ಬ್ರೇಕಿಂಗ್ ನ್ಯೂಸ್
29-02-24 09:51 am Bangalore Correspondent ಕರ್ನಾಟಕ
ಬೆಂಗಳೂರು, ಫೆ.29: ರಾಜ್ಯದಲ್ಲಿ ಭಾರೀ ಸಂಚಲನ ಎಬ್ಬಿಸಿದ್ದ ಬಿಟ್ ಕಾಯಿನ್ ಹಗರಣದಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ) ಮತ್ತೊಬ್ಬ ಇನ್ಸ್ ಪೆಕ್ಟರ್ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದೆ. ಕಡೂರು ಪೊಲೀಸ್ ತರಬೇತಿ ಶಾಲೆಯಲ್ಲಿ ಇನ್ಸ್ಪೆಕ್ಟರ್ ಆಗಿದ್ದ ಲಕ್ಷ್ಮೀಕಾಂತಯ್ಯ ಬಂಧಿತ. ಬಿಟ್ ಕಾಯಿನ್ ಹಗರಣದ ತನಿಖೆ ನಡೆಯುತ್ತಿದ್ದಾಗ ಲಕ್ಷ್ಮೀಕಾಂತಯ್ಯ ಬೆಂಗಳೂರು ಸಿಸಿಬಿ ತನಿಖಾಧಿಕಾರಿ ಆಗಿ ಕರ್ತವ್ಯದಲ್ಲಿದ್ದರು.
ಹಗರಣದ ತನಿಖೆ ಸಂಬಂಧಿಸಿ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ಅದರಂತೆ ಬುಧವಾರ ವಿಚಾರಣೆಗೆ ಹಾಜರಾಗಿದ್ದ ಲಕ್ಷ್ಮೀ ಕಾಂತಯ್ಯ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಬಳಿಕ 1ನೇ ಎಸಿ ಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ತನಿಖೆಗಾಗಿ ವಶಕ್ಕೆ ನೀಡುವಂತೆ ಮನವಿ ಮಾಡಿದರು. ಕೆಲ ದಿನಗಳ ಹಿಂದೆ ಇದೇ ಬಿಟ್ ಕಾಯಿನ್ ಹಗರಣ ಸಂಬಂಧ ಇನ್ಸ್ಪೆಕ್ಟರ್ ಪ್ರಶಾಂತ್ಬಾಬು ಮತ್ತು ಸೈಬರ್ ತಜ್ಞ ಸಂತೋ ಷ್ನನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದರು. ಇದರ ಬೆನ್ನಲ್ಲೇ ವಾರದ ಹಿಂದೆ ಸಿಸಿಬಿ ಮುಖ್ಯಸ್ಥರಾಗಿದ್ದ ಸಂದೀಪ್ ಪಾಟೀಲ್ ಅವರನ್ನು ವಿಚಾರಣೆ ನಡೆಸಲಾಗಿತ್ತು. ಇದೀಗ ಆರೋಪಿಯೆಂದು ಗುರುತಿಸಿರುವ ಲಕ್ಷ್ಮೀಕಾಂತಯ್ಯ ಅವರನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
2019-20ರ ಅವಧಿಯಲ್ಲಿ ಬೆಳಕಿಗೆ ಬಂದ ಬಿಟ್ ಕಾಯಿನ್ ಮತ್ತು ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿ ತನಿಖಾಧಿಕಾರಿಗಳಾಗಿದ್ದ ಇನ್ಸ್ಪೆಕ್ಟರ್ಗಳಾದ ಪ್ರಶಾಂತ್ ಬಾಬು, ಲಕ್ಷ್ಮೀಕಾಂತಯ್ಯ, ಚಂದ್ರಾಧರ ಹಾಗೂ ಶ್ರೀಧರ್ ಕೆ.ಪೂಜಾರ್ ಹಾಗೂ ಎಚ್ಎಸ್ ಆರ್ ಲೇಔಟ್ನ ಜಿಸಿಐಡಿ ಟೆಕ್ನಾಲಜಿಸ್ ಪ್ರೈವೇಟ್ ಲಿಮಿಟೆಡ್ನ ಸಿಇಒ ಎಸ್. ಸಂತೋಷ್ ಕುಮಾರ್ ವಿರುದ್ಧ ಸಾಕ್ಷ್ಯಾ ಧಾರಗಳ ನಾಶ ಆರೋಪದಡಿ ಎಸ್ಐಟಿ ಎಫ್ಐಆರ್ ದಾಖಲಿಸಿತ್ತು.ಈ ಅಧಿಕಾರಿಗಳಿಗೆ ಆಗ ಆಡಳಿತದಲ್ಲಿದ್ದ ಬಿಜೆಪಿಯ ಪ್ರಭಾವಿ ರಾಜಕಾರಣಿಗಳು, ಅವರ ಚೇಲಾಗಳು, ಪುತ್ರರು ಸಾಥ್ ನೀಡಿದ್ದು ಬಿಟ್ ಕಾಯಿನ್ ಹಗರಣದಲ್ಲಿ ಪಾಲು ಪಡೆದಿದ್ದಾರೆ ಎನ್ನಲಾಗಿದೆ.
The Special Investigation Team (SIT) probing the bitcoin scam has arrested another inspector and interrogated him. Lakshmikanthaiah, who was an inspector at Kadur police training school, was arrested. Lakshmikanthaiah was on duty as the investigating officer of the CCB in Bengaluru when the bitcoin scam was being investigated.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 07:26 pm
HK News Desk
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am