ಬ್ರೇಕಿಂಗ್ ನ್ಯೂಸ್
27-02-24 03:50 pm HK News Desk ಕರ್ನಾಟಕ
ತುಮಕೂರು, ಫೆ.27: ಒಂದೇ ದಿನ ಶಸ್ತ್ರಚಿಕಿತ್ಸೆಗೆ ಒಳಗಾದವರಲ್ಲಿ ಮೂವರು ಮಹಿಳೆಯರು ಸಾವನ್ನಪ್ಪಿದ ಘಟನೆ ಪಾವಗಡ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದ್ದು ಕುಟುಂಬಸ್ಥರ ಆಕ್ರೋಶ ಮುಗಿಲು ಮುಟ್ಟಿದೆ. ಸಂತಾನಹರಣ, ಗರ್ಭಕೋಶದ ಚಿಕಿತ್ಸೆ ಹಾಗೂ ಸಿಸೇರಿಯನ್ ಒಳಗಾಗಿದ್ದ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ.
ಐದು ದಿನಗಳ ಅವಧಿಯಲ್ಲಿ ಮೂವರು ಮಹಿಳೆಯರು ಸಾವನ್ನಪ್ಪಿದ್ದು, ಮೂವರಿಗೂ ಕಳೆದ 22ರಂದು ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಘಟನೆ ಸಂಬಂಧ ಶಸ್ತ್ರಚಿಕಿತ್ಸೆ ನಡೆಸಿದ ಡಾ.ಪೂಜಾ ಸೇರಿದಂತೆ ಮೂವರು ಸಿಬಂದಿಯನ್ನು ಜಿಲ್ಲಾ ಆರೋಗ್ಯಾಧಿಕಾರಿ ಸೇವೆಯಿಂದ ಅಮಾನತು ಮಾಡಿದ್ದಾರೆ.
ಸಂತಾನ ಹರಣ ಚಿಕಿತ್ಸೆಗೆ ಒಳಗಾಗಿದ್ದ ವೀರ್ಲಗೊಂದಿ ಗ್ರಾಮದ ಮಹಿಳೆ ಅನಿತಾ ಸಾವನ್ನಪ್ಪಿದ್ದಾರೆ. 30 ವರ್ಷದ ಅನಿತಾ ಶಸ್ತ್ರ ಚಿಕಿತ್ಸೆ ನಡೆದ ದಿನವೇ ಸಾವನ್ನಪ್ಪಿದ್ದಾರೆ. ರಾಜವಂತಿ ಮೂಲದ 20 ವರ್ಷದ ಅಂಜಲಿಗೆ ಸಿಸೇರಿಯನ್ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಲಾಗಿತ್ತು. ಹೆರಿಗೆ ಬಳಿಕ ಅಂಜಲಿ ಸ್ಥಿತಿ ಗಂಭೀರವಾಗಿತ್ತು. ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಅಂಜಲಿಯನ್ನ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಂಜಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಫೆ.24 ರಂದು ಸಾವನ್ನಪ್ಪಿದ್ದಾರೆ.
ಬ್ಯಾಡನೂರು ಗ್ರಾಮದ 40 ವರ್ಷದ ನರಸಮ್ಮ ಅವರಿಗೆ ಗರ್ಭಕೋಶದ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಶಸ್ತ್ರ ಚಿಕಿತ್ಸೆ ಬಳಿಕ ನರಸಮ್ಮ ಸ್ಥಿತಿ ಗಂಭೀರವಾಗಿತ್ತು. ನರಸಮ್ಮರನ್ನ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಫೆಬ್ರವರಿ 25ರಂದು ನರಸಮ್ಮ ಅವರು ಚಿಕಿತ್ಸೆ ಫಲಕಾರಿಯಾಗದೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಅಂಜಲಿ ಕುಟುಂಬಸ್ಥರು ಪಾವಗಡದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದು ವೈದ್ಯರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ. ಘಟನೆ ಬೆನ್ನಲ್ಲೇ ರಾಜ್ಯ ಸರ್ಕಾರ ವೈದ್ಯೆ ಸೇರಿದಂತೆ ಮೂವರು ಸಿಬ್ಬಂದಿಯನ್ನು ಸೇವೆಯಿಂದ ಅಮಾನತು ಮಾಡಿದೆ. ಶಸ್ತ್ರಚಿಕಿತ್ಸೆ ಮಾಡಿದ್ದ ವೈದ್ಯೆ ಡಾ.ಪೂಜಾ, ಓಟಿ ಟೆಕ್ನಿಷಿಯನ್ ಕಿರಣ್, ಸ್ಟಾಫ್ ನರ್ಸ್ ಪದ್ಮಾವತಿ ಎಂಬವರನ್ನ ಸೇವೆಯಿಂದ ಅಮಾನತು ಮಾಡಲಾಗಿದೆ.
Two women have died due to alleged medical negligence during caesarean section surgery, and one died following complications developed after hysterectomy at the government hospital in Pavagada of Tumakuru district.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 07:26 pm
HK News Desk
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am