ಬ್ರೇಕಿಂಗ್ ನ್ಯೂಸ್
01-03-24 10:50 am Bangalore Correspondent ಕರ್ನಾಟಕ
ಬೆಂಗಳೂರು, ಮಾ.1: ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆಂಬ ಆರೋಪದ ಘಟನೆಯ ಬಗ್ಗೆ ವಿಧಿವಿಜ್ಞಾನ ತಂಡ ವರದಿ ತಯಾರಿಸಿದ್ದು, ಪೊಲೀಸರ ಕೈಸೇರಿದ ಬೆನ್ನಲ್ಲೇ ವಿಡಿಯೋದಲ್ಲಿದ್ದ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.
ವಿವಾದಿತ ವಿಡಿಯೋದಲ್ಲಿರುವ ಅಂಶಗಳ ಬಗ್ಗೆ ಎಫ್ಎಸ್ಎಲ್ ನೀಡಿರುವ ವರದಿ ಆಧರಿಸಿ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಎಫ್ಎಸ್ಎಲ್ ವರದಿಯಲ್ಲಿ ದೃಢಪಟ್ಟರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದರು. ಗುರುವಾರ ಎಫ್ಎಸ್ಎಲ್ ವರದಿ ಕೈಸೇರಿದ ಕೂಡಲೇ ಪೊಲೀಸರು ಹಾವೇರಿಯಲ್ಲಿ ಒಬ್ಬನನ್ನು ವಶಕ್ಕೆ ಪಡೆದಿದ್ದಾರೆ. ಮತ್ತೊಬ್ಬ ವ್ಯಕ್ತಿ ಬೆಂಗಳೂರು ಕೇಂದ್ರ ವಿಭಾಗದ ಎಸಿಪಿಯ ಮುಂದೆ ಶರಣಾಗಿದ್ದಾನೆ. ಬೇರೆ ಜಿಲ್ಲೆಗಳಲ್ಲೂ ಇನ್ನಿಬ್ಬರನ್ನು ವಶಕ್ಕೆ ಪಡೆಯಲಾಗಿದೆ.
ವಿಡಿಯೋದಲ್ಲಿ ಕಾಣಿಸಿಕೊಂಡಿದ್ದ ಯುವಕರು, ಅಂದು ರಾಜ್ಯಸಭೆ ಸದಸ್ಯರ ಜೊತೆಗೆ ವಿಧಾನಸೌಧ ಪ್ರವೇಶ ಮಾಡಿದ್ದ ಹಲವರನ್ನು ವಶಕ್ಕೆ ಪಡೆದು ಪೊಲೀಸರು ಡ್ರಿಲ್ ಮಾಡಿದ್ದಾರೆ. ಯುವಕರು ತಮ್ಮ ಘೋಷಣೆಯ ಬಗ್ಗೆ ಭಿನ್ನ ಹೇಳಿಕೆ ನೀಡಿದ್ದಾರೆ. ನಾಸೀರ್ ಖಾನ್ ಜಿಂದಾಬಾದ್ ಎಂದಷ್ಟೇ ಕೂಗಿದ್ದು ಎಂದು ಹೇಳಿದ್ದಾರೆ. ಗದ್ದಲದಲ್ಲಿ ನಮಗೇನೂ ಅಂತಹದ್ದು ಕೇಳಿಸಿಯೇ ಇಲ್ಲ ಎಂದೂ ಹೇಳಿದ್ದಾರೆ. ಹೀಗಾಗಿ ಕೂಲಂಕಷ ತನಿಖೆಗೆ ಪೊಲೀಸರು ಮುಂದಾಗಿದ್ದಾರೆ.
ಫೆ.27ರಂದು ರಾಜ್ಯಸಭೆ ಚುನಾವಣೆ ಗೆಲುವಿನ ಸಂಭ್ರಮದಲ್ಲಿ ನಾಸೀರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆಂಬ ಆರೋಪ ಕೇಳಿಬಂದಿದ್ದು, ರಾಜ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಪ್ರತಿಪಕ್ಷಗಳ ತೀವ್ರ ಆಕ್ರೋಶದ ಹಿನ್ನೆಲೆಯಲ್ಲಿ ಘಟನೆ ಬಗ್ಗೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದರು.
Bangalore Four taken to custody over shouting Pakistan Zindabad slogan. A day after supporters of Rajya Sabha winner from Congress, Syed Nasir Hussain, allegedly raised “Pakistan Zindabad” slogans in the corridors of the Vidhana Soudha, the BJP on Wednesday demanded the resignation of Chief Minister Siddaramaiah
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 07:26 pm
HK News Desk
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am