ಬ್ರೇಕಿಂಗ್ ನ್ಯೂಸ್
12-03-24 06:43 pm HK News Desk ಕರ್ನಾಟಕ
ಮೈಸೂರು, ಮಾ 12: ಯದುವೀರ್ ಟಿಕೆಟ್ ಕೊಡುವುದು ನಿಜವಾದದರೆ ಅದನ್ನು ಸ್ವಾಗತಿಸುತ್ತೇನೆ. ಕಾರ್ಯಕರ್ತನಾಗಿ ಅವರ ಪರ ಕೆಲಸ ಮಾಡುತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರಮನೆಯ ಎಸಿ ರೂಂನಲ್ಲಿ ರಾಜನಾಗಿ ಇರುವ ಬದಲು ಪ್ರಜೆಗಳ ರೀತಿ ಬದುಕುಲು ಯದುವೀರ್ ಬಂದರೆ ಸ್ವಾಗತಿಸದೆ ಇರುವುದಕ್ಕೆ ಆಗುತ್ತಾ?. ರಾಜ – ಪ್ರಜೆ ನಡುವೆ ವ್ಯತ್ಯಾಸ ತೆಗೆದು ರಾಜರೇ ಪ್ರಜೆಗಳ ಜೊತೆ ಇರಲು ಬಂದರೆ ನನ್ನ ಸ್ವಾಗತ. ಅರಮನೆ ಆಸ್ತಿ ವಿಚಾರದಲ್ಲಿ ಸರ್ಕಾರದ ನಡುವೆ ವ್ಯಾಜ್ಯಗಳಿವೆ. ಅದರಲ್ಲಿ ಬಹುತೇಕ ಆಸ್ತಿಗಳು ಸಾರ್ವಜನಿಕರ ಬಳಕೆಯಲ್ಲಿವೆ. ಯದುವೀರ್ ಜನಪ್ರತಿನಿಧಿ ಆಗಿ ಅದನ್ನೆಲ್ಲಾ ಜನರಿಗೆ ಬಿಟ್ಟು ಕೊಡಿಸುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಹೋರಾಡಲು ರಾಜರು ಬೀದಿಗೆ ಬಂದ್ರೆ ಸಂತೋಷ:
ಚಾಮುಂಡಿ ಬೆಟ್ಟದ ಮೇಲಿನ ಅರಮನೆ ಆವರಣದ ಒಳಗೆ ಪೈಪ್ ಲೈನ್ ಹಾಕಲು ಅರಮನೆ ವಿರೋಧಿಸಿದೆ. ಯದುವೀರ್ ಜನಪ್ರತಿನಿಧಿ ಆದರೆ ಆ ಸಮಸ್ಯೆ ಬಗೆಹರಿಯುತ್ತೆ. ಶ್ರೀ ರಾಜೇಂದ್ರ ಸ್ವಾಮೀಜಿ ಪ್ರತಿಮೆ ವಿಚಾರದಲ್ಲಿ ಅರಮನೆಯವರ ನ್ಯಾಯಾಲಯಕ್ಕೆ ಹೋಗಿದ್ದಾರೆ. ಯದುವೀರ್ ಈ ಸಮಸ್ಯೆ ಬಗೆಹರಿಸಿ ರಾಜೇಂದ್ರ ಶ್ರೀಗಳ ಪ್ರತಿಮೆ ಅನಾವರಣ ಮಾಡುತ್ತಾರೆ. ಅರಮನೆ ಒಳಗೆ ಆರಾಮಾಗಿ ಇದ್ದಂತ ವ್ಯಕ್ತಿ ಸಿದ್ದರಾಮಯ್ಯ ವಿರುದ್ಧ ಹೋರಾಟ ಮಾಡಲು ಬೀದಿಗೆ ಬಂದರೆ ನಮಗೆ ಸಂತೋಷ ಎಂದು ಹೇಳಿದರು.
ಮುಖಂಡರಿಗೆ ಸಿಂಹ ಧನ್ಯವಾದ:
ಅರಮನೆ ವೈಭೋಗ ಬೇಕಾಗಿಲ್ಲ. ಜನರ ಜೊತೆ ಹೋರಾಟಕ್ಕೆ ಬರ್ತಿನಿ ಅಂತಾ ಹೊರಟಿದ್ದಾರೆ, ಅದಕ್ಕೆ ಸ್ವಾಗತ. ಪೊಲೀಸ್ ಠಾಣೆಗೆ ಬಂದು ನಮ್ಮ ಕಾರ್ಯಕರ್ತರ ಸಮಸ್ಯೆ ಬಗೆಹರಿಸಲು ರಾಜರು ಬಂದರೆ ಸಂತೋಷ ಅಲ್ವಾ?. ಸುಖದ ಸುಪತ್ತಿಗೆಯಲ್ಲಿ ಇದ್ದ ನಮ್ಮ ಮಹಾರಾಜರನ್ನು ಮನವೊಲಿಸಿ ರಾಜಕೀಯಕ್ಕೆ ತಂದ ನಮ್ಮ ಮುಖಂಡರಿಗೆ ಧನ್ಯವಾದ ಎಂದು ಸಿಂಹ ತಿಳಿಸಿದರು.
ನನಗೆ ಈ ಕ್ಷಣಕ್ಕೂ ವಿಶ್ವಾಸವಿದೆ. ಸಂಘಟನೆ, ಸಿದ್ದಾಂತಕ್ಕೆ ಗಟ್ಟಿಯಾಗಿ ನಿಂತಿರುವ ನನಗೆ ಟಿಕೆಟ್ ಸಿಗುತ್ತದೆ. 25 ಸಂಸದರಲ್ಲಿ ನನ್ನಷ್ಟು ಹಿಂದೂತ್ವದ ಕಮಿಟ್ ಮೆಂಟ್ ಇರುವ ಮತ್ಯಾರು ಇದ್ದಾರೆ? ಹಿಂದೂತ್ವದ ವಿಚಾರದಲ್ಲಿ ನನ್ನನ್ನು ಯಾರಿಗೂ ಮ್ಯಾಚ್ ಮಾಡಲು ಯಾರು ಆಗಲ್ಲ ಎಂದರು.
ಬ್ಯಾನರ್, ಬಂಟಿಂಗ್ ಕಟ್ಟಲೂ ಸಿದ್ಧ:
ಮೋದಿ ಅವರ ಬಗ್ಗೆ ಸಿದ್ದರಾಮಯ್ಯ ಬಾಯಿಗೆ ಬಂದ ರೀತಿ ಟೀಕಿಸಿದ್ದಾಗ ಸಿದ್ದರಾಮಯ್ಯ ಮಾತನ್ನು ದೊಡ್ಡ ಮಟ್ಟದಲ್ಲಿ ಖಂಡಿಸುವ ವ್ಯಕ್ತಿ ಈ ಪ್ರತಾಪ್ ಸಿಂಹ. ಇದು ನನ್ನ ದೌರ್ಬಲ್ಯವಾ?. ಮೈಸೂರು – ಕೊಡಗು ಅಭಿವೃದ್ಧಿ ಗೆ ಅತಿ ಹೆಚ್ಚಿನ ಅಭಿವೃದ್ಧಿ ಕೆಲಸ ಮಾಡಿದ್ದು ನನ್ನ ದೌರ್ಬಲ್ಯವಾ?. ನನಗೆ ಪಕ್ಷ ನಿಷ್ಠೆ ನನಗೆ ಇದೆ. ಬ್ಯಾನರ್, ಬಂಟಿಂಗ್ ಕಟ್ಟಲು ನಾನು ಸಿದ್ದ. ನನಗಾಗಿ ಪಕ್ಷ, ಕಾರ್ಯಕರ್ತರು ದುಡಿದಿದ್ದಾರೆ. ನಾನು ಮುಂದೆ ಅವರಂತೆಯೆ ದುಡಿಯುತ್ತೇನೆ ಎಂದು ಪ್ರತಾಪ್ ಸಿಂಹ ಹೇಳಿದರು.
Mysuru Mp Prathap Simha thanks patry for getting Yaduveer to party. Says he was in the AC palace and now party has brought him out to filed. Meanwhile, reports suggest that the BJP is considering fielding Yaduveer Krishnadatta Chamaraja Wadiyar, the scion of the erstwhile royal family from Mysuru.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 11:34 am
Mangalore Correspondent
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm