ಬ್ರೇಕಿಂಗ್ ನ್ಯೂಸ್
28-11-20 12:14 am Bangalore Correspondent ಕರ್ನಾಟಕ
ಬೆಂಗಳೂರು, ನವೆಂಬರ್ 27: ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ರಾಜಕೀಯ ಕಾರ್ಯದರ್ಶಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸದಾಶಿವನಗರ ಪೊಲೀಸರು ಭೇಟಿ ನೀಡಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ರಾಜಕೀಯ ಕಾರ್ಯದರ್ಶಿ ಎನ್. ಆರ್. ಸಂತೋಷ್ ಶುಕ್ರವಾರ ರಾತ್ರಿ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನ ನಡೆಸಿದ್ದಾರೆ. ಎಂ.ಎಸ್. ರಾಮಯ್ಯ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ನಿದ್ರೆ ಮಾತ್ರೆಯನ್ನು ಸೇವಿಸಿರುವ ಎನ್. ಆರ್. ಸಂತೋಷ್ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ. ಎಂ. ಎಸ್. ರಾಮಯ್ಯ ಆಸ್ಪತ್ರೆಯ ವೈದ್ಯರು ಚಿಕಿತ್ಸೆಯನ್ನು ಮುಂದುವರೆಸಿದ್ದಾರೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಆಸ್ಪತ್ರೆಗೆ ಆಗಮಿಸಿದ್ದಾರೆ.

ಎನ್. ಆರ್. ಸಂತೋಷ್ ಹಲವು ವರ್ಷಗಳಿಂದ ಯಡಿಯೂರಪ್ಪ ಆಪ್ತ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು. 2020ರ ಮೇ 28ರಂದು ಅವರನ್ನು ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿತ್ತು. ಶುಕ್ರವಾರ ಸಂಜೆ 7.30ರ ಸುಮಾರಿಗೆ ಮನೆಯಲ್ಲಿ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. 8 ಗಂಟೆ ಸುಮಾರಿಗೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದಾಶಿವ ನಗರ ಪೊಲೀಸರು ಮನೆಗೆ ಸಹ ಭೇಟಿ ನೀಡಿದ್ದು, ಡೆತ್ ನೋಟ್ ಬರೆದಿದ್ದಾರೆಯೇ? ಎಂದು ಪರಿಶೀಲನೆ ನಡೆಸುತ್ತಿದ್ದಾರೆ.
ಘಟನೆಗೆ ಕಾರಣ ತಿಳಿದಿಲ್ಲ; "ನಿನ್ನೆ ಮದುವೆ ಮನೆಯಲ್ಲಿ ಚೆನ್ನಾಗಿದ್ದ. ಘಟನೆಗೆ ಕಾರಣ ತಿಳಿದಿಲ್ಲ. ಸಂತೋಷ್ ಆರಾಮಾಗಿ ಇದ್ದಾನೆ, ಚಿಕಿತ್ಸೆ ಸಿಗುತ್ತಿದೆ" ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.
Chief Minister of Karnataka B. S. Yediyurappa's political secretary NR Santosh attempts for Suicide by consuming sleeping pills.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 04:36 pm
HK News Staffer
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm