ಬ್ರೇಕಿಂಗ್ ನ್ಯೂಸ್
27-02-24 05:13 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.27: ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಇರುವಾಗಲೇ ಕರ್ನಾಟಕ ಬಿಜೆಪಿಗೆ ಇಬ್ಬರು ಶಾಸಕರು ಶಾಕ್ ನೀಡಿದ್ದಾರೆ. ಎಸ್ ಟಿ ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಬಿಜೆಪಿಗೆ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ದಟ್ಟವಾಗಿದೆ. ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಮತ ಚಲಾಯಿಸಿದ ಇಬ್ಬರು ಬಿಜೆಪಿ ಶಾಸಕರೂ ಪಕ್ಷಕ್ಕೆ ಗುಡ್ ಬೈ ಹೇಳಿ ಕಾಂಗ್ರೆಸ್ ಕೈ ಹಿಡಿಯುವ ಸಾಧ್ಯತೆ ಇದೆ.
ಯಶವಂತಪುರ ಶಾಸಕ ಎಸ್ಟಿ ಸೋಮಶೇಖರ್ ಹಾಗೂ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಅವರು ಮಂಗಳವಾರವೇ ಬಿಜೆಪಿ ತೊರೆಯಲಿದ್ದಾರೆ ಎನ್ನಲಾಗುತ್ತಿದೆ. ಈ ಇಬ್ಬರು ಶಾಸಕರು ಕೂಡ ಕಾಂಗ್ರೆಸ್ ಸೇರ್ಪಡೆಯಾಗಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆಯಿದೆ. ಸೋಮಶೇಖರ್ ಬೆಂಗಳೂರು ಉತ್ತರ ಕ್ಷೇತ್ರದಿಂದ ಮತ್ತು ಶಿವರಾಮ ಹೆಬ್ಬಾರ್ ಉತ್ತರ ಕನ್ನಡ ಕ್ಷೇತ್ರದಿಂದ ಕಣಕ್ಕಿಳಿಯುವ ಸಾಧ್ಯತೆಯಿದೆ. ಅಲ್ಲದೆ, ತಮ್ಮಿಂದ ತೆರವಾಗುವ ಶಾಸಕ ಕ್ಷೇತ್ರದಲ್ಲಿ ಪುತ್ರರನ್ನು ನಿಲ್ಲಿಸಿ ಕಾಂಗ್ರೆಸ್ ಪಕ್ಷದಲ್ಲಿ ಗೆಲ್ಲಿಸುವ ತಂತ್ರ ಹೂಡಿದ್ದಾರೆ.
ಇದೇ ವೇಳೆ, ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಅವರ ಮೇಲೆ ಪಕ್ಷದಿಂದ ಉಚ್ಛಾಟನೆ ಮತ್ತು ಅನರ್ಹತೆಯ ತೂಗುಗತ್ತಿ ಇದೆ. ಈ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳವಾರವೇ ಶಾಸಕ ಸ್ಥಾನ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಮೂಲಕ ಉಚ್ಛಾಟನೆಯ ತೂಗುಗತ್ತಿಯಿಂದ ಪಾರಾಗುವ ಪ್ರಯತ್ನವನ್ನು ಶಾಸಕರು ನಡೆಸಿದ್ದಾರೆ. ಸ್ಪೀಕರ್ಗೆ ಬಿಜೆಪಿ ನಾಯಕರು ದೂರು ನೀಡಿದರೆ, ಅವರದನ್ನು ಪರಿಗಣಿಸಿದರೆ ಶಾಸಕರನ್ನು ಅನರ್ಹಗೊಳಿಸುವ ಅವಕಾಶ ಇದೆ.
ಎಸ್ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬಿಜೆಪಿಯಿಂದ ಒಂದು ಕಾಲು ಹೊರಗಿಟ್ಟು, ಪಕ್ಷದ ಚಟುವಟಿಕೆಗಳಿಂದ ಅಂತರ ಕಾಯ್ದುಕೊಂಡಿದ್ದರು. ಎಸ್ಟಿ ಸೋಮಶೇಖರ್ ಅಂತೂ ಬಹಿರಂಗವಾಗಿಯೇ ಕಾಂಗ್ರೆಸ್ ನಾಯಕರ ಜೊತೆ ನಿರಂತರವಾಗಿ ಕಾಣಿಸಿಕೊಂಡಿದ್ದರು. ಪಕ್ಷದ ಶಾಸಕಾಂಗ ಸಭೆಗೂ ಗೈರಾಗಿ ಕಾಂಗ್ರೆಸ್ ನಾಯಕರ ಜೊತೆ ಕಾಣಿಸಿದ್ದರು. ಶಿವರಾಮ್ ಹೆಬ್ಬಾರ್ ಅವರು ಸದನದಲ್ಲಿಯೇ ಕಾಂಗ್ರೆಸ್ ಅನ್ನು ವಹಿಸಿಕೊಂಡು ಮಾತಾಡಿದ್ದು ಎಲ್ಲರ ಗಮನ ಸೆಳೆದಿತ್ತು. ಆಮೂಲಕ ಇವರಿಬ್ಬರು ಅಧಿಕೃತವಾಗಿ ಘರ್ ವಾಪ್ಸಿಯಾಗಲು ತಯಾರಿ ನಡೆಸಿದ್ದಾರೆ.
Karnataka BJP MLA ST Somashekar and Shivaram Hebbar resign BJP, rejoin congress party. One of the leaders who, it is learnt, cross-voted is former minister S T Somashekar. There was also an apprehension in the party ranks of former minister Shivaram Hebbar voting against the coalition’s candidate. The BJP pasted a copy of the party whip, directing Hebbar to vote for the coalition candidates, outside his room at the Vidhana Soudha. In the Rajya Sabha polls, MLAs retain their freedom to vote for a candidate of their choice.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm