ಬ್ರೇಕಿಂಗ್ ನ್ಯೂಸ್
23-02-24 10:45 pm HK News Desk ಕರ್ನಾಟಕ
ಬೆಳಗಾವಿ, ಫೆ 23: ಜಿಲ್ಲೆಯಲ್ಲಿ ಶುಕ್ರವಾರ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ರಾಯಬಾಗ ತಾಲೂಕಿನ ಮುಗಳಖೋಡ ಕ್ರಾಸ್ ಬಳಿ ಕಾರು ಹಾಗೂ ಎರಡು ದ್ವಿಚಕ್ರ ವಾಹನಗಳ ಮಧ್ಯೆ ಭೀಕರ ರಸ್ತೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಜನ ದಾರುಣವಾಗಿ ಮೃತಪಟ್ಟಿದ್ದಾರೆ.
ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಐವರು ಮೃತಪಟ್ಟಿದ್ದು, ಗಂಭೀರ ಗಾಯಗೊಂಡಿದ್ದ ಒಬ್ಬರನ್ನು ಗೋಕಾಕ ಆಸ್ಪತ್ರೆಗೆ ದಾಖಲಿಸಿತಾಯಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಮೂಡಲಗಿ ತಾಲೂಕಿನ ಗುರ್ಲಾಪೂರ ಗ್ರಾಮದಿಂದ ಮುಗಳಖೋಡಕ್ಕೆ ಹೊರಟ್ಟಿದ ಸ್ವಿಫ್ಟ್ ಕಾರು ಹಾಗೂ ಮುಗಳಖೋಡದಿಂದ ಗುರ್ಲಾಪೂರ ಕಡೆಗೆ ಬರುತ್ತಿದ ಎರಡು ಬೈಕ್ ಗಳ ಮಧ್ಯೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಗುರ್ಲಾಪೂರ ಗ್ರಾಮದ ಒಂದೇ ಕುಟುಂಬದ ಲಕ್ಷ್ಮಿ ಮರಾಠೆ (19), ಮಲ್ಲಿಕಾರ್ಜುನ ಮರಾಠೆ (16), ಆಕಾಶ್ ಮರಾಠೆ (14) ಹಾಗೂ ಸಂಬಂಧಿಕರಾದ ರಾಯಬಾಗ ತಾಲೂಕಿನ ಕಂಕನವಾಡಿ ಗ್ರಾಮದ ಏಕನಾಥ ಪಡತರಿ (22) ಮತ್ತು ಬೈಕ್ ಮೇಲಿದ್ದ ಮೂಡಲಗಿ ತಾಲೂಕಿನ ದುರದುಂಡಿ ಗ್ರಾಮದ ಹನುಮಂತ ಮಾಳ್ಯಾಗೋಳ (42), ಇನ್ನೊಂದು ಬೈಕ್ ಮೇಲಿದ್ದ ರಾಯಬಾಗ ತಾಲೂಕಿನ ಮುಗುಳಖೋಡದ ನಾಗಪ್ಪ ಯಡವನ್ನವರ (48) ಮೃತ ದುರ್ದೈವಿಗಳು.
ಘಟನಾ ಸ್ಥಳಕ್ಕೆ ಬೆಳಗಾವಿ ಹೆಚ್ಚುವರಿ ಎಸ್ಪಿ ರಾಮಗೊಂಡ ಬಸರಗಿ, ಅಥಣಿ ಡಿವೈಎಸ್ಪಿ ಶ್ರೀಪಾದ ಜಲ್ದೆ, ಹಾರೋಗೇರಿ ಸಿಪಿಐ ರವಿಚಂದ್ರನ್ ಬಡಪಕಿರಪ್ಪನವರ, ಅಥಣಿ ಸಿಪಿಐ ರವೀಂದ್ರ ನಾಯಕವಾಡಿ, ಹಾರೂಗೇರಿ ಪಿಎಸ್ಐ ಗಿರಿಮಲ್ಲಪ್ಪ ಉಪ್ಪಾರ ಹಾಗೂ ಸಿಬ್ಬಂದಿಗಳು ಆಗಮಿಸಿದ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗುರುವಾರ ಮಧ್ಯಾಹ್ನ ಖಾನಾಪುರ ತಾಲೂಕಿನ ಮಂಗ್ಯಾನಕೊಪ್ಪ ಬಳಿ ಸ್ವಿಫ್ಟ್ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಸಹಿತ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಾಸುವ ಮುನ್ನವೇ ಈ ದುರ್ಘಟನೆ ನಡೆದಿದೆ.
Belagavi another accident 6 killed after car rams two bikes. On Thursday Swift car rammed divider after which 6 people were killed and today on Friday another accident as occurred in belagavi killing 6 people.
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
21-04-26 06:33 pm
HK News Staffer
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
21-04-26 10:02 pm
HK News Staffer
ಡಿಜಿಪಿ ಡಾ.ಎಂ.ಎ.ಸಲೀಂ ಮಂಗಳೂರಿಗೆ ; ವರ್ಗಾವಣೆ ಆಗಿದ...
21-04-26 03:13 pm
ನಂತೂರು ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗ...
21-04-26 12:44 pm
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm