ಬ್ರೇಕಿಂಗ್ ನ್ಯೂಸ್
24-02-24 10:25 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.24: ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ "ಯುವನಿಧಿ” ಯೋಜನೆಯಲ್ಲಿ ಪದವಿ, ಸ್ನಾತಕೋತ್ತರ ಪದವಿ ಮತ್ತು ಡಿಪ್ಲೊಮಾಗಳನ್ನು 2022-23ನೇ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿ 2023ರಲ್ಲಿ ತೇರ್ಗಡೆಯಾಗಿ ಅರ್ಹತೆ ಹೊಂದಿದ ಅಭ್ಯರ್ಥಿಗಳು ಈಗಾಗಲೇ ಸೇವಾ ಸಿಂಧು ಪೋರ್ಟಲ್ನಲ್ಲಿ ನೋಂದಣಿಯಾಗಿದ್ದು ಹಾಗೂ ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿವಸ ಪೂರೈಸಿದ ಅಭ್ಯರ್ಥಿಗಳಿಗೆ ಜನವರಿ 2024 ರಂದು ನೇರ ನಗದು ವರ್ಗಾವಣೆ ಮಾಡಲಾಗಿರುತ್ತದೆ.
ಅಭ್ಯರ್ಥಿಗಳು ಯುವನಿಧಿ ಪ್ರಯೋಜನವನ್ನು ಪ್ರತಿ ತಿಂಗಳು ಪಡೆಯಬೇಕಿದ್ದರೆ, ಪ್ರತಿ ಮಾಹೆಯಲ್ಲಿ ತಾನು ನಿರುದ್ಯೋಗಿಯೆಂದು, ವ್ಯಾಸಂಗ ಮುಂದುವರೆಸುತ್ತಿಲ್ಲವೆಂದು ಹಾಗೂ ಸ್ವಯಂ ಉದ್ಯೋಗಿಯಲ್ಲವೆಂದು ಸ್ವಯಂ ಘೋಷಣೆಯನ್ನು ಮಾಡಬೇಕಾಗಿರುತ್ತದೆ. ಪ್ರಸ್ತಕ ಫೆಬ್ರವರಿ ಮಾಹೆಯಲ್ಲಿ ದಿನಾಂಕ 29ರ ವರೆಗೆ ಸೇವಾ ಸಿಂಧು ಪೋರ್ಟಲ್ನಲ್ಲಿ ಸ್ವಯಂ ಘೋಷಣೆ ಪ್ರಮಾಣ ಪತ್ರವನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಪ್ರಯೋಜನ ಪಡೆಯುತ್ತಿರುವ ಅರ್ಹ ಅಭ್ಯರ್ಥಿಗಳು ಪ್ರತಿ ತಿಂಗಳು ಸ್ವಯಂ ಘೋಷಣೆ ಮಾಡದಿದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆಯನ್ನು ಮಾಡಲಾಗುವುದಿಲ್ಲ ಎಂಬುದಾಗಿ ತಿಳಿಯಪಡಿಸಲಾಗಿದೆ. ಈಗಾಗಲೇ ನೋಂದಾಯಿಸಿಕೊಂಡ ಅಭ್ಯರ್ಥಿಗಳಿಗೆ ಜನವರಿ 2024ರಲ್ಲಿ ನೇರ ನಗದು ವರ್ಗಾವಣೆ ಮಾಡಲಾಗಿದ್ದು, ಮುಂದಿನ ತಿಂಗಳು ಪ್ರಯೋಜನ ಪಡೆದುಕೊಳ್ಳಲು ಸ್ವಯಂ ಘೋಷಣೆ ಮಾಡಬೇಕಾಗಿರುವ ಕುರಿತು ಎಸ್ಎಂಎಸ್ ಸಂದೇಶವನ್ನು ಅಭ್ಯರ್ಥಿಗಳಿಗೆ ರವಾನಿಸಲಾಗಿರುತ್ತದೆ.
ಅಭ್ಯರ್ಥಿಗಳು ಕಡ್ಡಾಯವಾಗಿ ಆಧಾರ್ ಸೀಡೆಡ್ ಬ್ಯಾಂಕ್ ಖಾತೆಯನ್ನು ಹೊಂದಿರತಕ್ಕದ್ದು. ಅಭ್ಯರ್ಥಿಗಳು ಸ್ವಯಂ ಘೋಷಣೆ ಮಾಡಿಕೊಳ್ಳಲು https://sevasindhugs.karnataka.gov.in ವೆಬ್ಸೈಟ್ ವೀಕ್ಷಿಸಬಹುದು. ಹೆಚ್ಚಿನ ವಿವರಗಳಿಗೆ ದೂ. ಸಂಖ್ಯೆ 080-25189112 ಸಂಪರ್ಕಿಸಬಹುದು ಎಂದು ಕೈಗಾರಿಕಾ ತರಬೇತಿ ಹಾಗೂ ಉದ್ಯೋಗ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Candidates who have completed graduation, post-graduation and diploma courses in the academic year 2022-23 and passed in 2023 under the Karnataka State Government's flagship scheme "Yuvanidhi" have already registered on the Seva Sindhu portal and have completed 180 days of being unemployed after the results, will be given direct cash transfer on January 2024.
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
21-04-26 06:33 pm
HK News Staffer
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
21-04-26 10:02 pm
HK News Staffer
ಡಿಜಿಪಿ ಡಾ.ಎಂ.ಎ.ಸಲೀಂ ಮಂಗಳೂರಿಗೆ ; ವರ್ಗಾವಣೆ ಆಗಿದ...
21-04-26 03:13 pm
ನಂತೂರು ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗ...
21-04-26 12:44 pm
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm