Dr Manjunath, JDS Devegowda, Kumarswami, DK Suresh: ಜೆಡಿಎಸ್ ಸರಿಯಿಲ್ಲ ಅಂತ ದೊಡ್ಡಗೌಡ್ರ  ಬುದ್ಧಿವಂತ ಅಳಿಯ ಬಿಜೆಪಿಯಿಂದ ನಿಲ್ತಿದ್ದಾರೆ ; ಡಿಕೆ ಸುರೇಶ್ ವ್ಯಂಗ್ಯ 

14-03-24 02:03 pm       Bangalore Correspondent   ಕರ್ನಾಟಕ

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಸಿ ಎನ್ ಮಂಜುನಾಥ್ ಅವರು ಅಚ್ಚರಿಯ ಅಭ್ಯರ್ಥಿ ಅಲ್ಲ, ಬದಲಾಗಿ ದೇವೇಗೌಡರ ಕುಟುಂಬದ ಮತ್ತೊಂದು ಭಾಗ ಎಂದು ಸಂಸದ ಡಿಕೆ ಸುರೇಶ್ ಟೀಕಿಸಿದ್ದಾರೆ.

ಬೆಂಗಳೂರು, ಮಾ.14: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಸಿ ಎನ್ ಮಂಜುನಾಥ್ ಅವರು ಅಚ್ಚರಿಯ ಅಭ್ಯರ್ಥಿ ಅಲ್ಲ, ಬದಲಾಗಿ ದೇವೇಗೌಡರ ಕುಟುಂಬದ ಮತ್ತೊಂದು ಭಾಗ ಎಂದು ಸಂಸದ ಡಿಕೆ ಸುರೇಶ್ ಟೀಕಿಸಿದ್ದಾರೆ. ಇದೇವೇಳೆ ದೇವೇಗೌಡರ ಮತ್ತು ಕುಮಾರಸ್ವಾಮಿ ಅವರ ಪಾರ್ಟಿ ಸರಿ ಇಲ್ಲವಂದು ಬುದ್ಧಿವಂತ ಅಳಿಯ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು, ಮಂಜುನಾಥ ಅವರ ರಾಜಕೀಯ ಪ್ರವೇಶದ ಬಗ್ಗೆ ನೀವು ಅವರನ್ನೇ ಕೇಳಬೇಕು . ಅವರ ರಾಜಕೀಯ ಪ್ರವೇಶದ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದು ಸಮಂಜಸ ಅಲ್ಲ ಎಂದರು.

It's Dr C N Manjunath vs D K Suresh in B'lore Rural

ಅವರ ರಾಜಕೀಯ ಪ್ರವೇಶವನ್ನು ಸ್ವಾಗತ ಮಾಡುತ್ತೇವೆ. ರಾಜಕಾರಣಿಯನ್ನು ರಾಜಕಾರಣದ ದೃಷ್ಟಿಯಿಂದ ನೋಡಬೇಕು. ಇದು ದೇವೇಗೌಡರ ಕುಟುಂಬದ ಮತ್ತೊಂದು ಭಾಗ. ದೇವೇಗೌಡರ ಕುಟುಂಬದ ಮತ್ತೊಂದು ಭಾಗ ಆಗಿರೋದ್ರಿಂದ ಅಚ್ಚರಿ ಅಭ್ಯರ್ಥಿ ಎಂದು ಹೇಳಲು ಆಗುವುದಿಲ್ಲ ಎಂದರು.

ದೇವೇಗೌಡರ ಕುಟುಂಬದ ಭಾಗ ಆಗಿರುವ ಮಂಜುನಾಥ್ ಬಿಜೆಪಿಯಲ್ಲಿ ಯಾಕೆ ಸ್ಪರ್ಧೆ ಎಂಬ ಪ್ರಶ್ನೆಗೆ,‌ ದೇವೇಗೌಡರ ಪಾರ್ಟಿ ಕುಮಾರಸ್ವಾಮಿ ಪಾರ್ಟಿ ಸರಿ ಇಲ್ಲ ಅಂತ ಬುದ್ಧಿವಂತ ಅಳಿಯ ತೀರ್ಮಾನ ಮಾಡಿದ್ದಾರೆ ಎಂದರು. ನಿಮ್ಮನ್ನು ಸೋಲಿಸೋಕೆ ವಿರೋಧಿಗಳೆಲ್ಲಾ ಒಂದಾಗಿದ್ದಾರಲ್ಲ ಎಂಬ ಪ್ರಶ್ನೆಗೆ, ಅವರಿಗೆಲ್ಲಾ ದೇವರು ಒಳ್ಳೆಯದು ಮಾಡಲಿ, ನೀವು ನನ್ನ ಪರ‌ ಇರಿ ಸಾಕು ಎಂದರು.

Dr Manjunath is contesting from BJP because of the dirty politics of devegowda and kumarswami slams DK Suresh