ಬ್ರೇಕಿಂಗ್ ನ್ಯೂಸ್
12-03-24 08:02 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.12: ರಾಜ್ಯಾದ್ಯಂತ ಏಕಪ್ರಕಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ 5, 8 ಮತ್ತು 9ನೇ ತರಗತಿಗೆ ನಡೆಸುತ್ತಿದ್ದ ಪಬ್ಲಿಕ್ ಪರೀಕ್ಷೆಗಳನ್ನು ಮತ್ತೆ ಮುಂದೂಡಲಾಗಿದೆ. ಎರಡು ದಿನಗಳ ಹಿಂದೆ ಹೈಕೋರ್ಟ್ ವಿಭಾಗೀಯ ಪೀಠವು ನೀಡಿದ್ದ ತಡೆಯಾಜ್ಞೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯು ಮಾ.13ರಿಂದ 16ರ ವರೆಗೆ ಆಯೋಜಿಸಿದ್ದ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿದೆ.
ಖಾಸಗಿ ಶಾಲೆಗಳ ಒಕ್ಕೂಟದ ವತಿಯಿಂದ ಪರೀಕ್ಷೆ ರದ್ದುಗೊಳಿಸಬೇಕೆಂದು ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠವು ಮಾನ್ಯ ಮಾಡಿತ್ತು. ಆದರೆ, ರಾಜ್ಯ ಸರಕಾರ ಹೈಕೋರ್ಟ್ ದ್ವಿಸದಸ್ಯ ಪೀಠದಲ್ಲಿ ಪ್ರಶ್ನಿಸಿ, ಏಕಸದಸ್ಯ ಪೀಠದ ನಿರ್ಧಾರಕ್ಕೆ ತಡೆಯಾಜ್ಞೆ ತಂದಿತ್ತು. ವಿಭಾಗೀಯ ಪೀಠವು ಪರೀಕ್ಷೆಗಳನ್ನು ಎಂದಿನಂತೆ ನಡೆಸುವುದಕ್ಕೆ ಅವಕಾಶ ನೀಡಿತ್ತು. ಅದರಂತೆ, ಸೋಮವಾರದಿಂದ ಪರೀಕ್ಷೆ ನಡೆಸಲಾಗಿತ್ತು.
ಆದರೆ, ಖಾಸಗಿ ಶಾಲಾಡಳಿತ ಒಕ್ಕೂಟವು ತನ್ನ ಪಟ್ಟು ಸಡಿಲಿಸದೆ ಸುಪ್ರೀಂ ಕೋರ್ಟಿನಲ್ಲಿ ಪ್ರಶ್ನಿಸಿ, ಹೈಕೋರ್ಟ್ ವಿಭಾಗೀಯ ಪೀಠದ ತಡೆಯಾಜ್ಞೆಯನ್ನು ರದ್ದುಪಡಿಸಿದೆ. ಇದರಿಂದ ಶಾಲಾ ಹಂತದಲ್ಲಿ ಪಬ್ಲಿಕ್ ಪರೀಕ್ಷೆ ನಡೆಯುತ್ತಿರುವಾಗಲೇ ಅರ್ಧಕ್ಕೆ ನಿಂತು ಹೋದಂತಾಗಿದ್ದು, ರಾಜ್ಯ ಸರ್ಕಾರದ ಶಾಲಾ ಶಿಕ್ಷಣ ಇಲಾಖೆಯಿಂದ ಉಳಿದ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿ ಸುತ್ತೋಲೆ ಹೊರಡಿಸಲಾಗಿದೆ. ಪಬ್ಲಿಕ್ ಪರೀಕ್ಷೆ ನಡೆಯುತ್ತಿದ್ದ ಶಾಲೆಗಳಲ್ಲಿ ಎಂದಿನಂತೆ ಶಾಲಾ ತರಗತಿ ನಡೆಸುವುದಕ್ಕೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ರಾಜ್ಯ ಸರಕಾರ ಮತ್ತೆ ಸುಪ್ರೀಂ ಕೋರ್ಟಿನಲ್ಲಿ ವಾದ ಮಂಡಿಸಲಿದ್ದು, ಪಬ್ಲಿಕ್ ಪರೀಕ್ಷೆ ನಡೆಸುವುದಕ್ಕೆ ಸ್ವಾಯತ್ತ ಅಧಿಕಾರ ಹೊಂದಿದ್ದೇವೆ ಎಂಬುದನ್ನು ಕೋರ್ಟಿಗೆ ಮನವರಿಕೆ ಮಾಡುವ ಸಾಧ್ಯತೆಯಿದೆ. ಪರೀಕ್ಷೆ ನಡೆಯುತ್ತಿರುವಾಗಲೇ ಸುಪ್ರೀಂ ಕೋರ್ಟ್ ತಡೆ ನೀಡಿರುವುದು ವಿದ್ಯಾರ್ಥಿಗಳು ಮತ್ತು ಶಾಲಾಡಳಿತಕ್ಕೆ ಗೊಂದಲಕ್ಕೀಡು ಮಾಡಿದೆ.
The Supreme Court on Tuesday (March 12) put on hold the Board Exams proposed to be held by the Karnataka Government for students of Classes 5, 8 and 9 of the schools affiliated to the State Board.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm