ಬ್ರೇಕಿಂಗ್ ನ್ಯೂಸ್
19-03-24 04:39 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.19: ಬಿಜೆಪಿ ಟಿಕೆಟ್ ತಪ್ಪಿದ್ದಕ್ಕೆ ಅತೃಪ್ತಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಮಂಗಳವಾರ ಪತ್ರಿಕಾಗೋಷ್ಠಿ ಕರೆದು ಎಲ್ಲ ವಿಚಾರಗಳನ್ನೂ ಹೇಳುವುದಾಗಿ ತಿಳಿಸಿದ್ದರು. ಆದರೆ ಪತ್ರಿಕಾಗೋಷ್ಠಿಯನ್ನು ದಿಢೀರ್ ರದ್ದುಗೊಳಿಸಿ ಮತ್ತೆ ಕುತೂಹಲ ಸೃಷ್ಟಿಸಿದ್ದಾರೆ.
ಕಾಂಗ್ರೆಸ್ ಸೇರುತ್ತಾರೆ ಎಂಬ ವದಂತಿಗಳ ನಡುವೆಯೇ ಸುದ್ದಿಗೋಷ್ಟಿ ಕರೆದು ತನ್ನ ಮುಂದಿನ ನಿಲುವನ್ನು ಹೇಳುತ್ತೇನೆ ಎಂದಿದ್ದರು. ಹೀಗಾಗಿ ಡೀವಿ ಪತ್ರಿಕಾಗೋಷ್ಠಿ ಬಗ್ಗೆ ಬಹಳಷ್ಟು ಕುತೂಹಲ ಉಂಟಾಗಿತ್ತು. ಮಾಜಿ ಮುಖ್ಯಮಂತ್ರಿ ಆಗಿದ್ದ ವ್ಯಕ್ತಿ ಕಾಂಗ್ರೆಸ್ ಸೇರುವ ಸುಳಿವು ಸಿಕ್ಕ ಬೆನ್ನಲ್ಲೇ ರಾಜ್ಯ ನಾಯಕರು ಅಲರ್ಟ್ ಆಗಿದ್ದು ಚರ್ಚೆಯನ್ನೂ ನಡೆಸಿದ್ದರು. ಇದೀಗ ಡೀವಿ ಸುದ್ದಿಗೋಷ್ಟಿ ರದ್ದುಗೊಳಿಸಿ ಮೌನಕ್ಕೆ ಶರಣಾಗಿದ್ದರಿಂದ ಬಿಜೆಪಿ ವರಿಷ್ಠರಿಂದ ಸಂದೇಶವೇನಾದರೂ ಬಂದಿದೆಯಾ ಎನ್ನುವ ಪ್ರಶ್ನೆ ಹುಟ್ಟಿಕೊಂಡಿದೆ.
ಸದಾನಂದ ಗೌಡ ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದ ಟಿಕೆಟ್ ನಿರೀಕ್ಷೆಯಲ್ಲಿದ್ದರು. ಆದರೆ ಅವರಿದ್ದ ಜಾಗಕ್ಕೆ ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡಿರುವುದು ಅಸಮಾಧಾನಕ್ಕೆ ಕಾರಣ. ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ ಸ್ಥಳೀಯ ಬಿಜೆಪಿ ಕಾರ್ಯಕರ್ತರಿಂದಲೇ ಶೋಭಾಗೆ ಟಿಕೆಟ್ ನೀಡುವುದಕ್ಕೆ ವಿರೋಧ ವ್ಯಕ್ತವಾಗಿತ್ತು. ಹಾಗಾಗಿ ಅವರನ್ನು ಕರೆತಂದು ಬೆಂಗಳೂರು ಉತ್ತರದಲ್ಲಿ ಟಿಕೆಟ್ ಕೊಡಲಾಗಿತ್ತು. ಆದರೆ ಟಿಕೆಟ್ ಘೋಷಣೆ ಸಂದರ್ಭದಲ್ಲಿ ತನಗೇನೂ ಅಸಮಾಧಾನ ಇಲ್ಲ, ಪಕ್ಷ ತನಗೆ ಎಲ್ಲವನ್ನೂ ಕೊಟ್ಟಿದೆ ಎಂದು ಹೇಳಿದ್ದ ಸದಾನಂದ ಗೌಡ, ಸೋಮವಾರ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದು ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಈ ಬಗ್ಗೆ ವರಿಷ್ಠರ ಜೊತೆಗೆ ಚರ್ಚೆ ನಡೆಸಲು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಂಗಳವಾರ ಬೆಳಗ್ಗೆ ದೆಹಲಿಗೆ ತೆರಳಿದ್ದಾರೆ. ಇದೇ ಕಾರಣಕ್ಕೆ ಸದಾನಂದ ಗೌಡ ಸದ್ಯ ಯಾವುದೇ ನಿರ್ಧಾರವನ್ನು ಪ್ರಕಟಿಸದೆ ಇರಲು ತೀರ್ಮಾನಿಸಿದ್ದಾರೆ.
ಡೀವಿ ಬಗ್ಗೆ ಸಿಎಂ- ಡಿಸಿಎಂ ಭಿನ್ನ ನಿಲುವು
ಇತ್ತ ಸದಾನಂದ ಗೌಡ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಭಿನ್ನ ನಿಲುವು ಹೊಂದಿದ್ದಾರೆ. ಬೆಂಗಳೂರು ಉತ್ತರ ಕ್ಷೇತ್ರವೋ, ಚಿಕ್ಕಬಳ್ಳಾಪುರ ಅಥವಾ ಮೈಸೂರು ಕ್ಷೇತ್ರವೋ ಎಂಬ ಬಗ್ಗೆ ಕಾಂಗ್ರೆಸ್ ಒಳಗಡೆ ಚರ್ಚೆ ನಡೆಯುತ್ತಿದೆ. ಆದರೆ ಈ ವಿಚಾರದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಮಧ್ಯೆ ಇನ್ನೂ ಒಮ್ಮತದ ಅಭಿಪ್ರಾಯ ಮೂಡಿಬಂದಿಲ್ಲ. ಮತ್ತೊಂದೆಡೆ ಮೈಸೂರು ಕ್ಷೇತ್ರದ ಟಿಕೆಟ್ ನೀಡುವುದನ್ನು ಸಿದ್ದರಾಮಯ್ಯ ತಳಿಹಾಕಿದ್ದಾರೆ ಎನ್ನಲಾಗಿದೆ.
ಇದೇ ವೇಳೆ, ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಇನ್ನೂ ಸಮರ್ಥ ಅಭ್ಯರ್ಥಿ ದೊರಕಿಲ್ಲ. ಈ ಕ್ಷೇತ್ರದಿಂದ ಸ್ಪರ್ಧಿಸಲು ಪ್ರಿಯಾ ಕೃಷ್ಣ ಇನ್ನೂ ಸಮ್ಮತಿ ಸೂಚಿಸಿಲ್ಲ. ಪ್ರಿಯಾ ಕೃಷ್ಣ ಒಪ್ಪದೆ ಹೋದರೆ ಸದಾನಂದ ಗೌಡರಿಗೆ ಟಿಕೆಟ್ ನೀಡುವ ಬಗ್ಗೆ ಕಾಂಗ್ರೆಸ್ ವಲಯದಲ್ಲಿ ಚರ್ಚೆಯಿದೆ. ಅಂತಿಮವಾಗಿ ಪಕ್ಷದ ಹೈಕಮಾಂಡ್ ಈ ಕುರಿತು ತೀರ್ಮಾನ ಕೈಗೊಳ್ಳಲಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಇದಲ್ಲದೆ, ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸೇರಿದ್ದ ಜಗದೀಶ್ ಶೆಟ್ಟರ್ ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಮತ್ತೆ ಬಿಜೆಪಿ ಸೇರ್ಪಡೆಯಾಗಿದ್ದು ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ಉಂಟುಮಾಡಿತ್ತು. ಇದೇ ವಿಚಾರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ಹೊರಹಾಕಿದ್ದರು. ಈ ಬಗ್ಗೆಯೂ ಕಾಂಗ್ರೆಸ್ ನಾಯಕರ ಒಳಗೆ ಸಂಘ ಪರಿವಾರ ಹಿನ್ನೆಲೆಯ ಸದಾನಂದ ಗೌಡರನ್ನು ಸೇರಿಸಿಕೊಳ್ಳುವ ವಿಚಾರದಲ್ಲಿ ಚರ್ಚೆ ನಡೆದಿದೆ.
Former Chief Minister D V Sadananda Gowda, who is unhappy with being denied a BJP ticket, on Tuesday said that he will hold a press conference and explain everything. However, the press conference was abruptly cancelled and curiosity was created again.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm