ಬ್ರೇಕಿಂಗ್ ನ್ಯೂಸ್
15-03-24 07:07 pm HK News Desk ಕರ್ನಾಟಕ
ದಾವಣಗೆರೆ, ಮಾ 15: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾಲ್ಗುಣದಿಂದಾಗಿ ರಾಜ್ಯದಲ್ಲಿ ಬರಗಾಲ ಬಂದಿದೆ. ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಿಂದ ಕೋಟಿಗಟ್ಟಲೆ ರೂಪಾಯಿ ಸಾಲ ಮಾಡುವುದರ ಜೊತೆಗೆ, ಅಭಿವೃದ್ಧಿಗೆ ಒಂದೇ ಒಂದು ರೂಪಾಯಿ ಹಣ ನೀಡಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.
ದಾವಣಗೆರೆಯಲ್ಲಿ ಸಂಸದ ಡಾ. ಜಿ. ಎಂ. ಸಿದ್ದೇಶ್ವರ ಅವರ ರಿಪೋರ್ಟ್ ಕಾರ್ಡ್ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪಾಕಿಸ್ತಾನ, ಅಫ್ಘಾನಿಸ್ತಾನದಿಂದ ಬಂದ ಹಿಂದೂಗಳು ರಸ್ತೆ ಬದಿಯಲ್ಲಿ ಬದುಕುತ್ತಿದ್ದಾರೆ. ಇದುವರೆಗೆ ಅವರಿಗೆ ಬದುಕುವ ಅವಕಾಶವನ್ನೇ ನೀಡಲಿಲ್ಲ. ಕಾಂಗ್ರೆಸ್ನವರಿಗೆ ಕರುಣೆಯೇ ಇಲ್ಲ. ಆದರೆ ಅವರಿಗೆ ಪೌರತ್ವವನ್ನು ಪ್ರಧಾನಿ ನರೇಂದ್ರ ಮೋದಿ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರದಿಂದಾಗಿ ವಿಧಾನಸೌಧದಲ್ಲೇ ಪಾಕಿಸ್ತಾನಕ್ಕೆ ಜೈಕಾರ ಹಾಕಿದ್ದರು. ಅವರಿಗೆ ಸರ್ಕಾರ ಬಿರಿಯಾನಿ ಕೊಟ್ಟು ಕಳುಹಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೆಸರಿನಲ್ಲೇ ರಾಮ ಇದ್ದಾನೆ ಎನ್ನುತ್ತಾರೆ. ಹಾಗೆಯೇ ವೀರಪ್ಪನ್ ಕೂಡ ದೇವರ ಹೆಸರು ಇಟ್ಟುಕೊಂಡಿದ್ದ. ದೇವರ ಹೆಸರು ಹೃದಯದಲ್ಲಿ ಇರಬೇಕು. ರಾಮಮಂದಿರ ಕಟ್ಟಿದರೂ ಕಾಂಗ್ರೆಸ್ ನಾಯಕರು ಅಲ್ಲಿಗೆ ಹೋಗಲಿಲ್ಲ. ಮೋದಿಯವರು ಇಲ್ಲದಿದ್ದರೆ ಮಂದಿರ ಕಟ್ಟಲು ಸಾಧ್ಯವಾಗುತ್ತಿರಲಿಲ್ಲ. ರಾಮನ ಹೆಸರಿನಿಂದ ಬೆಂಕಿ ಹೊತ್ತಿಕೊಳ್ಳುವುದಿಲ್ಲ. ಆದರೆ ದೀಪದ ಜ್ವಾಲೆ ಹೊತ್ತುತ್ತದೆ ಎಂದು ಅಶೋಕ್ ಹೇಳಿದರು.
ರಾಜ್ಯದಲ್ಲಿ ಕುಡಿಯಲು ನೀರು, ಗೋವುಗಳಿಗೆ ಮೇವು ಇಲ್ಲ. ಒಂದೇ ಒಂದು ಗೋಶಾಲೆಯನ್ನೂ ನಿರ್ಮಿಸಿಲ್ಲ. ಇನ್ನೂ ಐವತ್ತು ಗ್ಯಾರಂಟಿಗಳನ್ನು ಕಾಂಗ್ರೆಸ್ ನೀಡಲಿ. ಆದರೆ ಇವರು ಮಾಡಿರುವ ಸಾಲವನ್ನು ನಾವು ವಿರೋಧಿಸುತ್ತೇವೆ ಎಂದರು.
ಇಡೀ ಕರ್ನಾಟಕದಲ್ಲಿ ಅಭಿವೃದ್ಧಿಗೆ ಒಂದೇ ಒಂದು ರೂಪಾಯಿಯನ್ನು ಸರ್ಕಾರ ನೀಡಿಲ್ಲ. ಕಾಂಗ್ರೆಸ್ನ ಯೋಗ್ಯತೆಯಿಂದಾಗಿ ಬರಗಾಲ ಬಂದು ಜನರು ಟ್ಯಾಂಕರ್ಗಳ ಮೊರೆ ಹೋಗಿದ್ದಾರೆ. ಸರ್ಕಾರ ಪಾಪರ್ ಆಗಿ ಗತಿಗೆಟ್ಟಿದ್ದು, ಎಲ್ಲ ಕಡೆ ಸಾಲ ಮಾಡಿದ್ದಾರೆ. ಪ್ರತಿಯೊಬ್ಬರ ತಲೆ ಮೇಲೂ 97 ಸಾವಿರ ರೂಪಾಯಿ ಸಾಲವನ್ನು ಸಿಎಂ ಸಿದ್ದರಾಮಯ್ಯ ಮಾಡಿದ್ದಾರೆ. ಎಲ್ಲ ಜನರು ಸಾಲಗಾರರಾಗಿದ್ದಾರೆ. ಹೀಗೆಯೇ ಬಿಟ್ಟರೆ ಎರಡು ಲಕ್ಷ ಸಾಲ ಮಾಡಿ ಓಡಿ ಹೋಗುತ್ತಾರೆ. ಸಿಎಂ ಸಿದ್ದರಾಮಯ್ಯ ರಾಜಕೀಯ ನಿವೃತ್ತಿ ಪಡೆದು ಎಲ್ಲರನ್ನೂ ಹಳ್ಳಕ್ಕೆ ತಳ್ಳುತ್ತಾರೆ ಎಂದರು.
ಇವರು ಹೇಳುವ ಅನ್ನಭಾಗ್ಯ ವಾಸ್ತವದಲ್ಲಿ ಮೋದಿ ಭಾಗ್ಯವಾಗಿದೆ. ಒಂದು ಕಾಳು ಅಕ್ಕಿಯನ್ನೂ ಇವರು ನೀಡಿಲ್ಲ. ಮನೆ ಮನೆಗೆ ಕೊಳಾಯಿ ನೀರು ನೀಡುತ್ತೇವೆಂದು ಹೇಳಿದರೂ ಅದನ್ನು ಕೇಂದ್ರ ಸರ್ಕಾರದ ಜಲ ಜೀವನ್ ಮಿಷನ್ನಡಿ ನೀಡಲಾಗುತ್ತಿದೆ. ಕೋವಿಡ್ ಸಮಯದಲ್ಲಿ ಎಲ್ಲರಿಗೂ ಲಸಿಕಾಕರಣ ಮಾಡಿಸಲಾಯಿತು ಎಂದರು.
R Ashok slams CM Siddaramaiah says he's the reason for water crisis in Karnataka. Because of his leadership people of the state are facing drought. No water no goshala so far he added.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm