ಬ್ರೇಕಿಂಗ್ ನ್ಯೂಸ್
22-03-24 05:10 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.22: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಪತ್ನಿ ಗೀತಾ ಪರ ಪ್ರಚಾರ ನಡೆಸುತ್ತಿರುವ ಸ್ಯಾಂಡಲ್ವುಡ್ ನಟ ಶಿವರಾಜ್ ಕುಮಾರ್ ನಟಿಸಿರುವ ಸಿನಿಮಾಗಳಿಗೆ ನಿರ್ಬಂಧ ಹೇರುವಂತೆ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.
ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜ್ ಕುಮಾರ್ ಸ್ಪರ್ಧಿಸುತ್ತಿದ್ದಾರೆ. ಅವರ ಪರವಾಗಿ ಶಿವರಾಜ್ ಕುಮಾರ್ ಪ್ರಚಾರ ಕಾರ್ಯದಲ್ಲಿ ಸಕ್ರಿಯರಾಗಿ ತೊಡಗಿಸಿದ್ದಾರೆ. ಜನರ ಬಳಿ ಹೋಗಿ ಬಿರುಸಿನಿಂದ ಮತಬೇಟೆ ಮಾಡುತ್ತಿರುವ ಬೆನ್ನಲ್ಲೇ, ಬಿಜೆಪಿಯ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾವು ಅವರ ವಿರುದ್ಧ ದೂರು ನೀಡಿದೆ.
ನಟ ಶಿವರಾಜ್ ಕುಮಾರ್ ತನ್ನ ಪತ್ನಿಯ ಪರ ಚುನಾವಣಾ ಪ್ರಚಾರ ಮಾಡುತ್ತಿರುವುದರಿಂದ ಅವರು ನಟಿಸಿರುವ ಸಿನಿಮಾ, ಜಾಹೀರಾತುಗಳನ್ನು ಸದ್ಯದ ಮಟ್ಟಿಗೆ ನಿಷೇಧ ಮಾಡಬೇಕು. ಯಾವುದನ್ನೂ ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸಬೇಕು, ಅವರು ತಮ್ಮ ಚಿತ್ರಗಳ ಮೂಲಕ ಜನರಿಗೆ ಪ್ರಭಾವ ಬೀರುತ್ತಾರೆ ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ದೂರಿನಲ್ಲಿ ಬಿಜೆಪಿ ಹೇಳಿದೆ.
ಪತ್ನಿ ಗೀತಾಗೆ ಬೆಂಬಲ ನೀಡಿರುವ ಶಿವರಾಜ್ ಕುಮಾರ್ ಕಾಂಗ್ರೆಸ್ ಸಭೆಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಅಲ್ಲದೆ, ಕಾಂಗ್ರೆಸ್ ನಾಯಕರೊಂದಿಗೆ ಆಗಾಗ್ಗೆ ಕಾಣಿಸಿಕೊಳ್ಳುತ್ತಿದ್ದಾರೆ. ಶಿವರಾಜ್ ಕುಮಾರ್ ತಮ್ಮ ಜನಪ್ರಿಯತೆ ಹಾಗೂ ಚಲನಚಿತ್ರಗಳಿಂದ ಮತದಾರರ ಮೇಲೆ ಪ್ರಭಾವ ಬೀರಲಿದ್ದಾರೆ. ದೂರದರ್ಶನ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಶಿವರಾಜ್ ಕುಮಾರ್ ನಟನೆಯ ಚಿತ್ರ ಪ್ರಸಾರಕ್ಕೆ ತಡೆ ನೀಡುವಂತೆ ಮನವಿ ಮಾಡಲಾಗಿದೆ.
Campaign for wife Geeta, BJP complains Election Commission to ban movies of actor Shivraj Kumar.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm