ಬ್ರೇಕಿಂಗ್ ನ್ಯೂಸ್
01-03-24 03:04 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.1: ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಒಕ್ಕಲಿಗ, ವೀರಶೈವ ಲಿಂಗಾಯತರ ತೀವ್ರ ವಿರೋಧದ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ವಿವಾದಿತ ಜಾತಿ ಜನಗಣತಿ ವರದಿಯನ್ನು ಸ್ವೀಕರಿಸಿದ್ದಾರೆ.
ಜಾತಿ ಮತ್ತು ಸಮುದಾಯಗಳ ಶೈಕ್ಷಣಿಕ ಸಮೀಕ್ಷಾ 2015ರ ದತ್ತಾಂಶಗಳ ಅಧ್ಯಯನ ವರದಿ-2024 ಅನ್ನು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಮುಖ್ಯಮಂತ್ರಿ ಅವರಿಗೆ ಸಲ್ಲಿಸಿದ್ದಾರೆ. ವರದಿ ಪ್ರಕಾರ ರಾಜ್ಯದಲ್ಲಿ ದಲಿತ ವರ್ಗದವರೇ ಹೆಚ್ಚು ಎನ್ನಲಾಗುತ್ತಿದೆ.
ಸಿಕ್ಕಿರುವ ದತ್ತಾಂಶಗಳ ಪ್ರಕಾರ ವರದಿ ಒಟ್ಟು 48 ಸಂಪುಟಗಳನ್ನು ಹೊಂದಿದೆ. ಒಟ್ಟು 5.98 ಕೋಟಿ ಜನ ಸಮೀಕ್ಷೆಯಲ್ಲಿ ಭಾಗಿಯಾಗಿದ್ದಾರೆಂಬ ಮಾಹಿತಿ ಇದೆ. ಇದರ ಪ್ರಕಾರ, ಒಟ್ಟು 5.98 ಕೋಟಿ ಜನರ ಪೈಕಿ ಅಹಿಂದ ವರ್ಗದ ಸಂಖ್ಯೆಯೇ 3.96 ಕೋಟಿ ಇದೆ ಎನ್ನಲಾಗುತ್ತಿದೆ. ಒಕ್ಕಲಿಗ, ಲಿಂಗಾಯತ, ಬ್ರಾಹ್ಮಣ, ಇತರರ ಸಂಖ್ಯೆ 1.87 ಕೋಟಿ ಇದ್ದು ಒಟ್ಟು 816 ಇತರೆ ಹಿಂದುಳಿದ ಜಾತಿಗಳೆಂದು ಗುರುತಿಸಲಾಗಿದೆ.
ಒಟ್ಟು 1,351 ಜಾತಿಗಳನ್ನು ಸಮೀಕ್ಷೆಯಡಿ ಪರಿಗಣಿಸಲಾಗಿದ್ದು, ಹೊಸದಾಗಿ 192 ಜಾತಿಗಳನ್ನು ದಾಖಲಿಸಲಾಗಿದೆ. ಸುಮಾರು 30 ಜಾತಿಗಳು ಅತ್ಯಂತ ಹಿಂದುಳಿದ ಜಾತಿ ವರ್ಗದಡಿ ಸೇರ್ಪಡೆ ಮಾಡಲಾಗಿದೆ.
ಲೋಕಸಭೆ ಚುನಾವಣೆ ಬಳಿಕವಷ್ಟೇ ಜಾತಿಗಣತಿ ವರದಿ ಬಹಿರಂಗವಾಗುವ ಸಾಧ್ಯತೆಯಿದೆ. ಜಾತಿ ಗಣತಿ ವರದಿ ಅಧ್ಯಯನಕ್ಕೆ ಸಂಪುಟ ಉಪಸಮಿತಿ ರಚನೆಯಾಗಲಿದೆ. ಸಂಪುಟ ಸಭೆಯಲ್ಲಿ ಚರ್ಚಿಸಿದ ಬಳಿಕ ಸಂಪುಟ ಉಪಸಮಿತಿ ರಚನೆಯಾಗಲಿದ್ದು ವರದಿ ಅಧ್ಯಯನಕ್ಕೆ ಉಪ ಸಮಿತಿಗೆ 3ರಿಂದ 5 ತಿಂಗಳ ಕಾಲಾವಕಾಶ ನೀಡುವ ಸಾಧ್ಯತೆಯಿದೆ.
The caste census report has created ripples in political circles and communities in Karnataka with the Lingayat Community demanding Chief Minister Siddaramaiah and the government not to accept the document. The Lingayat community has also warned the CM of statewide agitation if the report is accepted as there are several lapses in the report.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 07:26 pm
HK News Desk
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am