ಬ್ರೇಕಿಂಗ್ ನ್ಯೂಸ್
22-02-24 10:59 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.22: ಬೆಂಗಳೂರಿನಿಂದ ಏರ್ ಇಂಡಿಯಾ ವಿಮಾನದಲ್ಲಿ ಲಕ್ನೋಗೆ ಹೊರಟಿದ್ದ ಯುವಕನೊಬ್ಬ ತನ್ನನ್ನು ಭಯೋತ್ಪಾದಕ ಎಂದು ಹೇಳಿಕೊಂಡು ವಿಮಾನ ಸಿಬಂದಿ ಮತ್ತು ಪ್ರಯಾಣಿಕರನ್ನು ಒಮ್ಮೆಗೆ ಭೀತಿಗೊಳಪಡಿಸಿದ ಪ್ರಸಂಗ ನಡೆದಿದೆ.
ಉತ್ತರ ಪ್ರದೇಶ ಮೂಲದ ಆದರ್ಶ್ ಕುಮಾರ್ ಸಿಂಗ್ ಈ ರೀತಿ ವರ್ತಿಸಿದ ಯುವಕನಾಗಿದ್ದು ಪೊಲೀಸರು ಬಳಿಕ ವಶಕ್ಕೆ ಪಡೆದಿದ್ದಾರೆ. ಆದರ್ಶ್ ಸಿಂಗ್ ಬೆಂಗಳೂರಿನಲ್ಲಿ ಶಿಕ್ಷಣ ಪಡೆಯುತ್ತಿದ್ದು ಫೆ.17ರಂದು ಏರ್ ಇಂಡಿಯಾ ವಿಮಾನದಲ್ಲಿ ಬೆಂಗಳೂರಿನಿಂದ ಹೊರಟಿದ್ದ. ವಿಮಾನ ಟೇಕಾಫ್ ಆದ ಕೆಲ ಹೊತ್ತಿನಲ್ಲೇ ತನ್ನನ್ನು ಭಯೋತ್ಪಾದಕ ಗುಂಪಿನ ಸದಸ್ಯ ಎಂದು ಹೇಳಿಕೊಂಡಿದ್ದಾನೆ. ಬಳಿಕ ವಿಮಾನವನ್ನು ನಿಲ್ಲಿಸಿ ಭದ್ರತಾ ಸಿಬಂದಿ ಆತನನ್ನು ವಶಕ್ಕೆ ಪಡೆದಿದ್ದಾರೆ. ಆತನ ಬ್ಯಾಗ್ ಪರಿಶೀಲನೆ ನಡೆಸಿದಾಗ ಯಾವುದೇ ಅನುಮಾನಾಸ್ಪದ ವಸ್ತು ಇರಲಿಲ್ಲ.
ಪೊಲೀಸರು ವಿಚಾರಣೆ ನಡೆಸಿದಾಗ ಯುವಕ ಸ್ವಲ್ಪ ಮಟ್ಟಿಗೆ ಮಾನಸಿಕ ಅಸ್ವಸ್ಥತೆ ಹೊಂದಿದ್ದಾನೆ ಅನ್ನೋದನ್ನು ಪತ್ತೆ ಮಾಡಿದ್ದಾರೆ. ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದರಿಂದ ಯುವಕ ಸ್ಥಿಮಿತ ಕಳಕೊಂಡ ರೀತಿ ವರ್ತಿಸುತ್ತಿದ್ದಾನೆ. ಪೊಲೀಸರು ಯುವಕನನ್ನು ವಿಚಾರಣೆ ನಡೆಸಿ ಜಾಮೀನು ಮೇಲೆ ಬಿಡುಗಡೆ ಮಾಡಿದ್ದಾರೆ. ವಿಚಾರಣೆ ಸಂದರ್ಭದಲ್ಲಿ ಆತನಿಗೆ ಗರ್ಲ್ ಫ್ರೆಂಡ್ ಜೊತೆಗೆ ಹೊಯ್ದಾಟ ಇರುವ ಬಗ್ಗೆಯೂ ಸಂಬಂಧಿಕರು ತಿಳಿಸಿದ್ದಾರೆ. ಹಾಗಾಗಿ ವಿಚಿತ್ರವಾಗಿ ವರ್ತಿಸುತ್ತಿದ್ದಾನೆ ಎಂದಿದ್ದಾರೆ. ಮಾನಸಿಕ ಸಮಸ್ಯೆ ಇರುವ ಬಗ್ಗೆ ವೈದ್ಯರ ಸರ್ಟಿಫಿಕೇಟ್ ತರುವಂತೆ ಪೊಲೀಸರು ತಿಳಿಸಿದ್ದಾರೆ. ಏರ್ ಇಂಡಿಯಾ ಸಿಬಂದಿ ನೀಡಿದ ದೂರಿನಂತೆ ಏರ್ಪೋರ್ಟ್ ಠಾಣೆಯಲ್ಲಿ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ.
A young man, son of an Uttar Pradesh police officer, created panic inside an Air India flight to Lucknow, minutes before its departure from Bengaluru’s Kempegowda International Airport after he claimed to be a terrorist, officials said. The police later arrested the accused identified as Adarsh Kumar Singh, son of an assistant police sub-inspector.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 07:26 pm
HK News Desk
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am