ಬ್ರೇಕಿಂಗ್ ನ್ಯೂಸ್
24-03-24 05:31 pm Mangaluru Correspondent ಕರ್ನಾಟಕ
ಬೆಂಗಳೂರು, ಮಾ.24: ಉಡುಪಿ - ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಕನ್ನಡ ಬಿಟ್ಟರೆ, ಹಿಂದಿ ಇಂಗ್ಲಿಷ್ ಬರಲ್ಲ, ಅವರಿಗೆ ಮತ ಹಾಕಬೇಡಿ ಎಂಬ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಹೇಳಿಕೆ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಅಲ್ಲದೆ, "ಆಪರೇಷನ್ ಕಮಲ ನಡೆಯುತ್ತಿದ್ದು, ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂಪಾಯಿ ಆಫರ್ ಮಾಡಲಾಗಿದೆ" ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿರುದ್ಧವೂ ಬಿಜೆಪಿಯಿಂದ ದೂರು ನೀಡಲಾಗಿದೆ. ಶಾಸಕ ಸುರೇಶ್ ಕುಮಾರ್ ನೇತೃತ್ವದಲ್ಲಿ ದೂರು ನೀಡಲಾಗಿದ್ದು, ಬಿಜೆಪಿ ಮುಖ್ಯ ವಕ್ತಾರ ಅಶ್ವತ್ಥ ನಾರಾಯಣ, ವಕ್ತಾರ ಪ್ರಕಾಶ್ ಕೋಣೆಮನೆ, ಕಾನೂನು ಪ್ರಕೋಷ್ಠದ ಸಂಚಾಲಕ ವಸಂತ್ ಕುಮಾರ್ ಜತೆಗಿದ್ದರು. ಜಯಪ್ರಕಾಶ್ ಹೆಗ್ಡೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ದೂರಿನಲ್ಲಿ ಉಲ್ಲೇಖಿಸಿದೆ.

ಮಾ.22ರಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಯವರು ಬ್ರಹ್ಮಾವರದಲ್ಲಿ ತಮ್ಮ ಚುನಾವಣಾ ಪ್ರಚಾರದ ವೇಳೆ "ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಕನ್ನಡ ಬಿಟ್ಟರೆ ಹಿಂದಿ ಅಥವಾ ಇಂಗ್ಲಿಷ್ ಬರುವುದಿಲ್ಲ. ಅವರನ್ನು ಆಯ್ಕೆ ಮಾಡಿದರೆ ದೆಹಲಿಯಲ್ಲಿ ಕೆಲಸಗಳಾಗುವುದಿಲ್ಲ" ಎಂದಿದ್ದರು. ಈ ಬಗ್ಗೆ "ಕೋಟಗೆ ಹಿಂದಿ, ಇಂಗ್ಲಿಷ್ ಬರಲ್ಲ, ಗೆಲ್ಲಿಸಬೇಡಿ" ಎಂಬ ಶೀರ್ಷಿಕೆಯಡಿ ಪತ್ರಿಕೆಯಲ್ಲಿ ಸುದ್ದಿ ಪ್ರಕಟವಾಗಿತ್ತು. ಸದರಿ ಹೇಳಿಕೆಯು ಭಾಷಾ ಸಾಮರಸ್ಯವನ್ನು ಹದಗೆಡಿಸುವ ಹಾಗೂ ಕನ್ನಡಿಗರ ಅಸ್ಮಿತೆಗೆ ಧಕ್ಕೆ ತರುವುದಲ್ಲದೆ ಪ್ರಾದೇಶಿಕ ಭಾಷೆಯ ಬಗ್ಗೆ ಅವಮಾನಕರ ಹೇಳಿಕೆಯಾಗಿರುತ್ತದೆ. ಆದ್ದರಿಂದ ಭಾಷೆಯ ಹೆಸರಿನಲ್ಲಿ ಮತ ಯಾಚಿಸಿ ಪ್ರತಿಸ್ಪರ್ಧಿಯನ್ನು ಗೆಲ್ಲಿಸಬೇಡಿ ಎಂದು ಹೇಳಿಕೆ ನೀಡುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಜಯಪ್ರಕಾಶ್ ಹೆಗ್ಡೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ದೂರಿನಲ್ಲಿ ಹೇಳಿದೆ.
The Opposition BJP in Karnataka has filed a formal complaint with Election Commission of India against Congress candidate from Udupi-Chikkamagaluru constituency K Jayaprakash Hegde for his reported appeal to voters not to support his BJP rival Kota Srinivas Poojary on the grounds that he does not know English and Hindi languages.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm