ಬ್ರೇಕಿಂಗ್ ನ್ಯೂಸ್
19-03-24 01:44 pm Bangalore Correspondent ಕರ್ನಾಟಕ
ಬೆಂಗಳೂರು ಮಾ 18: ನಗರತ್ಪೇಟೆಯಲ್ಲಿ ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲಿಸಾ ಹಾಡು ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ ನಗರದಲ್ಲಿಂದು ಹಿಂದೂಪರ ಸಂಘಟನೆಗಳು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದು, ಇದರಿಂದಾಗಿ ನಗರತ್ ಪೇಟೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಘಟನೆಗೆ ಖಂಡನೆ ವ್ಯಕ್ತಪಡಿಸಿರುವ ಹಿಂದೂಪರ ಸಂಘಟನೆಗಳು ಇಂದು ಹಲ್ಲೆಗೊಳಗಾದ ಯುವಕ ಮುಖೇಶ್ ಅಂಗಡಿಯಿಂದ ಭಾಗವಧ್ವಜದೊಂದಿಗೆ ಹನುಮಾನ್ ಚಾಲೀಸ ಪಠಣ ಮಾಡಿಕೊಂಡು ಶಾಂತಿಯುತ ಮೆರವಣಿಗೆಯಲ್ಲಿ ಹಮ್ಮಿಕೊಂಡಿದ್ದರು.
ಇದರಂತೆ ನೂರಾರು ಸಂಖ್ಯೆಯ ಹಿಂದೂಪರ ಕಾರ್ಯಕರ್ತರು ನಗರತ್ ಪೇಟೆಗೆ ಸೇರಿದ್ದರು. ಈ ಮೆರವಣಿಗೆಗೆ ಬಿಜೆಪಿ ನಾಯಕರಾದ ಸುರೇಶ್ ಕುಮಾರ್ ಹಾಗೂ ಶೋಭಾ ಕರಂದ್ಲಾಜೆ ಕೂಡ ಭಾಗಿಯಾಗಿದ್ದರು. ಆದರೆ, ಇದಕ್ಕೆ ಪೊಲೀಸರು ಅವಕಾಶ ನೀಡದ ಹಿನ್ನೆಲೆಯಲ್ಲಿ ಪೊಲೀಸರು ಹಾಗೂ ಹಿಂದೂಪರ ಸಂಘಟನೆಯ ಕಾರ್ಯಕರ್ತರೊಂದಿಗೆ ಮಾತಿನ ಚಕಮಕಿ ನಡೆಯಿತು.
ಇದೇ ವೇಳೆ ಪೊಲೀಸರು ಸುರೇಶ್ ಕುಮಾರ್ ಅವರನ್ನು ಎಳೆದಾಡಿದ ಬೆಳವಣಿಗೆ ಕೂಡ ಕಂಡು ಬಂದಿತು. ಪೊಲೀಸರ ಈ ಕ್ರಮದ ವಿರುದ್ಧ ಸುರೇಶ್ ಕುಮಾರ್ ಪ್ರತಿಭಟಿಸಿದರು.
ಬಳಿಕ ಪೊಲೀಸರು ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ಹಿಂದೂಪರ ಸಂಘಟನೆಗಳ ಕಾರ್ಯಕರ್ತರನ್ನು ವಶಕ್ಕೆ ಪಡೆದರು.
ಹಲ್ಲೆ ಮಾಡಿದ್ದ ಐವರು ಅರೆಸ್ಟ್ ;
ಅಂಗಡಿಯಲ್ಲಿ ಜೋರಾಗಿ ಸೌಂಡ್ ಇಟ್ಟು ಹನುಮಾನ ಚಾಲಿಸಾ ಹಾಡು ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ಮಾಡಲಾಗಿತ್ತು. ಹಲ್ಲೆ ಮಾಡಿದ್ದ ಐವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಗ್ಯಾಂಗ್ ಹಲ್ಲೆ ಮಾಡುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಇನ್ನು ಗಾಯಗೊಂಡ ಮುಖೇಶ್ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಯುವಕನ ದೂರಿನನ್ವಯ, ಹಲ್ಲೆ ಮಾಡಿದ್ದ ಸುಲೇಮಾನ್, ತರುಣ್, ಶನವಾಜ್, ರೋಹಿತ್, ಡ್ಯಾನಿಶ್ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 506, 504, 149, 307, 323 ಹಾಗೂ 324ರ ಅಡಿಯಲ್ಲಿ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
#WATCH | Karnataka: People protested in Bengaluru this morning following an altercation between a group of people and a shopkeeper during 'Azaan' time on Sunday.
— ANI (@ANI) March 19, 2024
The altercation occurred on 17th March when a shopkeeper played devotional songs near Siddanna Layout. pic.twitter.com/qtdjQwOmbf
Pro-Hindu organizations in the city have come out for a show of strength in connection with the incident in which a young man was attacked for singing Hanuman Chalisa in a mobile shop in Nagaratpet, resulting in a tense situation in Nagaratpet.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm