು, ಅವರ ಬಗ್ಗೆ ನಾನು ಏನೂ ಮಾತನಾಡಲ್ಲ ಎಂದರು.
Mp Mysuru Srinivas Prasad says siddaramaiah is a frog in the well, and Modi doesn't know to swim. Says what is the difference between siddaramai and Zameer. They both are meant only to scream and if the scream even a pregnant lady can deliver baby easily added
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 07:26 pm
HK News Desk
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am