ಬ್ರೇಕಿಂಗ್ ನ್ಯೂಸ್
22-03-24 05:01 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 22: ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ಮಂಡ್ಯದಲ್ಲಿ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರಿಗೆ ಭಾರೀ ಹಿನ್ನಡೆಯಾಗಿದೆ. ಹೌದು, ಮಂಡ್ಯ ಭಾಗದ ಜೆಡಿಎಸ್ ನ ಮಾಜಿ ಮೂವರು ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಮಾಜಿ ಎಂಎಲ್ ಸಿ ಮರಿ ತಿಬ್ಬೇಗೌಡ, ಮಾಜಿ ಶಾಸಕ ಎಂ. ಶ್ರೀನಿವಾಸ್, ಮಾಜಿ ಎಂಎಲ್ ಸಿ ಅಪ್ಪಾಜಿ ಗೌಡ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಪಕ್ಷ ಸೇರ್ಪಡೆಯಾದರು.
ಇದೇ ಸಂದರ್ಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿ, ಮರಿತಿಬ್ಬೇಗೌಡಗೆ ಬಹಳ ದಿನಗಳಿಂದ ಗಾಳ ಹಾಕ್ತಾ ಇದ್ದೆ, ಆದರೆ ಸಿಕ್ಕಿರಲಿಲ್ಲ. ಇವಾಗ ಅವರು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಜೆಡಿ ಎಸ್ ಗೆ ದೊಡ್ಡ ಅಡಿಪಾಯ ಆಗಿದ್ದವರು ಮರಿತಿಬ್ಬೇಗೌಡರು ಎಂದರು.


ಜನತಾ ದಳ ಗೊಂದಲದ ಗೂಡಾಗಿದೆ. ಅದಕ್ಕೆ ಯಾವುದೇ ಶರತ್ತು ಇಲ್ಲದೆ ಕಾಂಗ್ರೆಸ್ ಗೆ ಸೇರ್ಪಡೆ ಆಗಿದ್ದಾರೆ. ಎಂ ಶ್ರೀನಿವಾಸ್ ಆರೋಗ್ಯ ಸರಿ ಇಲ್ಲದ ಕಾರಣದಿಂದ ಪತ್ರ ಬರೆದು ಪಕ್ಷ ಸೇರ್ಪಡೆಗೆ ಸಮ್ಮತಿ ಸೂಚಿಸಿದ್ದಾರೆ ಎಂದು ತಿಳಿಸಿದರು.
ಪಕ್ಷ ಸೇರ್ಪಡೆಯಾದ ಮರಿ ತಿಬ್ಬೇಗೌಡ ಮಾತನಾಡಿ, ಮೈಸೂರು ಚಾಮರಾಜನಗರ, ಹಾಸನ ಮಂಡ್ಯ ಜಿಲ್ಲೆಗಳಿಂದ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ನಾಲ್ಕು ಬಾರಿ ಆಯ್ಕೆ ಆಗಿದ್ದೇನೆ. ಶಿಕ್ಷಕ ಸಮುದಾಯದ ಹಾಗೂ ಜನರ ಹಿತದೃಷ್ಟಿಯಿಂದ ಜಾತ್ಯತೀತ ನಿಲುವಿನೊಂದಿಗೆ ಕೆಲಸ ಮಾಡಿದ್ದೇನೆ ಎಂದರು.
ಕಾರ್ಯಕ್ರಮದಲ್ಲಿ ಸಚಿವ ಚಲುವರಾಯಸ್ವಾಮಿ, ರಣದೀಪ್ ಸಿಂಗ್ ಸುರ್ಜೇವಾಲ, ಬಿಕೆ ಹರಿಪ್ರಸಾದ್, ಸಲೀಂ ಅಹ್ಮದ್ ಮತ್ತಿತರರು ಉಪಸ್ಥಿತರಿದ್ದರು
ಈ ಬಾರಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಮಂಡ್ಯದಲ್ಲಿ ಚುನಾವಣಾ ತಯಾರಿ ನಡೆಸುತ್ತಿದೆ. ಜೆಡಿಎಸ್ ಮತ್ತು ಹಾಲಿ ಸಂಸದ ಸುಮಲತಾ ಇಬ್ಬರೂ ಈ ಕ್ಷೇತ್ರಕ್ಕೆ ಪಟ್ಟು ಹಿಡಿದಿರುವುದರಿಂದ ಟಿಕೆಟ್ ಘೋಷಣೆ ವಿಳಂಬವಾಗುತ್ತಿದೆ. ಇದೇ ಹೊತ್ತಿನಲ್ಲಿ ಮೂವರು ಮುಖಂಡರು ಕಾಂಗ್ರಸ್ ಗೆ ಸೇರ್ಪಡೆಯಾಗುವ ಮೂಲಕ ಜೆಡಿಎಸ್ ಗೆ ಶಾಕ್ ನೀಡಿದ್ದಾರೆ.
Three former JDS MLAs from Mandya join congress, JDS in trouble including Marithibbegowda.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm